Homeಮುಖಪುಟಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ತಮಿಳುನಾಡು ಮಾಜಿ ಎಡಿಜಿಪಿ ರಾಜೇಶ್ ದಾಸ್‌ಗೆ 3ವರ್ಷ ಜೈಲು...

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ತಮಿಳುನಾಡು ಮಾಜಿ ಎಡಿಜಿಪಿ ರಾಜೇಶ್ ದಾಸ್‌ಗೆ 3ವರ್ಷ ಜೈಲು ಶಿಕ್ಷೆ

- Advertisement -
- Advertisement -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ರಾಜೇಶ್ ದಾಸ್ ಅವರನ್ನು ತಮಿಳುನಾಡು ನ್ಯಾಯಾಲಯ ಶುಕ್ರವಾರ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಇಂದು ವಿಧಿಸಿ ಆದೇಶ ಹೊರಡಿಸಿದೆ.

ಮಾಜಿ ಎಡಿಜಿಪಿ ರಾಜೇಶ್ ದಾಸ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 10,000ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ. 2021ರ ಆರಂಭದಲ್ಲಿ ನೀಡಿದ ದೂರಿನ ಪ್ರಕಾರ, ಅವರು ಕಿರಿಯ ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಫೆಬ್ರವರಿ 21, 2021ರಲ್ಲಿ ಹಿರಿಯ ಅಧಿಕಾರಿ ರಾಜೇಶ್ ದಾಸ್ ವಿರುದ್ಧ ದೂರು ದಾಖಲಿಸಿದ್ದರು. ರಾಜೇಶ್ ದಾಸ್ ಅವರು ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಅವರ ಭದ್ರತೆಗಾಗಿ ಕರ್ತವ್ಯದ ಮೇಲೆ ಹೋಗುತ್ತಿದ್ದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪದಲ್ಲಿ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿಗೆ ವಿಲ್ಲುಪುರಂ ನ್ಯಾಯಾಲಯವು ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ; ಪೋಕ್ಸೊ ಕೈಬಿಡಲು ಶಿಫಾರಸು

ಮಾಜಿ ಎಡಿಜಿಪಿ ರಾಜೇಶ್ ದಾಸ್ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯಿದೆ, 1998 ರ ಹಲವು ವಿಭಾಗಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಎಐಎಡಿಎಂಕೆ ಸರ್ಕಾರ ದಾಸ್ ಅವರನ್ನು ಅಮಾನತುಗೊಳಿಸಿತ್ತು. ಅಂದಿನ ಸರ್ಕಾರ ತನಿಖೆಗಾಗಿ ಆರು ಸದಸ್ಯರ ಸಮಿತಿಯನ್ನು ರಚಿಸಿತ್ತು. ಪ್ರಾಸಿಕ್ಯೂಷನ್ ಪೊಲೀಸ್ ಸಿಬ್ಬಂದಿ ಸೇರಿದಂತೆ 68 ಜನರ ಹೇಳಿಕೆಗಳನ್ನು ದಾಖಲಿಸಿದೆ. ರಾಜೇಶ್ ದಾಸ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು, ತಕ್ಷಣದ ಜಾಮೀನು ಪಡೆಯಬಹುದು ಎಂದು ಪ್ರಾಸಿಕ್ಯೂಷನ್ ತಂಡದ ಸದಸ್ಯರೊಬ್ಬರು ಹೇಳಿದರು.

ಈ ವಿಷಯವು 2021ರಲ್ಲಿ ಚುನಾವಣಾ ವಿಷಯವಾಗಿ ಮಾರ್ಪಟ್ಟಿತ್ತು ಮತ್ತು ಆಗಿನ ವಿರೋಧ ಪಕ್ಷದ ನಾಯಕ ಎಂಕೆ ಸ್ಟಾಲಿನ್ ನಾವು ಅಧಿಕಾರಕ್ಕೆ ಬಂದರೆ ಈ ಬಗ್ಗೆ ಸರಿಯಾದ ಕ್ರಮವನ್ನು ಕೈಗೊಳ್ಳಲಾಗುವುದು ಮತ್ತು ಶಿಕ್ಷೆಯನ್ನು ನೀಡಲಾಗುವುದು ಭರವಸೆ ನೀಡಿದ್ದರು.

2021ರಲ್ಲಿ, ಮದ್ರಾಸ್ ಹೈಕೋರ್ಟ್ ಈ ವಿಷಯದ ಬಗ್ಗೆ ಸ್ವಯಂ ಮೋಟೋ ಸೂಚನೆಯನ್ನು ತೆಗೆದುಕೊಂಡಿತು. ಈ ಪ್ರಕರಣ ತಮಿಳುನಾಡು ಪೊಲೀಸ್ ಪಡೆಗಳಲ್ಲಿನ ಮಹಿಳಾ ಅಧಿಕಾರಿಗಳಿಗೆ ”ಆಘಾತಕಾರಿ” ವಿಚಾರವಾಗಿದೆ ಎಂದು ವಿವರಿಸಿತು.

ನ್ಯಾಯಾಲಯವು ಈ ಘಟನೆಯನ್ನು ತೀವ್ರವಾಗಿ ಖಂಡಿಸಿತು ಮತ್ತು ತನಿಖೆಯ ಮೇಲ್ವಿಚಾರಣೆಯ ಅಗತ್ಯವಿರುವ ಅಸಾಧಾರಣ ಪ್ರಕರಣವೆಂದು ಗುರುತಿಸಿದೆ. ನ್ಯಾಯಾಲಯದ ನಿರ್ದೇಶನವನ್ನು ಅನುಸರಿಸಿ, ತಮಿಳುನಾಡು ಸರ್ಕಾರವು ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...