ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮನಿಂದೆಯ ಆರೋಪ ಕೇಳಿಬಂದಿರುವುದಕ್ಕೆ ಬುಧವಾರ ಎಂಟು ಚರ್ಚ್‌ಗಳನ್ನು ಸುಟ್ಟುಹಾಕಲಾಗಿದೆ ಮತ್ತು ಹಲವಾರು ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ.
ಫೈಸಲಾಬಾದ್ ಜಿಲ್ಲೆಯ ಜರನ್‌ವಾಲಾ ಪಟ್ಟಣದಲ್ಲಿ ಇಬ್ಬರು ಕ್ರಿಶ್ಚಿಯನ್ ವ್ಯಕ್ತಿಗಳು ಕುರಾನ್‌ನ ಪುಟಗಳನ್ನು ಹರಿದು ನೆಲದ ಮೇಲೆ ಎಸೆದಿದ್ದಾರೆ ಮತ್ತು ಇತರ ಕೆಲವು ಪುಟಗಳ ಬಗ್ಗೆ ಅವಮಾನಕರವಾಗಿ ಟೀಕೆ ಮಾಡಿದ್ದಾರೆ ಎಂದು ಕೆಲವು ಮುಸ್ಲಿಮರು ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಬಳಿಕ ಹಿಂಸಾಚಾರ ನಡೆದಿದೆ.
ಮುಸ್ಲಿಂ ಸಮುದಾಯದ ಗುಂಪೊಂದು ಪಟ್ಟಣದ ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಮನೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿತು. ಜನಸಮೂಹದಿಂದ ತಪ್ಪಿಸಿಕೊಳ್ಳಲು ಅಲ್ಪಸಂಖ್ಯಾತ ಸಮುದಾಯದ ಕೆಲವು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.
ಈ ಬಗ್ಗೆ ಸೆಂಟರ್ ಫಾರ್ ಸೋಶಿಯಲ್ ಜಸ್ಟೀಸ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಯಾಸಿರ್ ತಾಲಿಬ್ ಮಾಹಿತಿ ನೀಡಿದ್ದು, ”ಜರನ್‌ವಾಲಾದಲ್ಲಿನ ಕ್ಯಾಥೋಲಿಕ್ ಚರ್ಚ್, ಸಾಲ್ವೇಶನ್ ಆರ್ಮಿ ಚರ್ಚ್ ಮತ್ತು ಪೆಂಟೆಕೋಸ್ಟಲ್ ಚರ್ಚ್‌ಗಳನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಲಾಯಿತು. ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯ ಕೆಲವು ಮನೆಗಳಿಗೂ ಬೆಂಕಿ ಹಚ್ಚಲಾಗಿದೆ” ಎಂದು ಹೇಳಿದರು.
Protesters in Pakistan's Punjab province attack and set fire to one church and damage two others after blasphemy allegations. Caretaker PM says “stern action would be taken against those who violate law” pic.twitter.com/ZZmK69UDHV
— TRT World Now (@TRTWorldNow) August 16, 2023
This is not the teaching of Islam… #Jaranwala pic.twitter.com/3jLOPG3vSX
— Haider Saeed (@haidersaeedpti) August 16, 2023
ಚರ್ಚ್‌ಗಳಿಗೆ ಬೆಂಕಿ ಹಚ್ಚಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆ ವೀಡಿಯೊಗಳಲ್ಲಿ ಚರ್ಚ್ ಕಟ್ಟಡಗಳಿಂದ ಹೊಗೆ ಏರುತ್ತಿರುವುದನ್ನು ತೋರಿಸಿದೆ ಮತ್ತು ಜನರು ಅಲ್ಲಿಯ ಪೀಠೋಪಕರಣಗಳಿಗೆ ಬೆಂಕಿ ಹಚ್ಚಿತ್ತಿರುವುದನ್ನು ಕಾಣಬಹುದು.
ಪೊಲೀಸರು ಈ ಹಿಂಸಾಚಾರ ನಡೆಯುತ್ತಿರುವುದನ್ನು ನೋಡುತ್ತಾ ಸುಮ್ಮನೇ ನಿಂತಿದ್ದರು. ಹಿಂಸಾಚಾರ ತಡೆಯು ಪ್ರಯತ್ನ ಮಾಡಲಿಲ್ಲ. ಆದರೆ ಕೆಲವೆಡೆ ಗುಂಪನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಪ್ರಹಾರ ನಡೆಸಿದರು.
ಇದನ್ನೂ ಓದಿ: ಬೆತ್ತಲೆ ವಿಡಿಯೋಗಾಗಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಮಾರಿದ RSS ಹಿನ್ನಲೆಯ DRDO ನಿರ್ದೇಶಕನ ಮೇಲೆ ಚಾರ್ಜ್ ಶೀಟ್


