Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...