Homeಮುಖಪುಟನಕಲಿ ಎನ್‌ಕೌಂಟರ್ | "ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ" : ಸುಪ್ರೀಂ...

ನಕಲಿ ಎನ್‌ಕೌಂಟರ್ | “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ” : ಸುಪ್ರೀಂ ಕೋರ್ಟ್

- Advertisement -
- Advertisement -

ಅಸ್ಸಾಂನ ‘ನಕಲಿ ಎನ್‌ಕೌಂಟರ್‌’ ಗಳ ವಿರುದ್ದ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಸುಪ್ರೀಂ ಕೋರ್ಟ್ ಪೀಠ, “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಡಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಟೀಕಿಸಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠದ ಭಾಗವಾದ ನ್ಯಾಯಮೂರ್ತಿ ಭುಯಾನ್ ಅವರು ಗೌಹಾಟಿ ಹೈಕೋರ್ಟ್‌ ಆದೇಶದ ವಿರುದ್ಧ ಸಲ್ಲಿಸಲಾಗಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆ ನಡೆಸಿದ್ದಾರೆ.

ಅರ್ಜಿದಾರರು ನಕಲಿ ಎನ್‌ಕೌಂಟರ್‌ಗಳ ಬಗ್ಗೆ ತನಿಖೆ ನಡೆಸಲು ಕೋರಿ ಗೌಹಾಟಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ, ಅವರ ಮನವಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಪ್ರತಿ ಪ್ರಕರಣದಲ್ಲೂ ರಾಜ್ಯದ ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಆಪಾದಿತ ಘಟನೆಗಳ ಬಗ್ಗೆ ಪ್ರತ್ಯೇಕ ತನಿಖೆ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಪ್ರಕರಣ ಸಂಬಂಧ ಅಫಿಡವಿಟ್ ಸಲ್ಲಿಸಲು ಅಸ್ಸಾಂ ಸರ್ಕಾರಕ್ಕೆ ಸಮಯ ನೀಡಿರುವ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ವೇಳೆ, ನಕಲಿ ಎನ್‌ಕೌಂಟರ್‌ಗಳ ಕುರಿತ ತನಿಖೆಗೆ ನ್ಯಾಯಾಲಯ ಆಯೋಗ ರಚಿಸಲು ಉದ್ದೇಶಿಸಿರುವುದನ್ನು ನ್ಯಾಯಮೂರ್ತಿ ಕಾಂತ್ ಅವರು ಪುನರುಚ್ಚರಿಸಿದ್ದಾರೆ. ಆಯೋಗಕ್ಕೆ ನೇಮಕ ಮಾಡಲು ನಿವೃತ್ತ ನ್ಯಾಯಾಧೀಶರ ಹೆಸರನ್ನು ಸೂಚಿಸಲು ಕಕ್ಷಿದಾರಿಗೆ ಕೋರಿದ್ದಾರೆ.

ಒಂದು ಹಂತದಲ್ಲಿ, ಅಸ್ಸಾಂನ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಳಿನ್ ಕೊಹ್ಲಿ ಅವರು, ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಯಾವುದೇ ಪೊಲೀಸ್ ಸಿಬ್ಬಂದಿಗೆ ಬಡ್ತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಭುಯಾನ್ ಅವರು “ಆರೋಪಿಗಳು ಸುಖಾ ಸುಮ್ಮನೆ ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಲ್ಲಿ ಒಳ್ಳೆಯದಲ್ಲ” ಎಂದಿದ್ದಾರೆ.

ಅಸ್ಸಾಂನ ವಕೀಲರಾದ ಆರಿಫ್ ಎಂಡಿ ಯಾಸಿನ್ ಜ್ವಾಡ್ಡರ್ ಅವರು, ಅಸ್ಸಾಂನಲ್ಲಿ ರಾಜ್ಯ ಪೊಲೀಸರು ನಡೆಸಿದ ಎನ್‌ಕೌಂಟರ್ ವಿಷಯವನ್ನು ಪ್ರಸ್ತಾಪಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೇ 2021ರಿಂದ (ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರ ವಹಿಸಿಕೊಂಡಾಗಿಂದ) ಅಸ್ಸಾಂ ಪೊಲೀಸರು ಮತ್ತು ವಿವಿಧ ಪ್ರಕರಣಗಳ ಆರೋಪಿಗಳ ನಡುವೆ 80ಕ್ಕೂ ಹೆಚ್ಚು ನಕಲಿ ಎನ್‌ಕೌಂಟರ್‌ಗಳು ನಡೆದಿವೆ ಎಂದು ಆರೋಪಿಸಿರುವ ಅರ್ಜಿದಾರರು, ಸಿಬಿಐ, ಎಸ್‌ಐಟಿ ಅಥವಾ ಇತರ ರಾಜ್ಯಗಳ ಪೊಲೀಸ್ ತಂಡದಂತಹ ಸ್ವತಂತ್ರ ಏಜೆನ್ಸಿಯಿಂದ ಈ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

ಅರ್ಜಿ ಸಂಬಂಧ, ಕಳೆದ ವರ್ಷದ ಜುಲೈ 17ರಂದು ಅಸ್ಸಾಂ ಸರ್ಕಾರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಅಸ್ಸಾಂ ಮಾನವ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಈ ವರ್ಷದ ಏಪ್ರಿಲ್‌ನಲ್ಲಿ, ಅರ್ಜಿದಾರರು ಕೆಲವು ಹೆಚ್ಚುವರಿ ಮಾಹಿತಿಗಳನ್ನು ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಅವರು ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಸಂತ್ರಸ್ತರ ಅಫಿಡವಿಟ್‌ಗಳನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗ್ತಿದೆ. ಈ ಪ್ರಕರಣದಲ್ಲಿ ಮೂವರು ವ್ಯಕ್ತಿಗಳು (ದೀಪಜ್ಯೋತಿ ನಿಯೋಗ್, ಬಿಸ್ವನಾಥ್ ಬರ್ಗೋಹೈನ್ ಮತ್ತು ಮನೋಜ್ ಬುರಾಗೊಹೈನ್) ಪೊಲೀಸ್ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಇಬ್ಬರು ಬಲಿಪಶುಗಳ ಕುಟುಂಬ ಸದಸ್ಯರು, ಅಂದರೆ. ಬಿಸ್ವನಾಥ್ ಮತ್ತು ಮನೋಜ್‌ನ ಕುಟುಂಬಸ್ಥರು ಇಬ್ವರು ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಲು ಮುಂದಾಗಿದ್ದರು. ಆದರೆ, ಅವರು ನಿಷೇಧಿತ ಉಗ್ರಗಾಮಿ ಸಂಘಟನೆ ಉಲ್ಫಾಗೆ ಸೇರಲು ತೆರಳಿದ್ದಾರೆ ಎಂದು ಒಪ್ಪಿಕೊಳ್ಳದ ಹೊರತು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಸ್ಥಳೀಯರ ಪೊಲೀಸರು ನಿರಾಕರಿಸಿದ್ದಾರೆ. ಎನ್‌ಕೌಂಟರ್ ಬಳಿಕ ಸಂತ್ರಸ್ತರ ಮೇಲೆಯೇ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಅಸ್ಸಾಂನ ಧೋಲ್ಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಹಾಜರಿದ್ದರು. ಅವರ ಪಿಸ್ತೂಲ್ ಅನ್ನು ಸಂತ್ರಸ್ತೆ ದೀಪಜ್ಯೋತಿ ನಿಯೋಗ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಿರುವಾಗ, ಅದೇ ಪೊಲೀಸ್ ಅಧಿಕಾರಿ ತನ್ನನ್ನೇ ಪ್ರಕರಣದ ತನಿಖಾಧಿಕಾರಿಯಾಗಿ ನೇಮಿಸಿಕೊಂಡಿದ್ದಾರೆ ಎಂದು ಅರ್ಜಿದಾರ ನ್ಯಾಯಾಲಯಕ್ಕೆ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...