Homeಕರ್ನಾಟಕಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು...

ಅಂಬೇಡ್ಕರ್‌ ಅವರಿಗೆ ನಿಂದಿಸಿದ ಆರೋಪ: ಸಿಮ್ಸ್ ನಿರ್ದೇಶಕನ ಮೇಲೆ ಕಪ್ಪು ಮಸಿ ಎರಚಿ ದಾಳಿ; ದೂರು ಪ್ರತಿದೂರು ದಾಖಲು

- Advertisement -
- Advertisement -

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ದೂರು ನೀಡಿದ್ದಾರೆ.

ಡಾ.ಬಿ.ಆರ್​ ಅಂಬೇಡ್ಕರ್‌ ಅವರಿಗೆ ಅವಮಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅಂಬೇಡ್ಕರ್ ಅಭಿಮಾನಿಗಳು, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿ ಅವರ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಮೇ 18ರಂದು ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಡಾ.ಸಂಜೀವ್ ಅವರು ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಮದ್ಮನಿ ಸಾಹೂ ಅವರು, ”ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರತಿಭಟನಾಕಾರರ ವಿರುದ್ಧ ಡಾ. ಸಂಜೀವ್ ರೆಡ್ಡಿ ಪ್ರತಿದೂರು ದಾಖಲು

”ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ನಿರ್ದೇಶಕ ಡಾ. ಸಂಜೀವ್ ರೆಡ್ಡಿ ಅವರು, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

“ಸಿಮ್ಸ್ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಈ ದೂರಿನ ಪ್ರತಿಯು ಅಂಬೇಡ್ಕರ್ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್ ನಿರ್ದೇಶಕರ ಡಾ. ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಈ ಹಿಂದೆ ಜೈನ್‌ ವಿಶ್ವವಿದ್ಯಾಲಯದಲ್ಲೂ ಅಂಬೇಡ್ಕರ್‌ಗೆ ಅವಮಾನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಏಳು ವಿದ್ಯಾರ್ಥಿಗಳು ಸೇರಿ ಕಿರು ನಾಟಕ ಪ್ರದರ್ಶಿಸಿದ್ದರು.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿತ್ತು.

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...