Homeಕರ್ನಾಟಕಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

- Advertisement -
- Advertisement -

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ.ಜಿ.ಎಂ.ಸಂಜೀವ್ ವಿರುದ್ಧ ತನಿಖೆ ನಡೆಸಲು ಸಮಿತಿ ರಚಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ.

ಡೀನ್‌ ಸಂಜೀವ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಕೋರಿ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ್ದ ಸಿದ್ದರಾಮಯ್ಯ ಅವರು, ಆರೋಪಗಳ ಬಗ್ಗೆ ಪರಿಶೀಲಿಸಿ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ ಅವರಿಗೆ ಸೂಚನೆ ನೀಡಿದ್ದರು.

ತಕ್ಷಣವೇ ತನಿಖೆಗೆ ಕ್ರಮ ವಹಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ ಸಿಂಗ್ ಅವರಿಗೆ ವಂದಿತ ಶರ್ಮಾ ಸೂಚಿಸಿದ್ದರು. ನವೀನ್‌ ಸಿಂಗ್ ಅವರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ.ರವಿ ಮತ್ತು ಮುಖ್ಯ ಆಡಳಿತಾಧಿಕಾರಿ ಕೆ.ಎ.ಉಮಾ ಅವರನ್ನೊಳಗೊಂಡ ತನಿಖಾ ಸಮಿತಿ ರಚನೆ ಮಾಡಿದ್ದಾರೆ.

“ಸಮಿತಿಯು ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಚಾಮರಾಜನಗರ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ತಕ್ಷಣವೇ ಭೇಟಿ ನೀಡಿ ಪರಿಶೀಲಿಸಬೇಕು. ಕೂಡಲೇ ವರದಿ ನೀಡಬೇಕು” ಎಂದು ನವೀನ್ ರಾಜ್ ಸಿಂಗ್ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪರಿಶಿಷ್ಟರ ಮತಬುಟ್ಟಿಗೆ ಕೈಹಾಕಿ ಬಿಜೆಪಿ ಎಡವಿದ್ದೆಲ್ಲಿ?

“ಸಿಮ್ಸ್‌ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ.ಗಿರೀಶ್ ಮತ್ತು ಡಾ.ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ನ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ.ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಅಂಬೇಡ್ಕರ್‌ ಕುರಿತು ಅವಹೇಳನ ಮಾಡಿರುವ ಸಂಬಂಧ ದೂರು ದಾಖಲಾಗಿರುವುದು ಅಂಬೇಡ್ಕರ್‌ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ತಿಳಿದ ಬಳಿಕ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಿಮ್ಸ್‌ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದರು.

ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್‌ ನಿರ್ದೇಶಕರ ಡಾ. ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು. ಬಳಿಕ ಎರಡೂ ಕಡೆಯಿಂದ ದೂರು ಪ್ರತಿದೂರು ದಾಖಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮಹಿ ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್ ಪಕ್ಷವು...