Homeಕರೋನಾ ತಲ್ಲಣ2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಒಮೈಕ್ರಾನ್ ಪ್ರಕರಣಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಜೊತೆಗೆ ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ 2 ಡೋಸ್ ಲಸಿಕೆ ಪಡೆದುಕೊಂಡ ನಾಗರಿಕರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶುಕ್ರವಾರ ಹೇಳಿದೆ.

ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾದ ನಂತರ ತಜ್ಞರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

“ಮುಂದಿನ ಆದೇಶದವರೆಗೆ ಕೇವಲ 500 ಜನರಿಗೆ ಮಾತ್ರ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದು. ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಮಾತ್ರ ಪ್ರವೇಶ ನೀಡಲಾಗುವುದು” ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ಹೊಸ ವರ್ಷಾಚರಣೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ ಆರ್‌. ಅಶೋಕ್‌, ಮುಂದಿನ ಬೆಳವಣಿಗೆಗಳನ್ನು ಅವಲೋಕಿಸಿದ ನಂತರ ಸರ್ಕಾರ ಸೂಕ್ತ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ಹೆಚ್ಚು ಕ್ಲಸ್ಟರ್‌ಗಳು ಬೆಳಕಿಗೆ ಬರುತ್ತಿರುವುದರಿಂದ, ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳು ಸರ್ಕಾರ ನಿಷೇಧಿಸಿದೆ. ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳನ್ನು ಜನವರಿ 15, 2022 ರವರೆಗೆ ಮುಂದೂಡಲು ಶಾಲೆಗಳು ಮತ್ತು ಕಾಲೇಜುಗಳಿಗೆ ಆದೇಶ.

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

ಇದನ್ನೂ ಓದಿ:ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ವಿಮಾನ ನಿಲ್ದಾಣಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರಯಾಣಿಕರ ಕಡ್ಡಾಯ ಪರೀಕ್ಷೆ. ಅವರ ಪರೀಕ್ಷಾ ವರದಿ ಬಂದ ನಂತರವೇ ಪ್ರಯಾಣಿಕರು ಅಲ್ಲಿಂದ ಹೊರಬರುವುದಕ್ಕೆ ಅವಕಾಶ.

ಈ ನಡುವೆ ಓಮೈಕ್ರಾನ್‌‌ ಪಾಸಿಟಿವ್‌ ಆಗಿದ್ದ 66 ವರ್ಷದ ವಿದೇಶಿ ಪ್ರಜೆಯೊಬ್ಬರು ತಪ್ಪಿಸಿಕೊಂಡಿದ್ದಾರೆ ಪೊಲೀಸರಿಗೆ ದೂರು ನೀಡಲಾಗಿದೆ.

“ವ್ಯಕ್ತಿ ತಂಗಿದ್ದ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆದ ತಪ್ಪುಗಳ ಬಗ್ಗೆ ಎಂದು ಪೊಲೀಸರು ತನಿಖೆ ನಡೆಸುತ್ತಾರೆ” ಎಂದು ಅಶೋಕ್ ಹೇಳಿದರು.

ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಕೊರೊನಾ ಹಾಸಿಗೆಗಳನ್ನು ಮತ್ತೊಮ್ಮೆ ತೆರೆಯಲಾಗುತ್ತದೆ. ಆಕ್ಸಿಜನ್ ಪ್ಲಾಂಟ್‌ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಸರಿಪಡಿಸಿ ಸಿದ್ಧವಾಗಿ ಇಡಲಾಗುವುದು ಎಂದು ಆರ್.ಅಶೋಕ್ ತಿಳಿಸಿದ್ದಾರೆ.

“ಆಮ್ಲಜನಕದ ಲಭ್ಯತೆಯನ್ನು ಈ ಹಿಂದೆ ರಚಿಸಲಾದ ಸಮಿತಿಗಳು ಮೇಲ್ವಿಚಾರಣೆ ಮಾಡುತ್ತವೆ. ಕೋವಿಡ್ ನಿಯಂತ್ರಣ ಕೊಠಡಿಗಳನ್ನು ರಾಜ್ಯಾದ್ಯಂತ ಮತ್ತೆ ಪುನರಾರಂಭಿಸಲಾಗುವುದು. ಕೋವಿಡ್ ಔಷಧಿಗಳ ಕೊರತೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು, ಲಸಿಕೆಗಳು ಮತ್ತು ಔಷಧಿಗಳನ್ನು ಮುಂಚಿತವಾಗಿ ಖರೀದಿಸಲಾಗುವುದು” ಎಂದು ಆರ್‌. ಅಶೋಕ್‌ ಹೇಳಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

0
ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ...