Homeಮುಖಪುಟಜಾಮೀನು ಪಡೆದು ಹೊರಬಂದು ಸಂತ್ರಸ್ತೆಯನ್ನೆ ಹತ್ಯೆಗೈದ ಅತ್ಯಾಚಾರ ಆರೋಪಿ

ಜಾಮೀನು ಪಡೆದು ಹೊರಬಂದು ಸಂತ್ರಸ್ತೆಯನ್ನೆ ಹತ್ಯೆಗೈದ ಅತ್ಯಾಚಾರ ಆರೋಪಿ

- Advertisement -
- Advertisement -

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆರೋಪಿಯೊಬ್ಬ ಜಾಮೀನು ಪಡೆದು, ಜೈಲಿನಿಂದ ಹೊರಬಂದು ಸಂತ್ರಸ್ತೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಒಡಿಶಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಒಡಿಶಾದ ಸುಂದರ್‌ಘಡ್‌ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುನು ಕಿಸಾನ್ ಎಂಬಾತನನ್ನು ಬಂಧಿಸಲಾಗಿತ್ತು.  

ಆರೋಪಿಯು ಇತ್ತೀಚೆಗೆ ಜಾಮೀನು ಪಡೆದು, ಜೈಲಿನಿಂದ ಬಿಡುಗಡೆಯಾಗಿದ್ದ. ತಾನು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಉದ್ದೇಶಕ್ಕಾಗಿ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಜಾರ್ಸುಗುಡಾದಲ್ಲಿ ಅಪಹರಿಸಿ, ರೂರ್ಕೆಲಾದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಕೆಯ ಮೃತದೇಹವನ್ನ ತುಂಡರಿಸಿ ನದಿಗೆ ಬಿಸಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಪೋಷಕರು ತಮ್ಮ ಮಗಳು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು. ವಿಚಾರಣೆ ವೇಳೆ, ಆರೋಪಿಯ ಮೇಲೆ ಅನುಮಾನಗೊಂಡ ಪೊಲೀಸರು ಹಲವೆಡೆ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಬಾಲಕಿಯನ್ನು ಆರೋಪಿ ಅಪಹರಿಸಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಬಳಿಕ, ಆರೋಪಿಯನ್ನು ವಿಚಾರಣೆ ಒಳಪಡಿಸಲಾಗಿದ್ದು, ತಾನೇ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಬಾಲಕಿಯ ಮೃತದೇಹವನ್ನು ತುಂಡರಿಸಿ, ಬ್ರಹ್ಮಿಣಿ ನದಿ ಮತ್ತು ಹನುಮಾನ್ ಬಾಟಿಕಾ-ತಾರಕೇರಾ ಜಲಾಶಯದ ಬಳಿ ಎಸೆರುವುದಾಗಿ ಹೇಳಿದ್ದಾನೆ. ಆ ಪ್ರದೇಶಗಳಲ್ಲಿ ಶೋಧ ನಡೆಸಿದ್ದು, ಬಾಲಕಿಯ ಮೃಹದೇಹ ಭಾಗಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಟೆಕ್ಕಿ ಆತ್ಮಹತ್ಯೆ ಪ್ರಕರಣ: ‘ನನ್ನನ್ನು ಮೃಗದಂತೆ ನಡೆಸಿಕೊಂಡರು..’ ಎಂದು ಪತಿ ವಿರುದ್ಧ ದೂರು ನೀಡಿದ್ದ ಪತ್ನಿ

ಟೆಕ್ಕಿ ಆತ್ಮಹತ್ಯೆ ಪ್ರಕರಣ: ‘ನನ್ನನ್ನು ಮೃಗದಂತೆ ನಡೆಸಿಕೊಂಡರು..’ ಎಂದು ಪತಿ ವಿರುದ್ಧ ದೂರು ನೀಡಿದ್ದ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...