Homeಮುಖಪುಟಕರ್ತವ್ಯದ ವೇಳೆ ಅಪಘಾತ: ಪಬ್ಲಿಕ್ ಟಿವಿ ವರದಿಗಾರನ ದುರ್ಮರಣ

ಕರ್ತವ್ಯದ ವೇಳೆ ಅಪಘಾತ: ಪಬ್ಲಿಕ್ ಟಿವಿ ವರದಿಗಾರನ ದುರ್ಮರಣ

- Advertisement -
- Advertisement -

ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಹನುಮಂತು ಎಂಬುವವರು ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಮರಣ ಹೊಂದಿದ್ದಾರೆ.

ರಾಮನಗರದ ವಿಚಾರಣಾಧೀನ ಖೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸುವ ವಿಚಾರಕ್ಕೆ ಸಂಭಂದಿಸಿದಂತೆ ವರದಿ ಮಾಡಿ ವಾಪಸ್‌ ತೆರಳುತ್ತಿದ್ದಾಗ ಅವರ ಬೈಕಿಗೆ ಹಿಂದಿನಿಂದ ಎಟಿಎಂ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ್ದಾರೆ.

ಹನುಮಂತುರವರ ದುರ್ಮರಣಕ್ಕೆ ಬಹಳಷ್ಟು ಸಹೋದ್ಯೋಗಿಗಳು, ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಸಹ ಕಂಬನಿ ಮಿಡಿದಿದ್ದಾರೆ.

ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ ಎಂದು ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ನನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು.ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು.ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ.ಕರ್ತವ್ಯ ನಿರ್ವಹಣೆ ವೇಳೆ ಪ್ರಾಣತೆತ್ತ ಹನುಮಂತು ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಎಚ್‌ಡಿಕೆ ತಿಳಿಸಿದ್ದಾರೆ.

ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.ಅವರ…

Posted by H D Kumaraswamy on Tuesday, April 21, 2020

ರಾಮನಗರದ ಪಬ್ಲಿಕ್‌ ಟಿವಿ ವರದಿಗಾರ ಹನುಮಂತು ಅವರ ಅಕಾಲಿಕ ಮರಣ ದುಃಖ ತಂದಿದೆ. ಸದಾ ಕ್ರಿಯಾಶೀಲ, ಉತ್ಸಾಹಿ, ದಿಟ್ಟ ಪತ್ರಕರ್ತರಾಗಿದ್ದ ಅವರು ಪ್ರಾಮಾಣಿತೆಯನ್ನು ನಂಬಿದ್ದರು. ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ. ಕುಟುಂಬಕ್ಕೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ಸಿಇಟಿ, ಎನ್‌ಇಟಿ, ನೀಟ್ ಇತ್ಯಾದಿ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್ 

also read: Goa and Manipur become Coronavirus-Free States

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...