Homeಮುಖಪುಟಧರ್ಮನಿಂದನೆ ಆರೋಪ: ಪಾಕ್‌ನಲ್ಲಿ ಎಂಟು ಚರ್ಚ್‌ ಸೇರಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಗುಂಪು

ಧರ್ಮನಿಂದನೆ ಆರೋಪ: ಪಾಕ್‌ನಲ್ಲಿ ಎಂಟು ಚರ್ಚ್‌ ಸೇರಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಗುಂಪು

- Advertisement -
- Advertisement -

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮನಿಂದೆಯ ಆರೋಪ ಕೇಳಿಬಂದಿರುವುದಕ್ಕೆ ಬುಧವಾರ ಎಂಟು ಚರ್ಚ್‌ಗಳನ್ನು ಸುಟ್ಟುಹಾಕಲಾಗಿದೆ ಮತ್ತು ಹಲವಾರು ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ಫೈಸಲಾಬಾದ್ ಜಿಲ್ಲೆಯ ಜರನ್‌ವಾಲಾ ಪಟ್ಟಣದಲ್ಲಿ ಇಬ್ಬರು ಕ್ರಿಶ್ಚಿಯನ್ ವ್ಯಕ್ತಿಗಳು ಕುರಾನ್‌ನ ಪುಟಗಳನ್ನು ಹರಿದು ನೆಲದ ಮೇಲೆ ಎಸೆದಿದ್ದಾರೆ ಮತ್ತು ಇತರ ಕೆಲವು ಪುಟಗಳ ಬಗ್ಗೆ ಅವಮಾನಕರವಾಗಿ ಟೀಕೆ ಮಾಡಿದ್ದಾರೆ ಎಂದು ಕೆಲವು ಮುಸ್ಲಿಮರು ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಬಳಿಕ ಹಿಂಸಾಚಾರ ನಡೆದಿದೆ.

ಮುಸ್ಲಿಂ ಸಮುದಾಯದ ಗುಂಪೊಂದು ಪಟ್ಟಣದ ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಮನೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿತು. ಜನಸಮೂಹದಿಂದ ತಪ್ಪಿಸಿಕೊಳ್ಳಲು ಅಲ್ಪಸಂಖ್ಯಾತ ಸಮುದಾಯದ ಕೆಲವು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಈ ಬಗ್ಗೆ ಸೆಂಟರ್ ಫಾರ್ ಸೋಶಿಯಲ್ ಜಸ್ಟೀಸ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಯಾಸಿರ್ ತಾಲಿಬ್ ಮಾಹಿತಿ ನೀಡಿದ್ದು, ”ಜರನ್‌ವಾಲಾದಲ್ಲಿನ ಕ್ಯಾಥೋಲಿಕ್ ಚರ್ಚ್, ಸಾಲ್ವೇಶನ್ ಆರ್ಮಿ ಚರ್ಚ್ ಮತ್ತು ಪೆಂಟೆಕೋಸ್ಟಲ್ ಚರ್ಚ್‌ಗಳನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಲಾಯಿತು. ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯ ಕೆಲವು ಮನೆಗಳಿಗೂ ಬೆಂಕಿ ಹಚ್ಚಲಾಗಿದೆ” ಎಂದು ಹೇಳಿದರು.

ಚರ್ಚ್‌ಗಳಿಗೆ ಬೆಂಕಿ ಹಚ್ಚಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆ ವೀಡಿಯೊಗಳಲ್ಲಿ ಚರ್ಚ್ ಕಟ್ಟಡಗಳಿಂದ ಹೊಗೆ ಏರುತ್ತಿರುವುದನ್ನು ತೋರಿಸಿದೆ ಮತ್ತು ಜನರು ಅಲ್ಲಿಯ ಪೀಠೋಪಕರಣಗಳಿಗೆ ಬೆಂಕಿ ಹಚ್ಚಿತ್ತಿರುವುದನ್ನು ಕಾಣಬಹುದು.

ಪೊಲೀಸರು ಈ ಹಿಂಸಾಚಾರ ನಡೆಯುತ್ತಿರುವುದನ್ನು ನೋಡುತ್ತಾ ಸುಮ್ಮನೇ ನಿಂತಿದ್ದರು. ಹಿಂಸಾಚಾರ ತಡೆಯು ಪ್ರಯತ್ನ ಮಾಡಲಿಲ್ಲ. ಆದರೆ ಕೆಲವೆಡೆ ಗುಂಪನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಪ್ರಹಾರ ನಡೆಸಿದರು.

ಇದನ್ನೂ ಓದಿ: ಬೆತ್ತಲೆ ವಿಡಿಯೋಗಾಗಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಮಾರಿದ RSS ಹಿನ್ನಲೆಯ DRDO ನಿರ್ದೇಶಕನ ಮೇಲೆ ಚಾರ್ಜ್ ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...