Homeಮುಖಪುಟವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್...

ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

DIG ಜೆ. ರವೀಂದ್ರ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಅವರನ್ನು ಕಳೆದ ವಾರ ವಿವಾದಾತ್ಮಕವಾಗಿ ಹತ್ಯೆಗೈದಿರುವ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿದ ವಿಶೇಷ ತನಿಖಾ ತಂಡದ (SIT) ಸದಸ್ಯರೊಬ್ಬರು 13 ವರ್ಷಗಳ ಹಿಂದೆ ನಕಲಿ ಎನ್‌ಕೌಂಟರ್‌ನಲ್ಲಿ  ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಂದ ಆರೋಪ ಎದುರಿಸುತ್ತಿದ್ದಾರೆ.

DIG ಜೆ. ರವೀಂದರ್ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

2007 ರ ಎನ್‌ಕೌಂಟರ್‌ನಲ್ಲಿ ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಕೊಲ್ಲಲ್ಪಟ್ಟಿದ್ದರು. ಇದರ ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ನಂತರ ಸಿಬಿಐ ಗೌಡ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸರ್ಕಾರವು ಕಾನೂನು ಕ್ರಮ ಜರುಗಿಸಲು ಅನುಮತಿಯನ್ನು ತಡೆಹಿಡಿದಿತ್ತು. ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವು ಅನುಮತಿ ನೀಡಿಲ್ಲ.

“ಇಂತಹ ಅಧಿಕಾರಿಯನ್ನು ಮೂರು ಸದಸ್ಯರ ಉನ್ನತ ಮಟ್ಟದ SITಯಲ್ಲಿ ಏಕೆ ಸೇರಿಸಬೇಕು. ನಕಲಿ ಎನ್ಕೌಂಟರ್ ನಿಂದ ಕಳಂಕಿತರಾದವರನ್ನು, ನಕಲಿ ಎನ್ಕೌಂಟರ್ ಎಂದು ಆರೋಪಿಸಿ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಮತ್ತೊಂದು ಪ್ರಕರಣದಲ್ಲಿ ತನಿಖೆ ಮಾಡಲು ಸೇರಿಸಿದ್ದಾರೆ ಎಂಬುದು ನಿಜವಾಗಿಯೂ ಆಘಾತಕಾರಿ” ಎಂದು ಹೈಕೋರ್ಟ್‌ನ ಹಿರಿಯ ವಕೀಲ ಐ.ಬಿ. ಸಿಂಗ್ ಹೇಳಿದ್ದಾರೆ.

ಜುಲೈ 31 ರೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ SIT ಗೆ ಕೋರಲಾಗಿದೆ. ಆದರೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಅವರೊಂದಿಗೆ ಈ ಮೇಲಿನ ಆರೋಪ ಹೊತ್ತಿರುವ ಗೌಡ್ ಸೇರ್ಪಡೆ ಅನುಮಾನಗಳನ್ನು ಹುಟ್ಟುಹಾಕಿದೆ.

2005 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಗೌಡ್, ಜೂನ್ 30, 2007 ರಂದು ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಮುಕುಲ್ ಗುಪ್ತಾ ಅವರ ನಕಲಿ ಎನ್‌ಕೌಂಟರ್‌ನಲ್ಲಿನ ಪಾತ್ರಕ್ಕಾಗಿ ಅಪಖ್ಯಾತಿಗೆ ಗುರಿಯಾಗಿದ್ದರು. ಈ ಅಧಿಕಾರಿ ಕೇವಲ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು.

ಗುಪ್ತಾ ಅವರ ತಂದೆ ಬ್ರಿಜೇಂದ್ರ ಗುಪ್ತಾ ತಮ್ಮ ಮುಗ್ಧ ಮಗನಿಗೆ ನಡೆದ ಅನ್ಯಾಯದ ವಿರುದ್ಧ ಹೋರಾಡಲು ನಿರ್ಧರಿಸಿದ್ದರು. ಸಿಬಿಐ ತನಿಖೆಗಾಗಿ ಅಲಹಾಬಾದ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅವರ ಮನವಿಯನ್ನು ಕೋರ್ಟ್ ಅಂಗೀಕರಿಸಿತು. ಇದರಲ್ಲಿ ಗೌಡ್ ಸೇರಿದಂತೆ 10 ಪೊಲೀಸರನ್ನು ಆಗಸ್ಟ್ 26, 2014 ರಂದು ಚಾರ್ಜ್ ಶೀಟ್ ಮಾಡಲಾಗಿತ್ತು. ಆಘಾತಕಾರಿ ಸಂಗತಿಯೆಂದರೆ, ಗುಪ್ತಾ ಅವರ ಹೆತ್ತವರನ್ನು ಒಂದು ವರ್ಷದ ನಂತರ, ಏಪ್ರಿಲ್ 2015 ರಲ್ಲಿ ಕೊಲ್ಲಲಾಯಿತು. ಈ ಕೊಲೆಗಳ ಬಗ್ಗೆಯೂ ತನಿಖೆ ಪೂರ್ಣಗೊಂಡಿಲ್ಲ.

ಇಷ್ಟೆಲ್ಲಾ ಆರೋಪಗಳನ್ನು ಎದುರಿಸುತ್ತಿರುವ ಪೋಲಿಸರನ್ನು, ತನಿಖೆ ನಡೆಸುವ ತಂಡದಲ್ಲಿ ಸೇರಿಸಿರುವುದರ ಕುರಿತು ಸರ್ಕಾರ ಮತ್ತು ಅಧಿಕಾರಿಗಳು ಮೌನ ವಹಿಸಿದ್ದಾರೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...