Homeಕರ್ನಾಟಕಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್‌‌ ದೃಷ್ಟಿಯಲ್ಲಿ ಹಿಂದೂ ಆಗಲು ರೇಪ್ ಮಾಡಬೇಕಾ?: ಸಿದ್ದರಾಮಯ್ಯ ಪ್ರಶ್ನೆ

ಆರೆಸ್ಸೆಸ್ಸನ್ನು ಪ್ರಶ್ನೆ ಮಾಡಿದರೆ BJP ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಆರೆಸ್ಸೆಸ್ಸ್ ಅನ್ನು ಪ್ರಶ್ನೆ ಮಾಡಿದರೆ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುವುದು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದು, ಆರೆಸ್ಸೆಸ್‌‌ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಎಂದು ಕೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು, ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

“ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳು ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ” ಎಂದು ಅವರು ಕೇಳಿದ್ದಾರೆ.

“ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದೂಗಳೆಲ್ಲ ಒಂದು ಎಂದು ಕಂಠ ಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ?
ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?” ಎಂದು ಅವರು ಹೇಳಿದ್ದಾರೆ.

“ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಆರ್.ಎಸ್.ಎಸ್ ನಾಯಕರೇ ಹೇಳಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ” ಎಂದು ಸವಾಲೆಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮ್ಮ ಕಾಂಗ್ರೆಸ್ ಸರಿ ಇದ್ದಿದ್ದರೆ ಬಿಜೆಪಿ, ಆರ್‌ಎಸ್‌ಎಸ್ ಈ ಮಟ್ಟಕ್ಕೆ ಯಾಕೆ ಬೆಳೆಯುತ್ತಿತ್ತು.
    ಹುಳುಕು ನಿಮ್ಮ ಪಕ್ಷದಲ್ಲೇ ಇದೆ.

  2. Congress,App, all leftists..are bad
    ..so BJP is better than all anti communals,divide nature’s,guts less ,afraid of particular community for vote Bank, RSS is better than all these goonda patriotism.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...