Homeಕರ್ನಾಟಕನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

- Advertisement -
- Advertisement -

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬಂದಿತ್ತು. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿತ್ತು. ಕೂಡಲೇ ಸಚಿವರು ಕೆಎಎಸ್‌ಡಿಎಲ್ ಎಂಡಿ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಸಚಿವರ ಮಾಹಿತಿ ನಂತರ ನಕಲಿ ಜಾಲದ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ನಕಲಿ ಸೋಪ್ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿದೆ ಎಂದು ತಿಳಿದು ಬಂದಿತ್ತು. ಅದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ರೂಪಾಯಿಯ ಸೋಪ್ ಆರ್ಡರ್ ಕೊಟ್ಟಿದ್ದರು. ನಕಲಿ ತಯಾರಕರು ಅದನ್ನು ಪೂರೈಸುವುದಾಗಿ ಒಪ್ಪಿಕೊಂಡಿದ್ದರು. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಅದಕ್ಕೆ ನಕಲಿ ತಯಾರಕರು ಒಪ್ಪಿದ್ದರು. ನಕಲಿ ಸೋಪ್ ಉತ್ಪಾದನಾ ಘಟಕದ ವಿಳಾಸ ತಿಳಿದ ತಕ್ಷಣ ಅಲ್ಲಿಗೆ ದಾಳಿ ಮಾಡಿ ನಕಲಿ ಸೋಪ್ ಮತ್ತು ಅದನ್ನು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೈಸೂರು ಸ್ಯಾಂಡಲ್ ಸೋಪ್ ಸೇಲ್ಸ್ ಮ್ಯಾನೇಜರ್ ದೂರು ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರು ಬಿಜೆಪಿ ಕಾರ್ಯಕರ್ತರು:

ನಕಲಿ ಸೋಪ್ ತಯಾರಿಸುತ್ತಿದ್ದ ಹೈದರಾಬಾದ್‌ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಅಲ್ಲಿನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಸ್ತುತ ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ, ಬಂಧಿತ ಇಬ್ಬರು ವ್ಯಕ್ತಿಗಳೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಯಾಂಕ್ ಖರ್ಗೆ ಆರೋಪಿಸಿದ್ದಾರೆ. ಇಷ್ಟೆಲ್ಲಾ ಒಡನಾಟ ಇಟ್ಟುಕೊಂಡಿರುವವರ ಜೊತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳು ಒಡನಾಟ ಇಟ್ಟುಕೊಂಡಿದ್ದಾರೆ  ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ಜೊತೆ ಆರೋಪಿ ನಿಂತಿರುವುದು ಎನ್ನಲಾದ ಫೋಟೋ

ರಾಜ್ಯದ ಆಸ್ತಿ ಉಳಿಸಿಕೊಳ್ಳಲು ನಾವು ಕಾರ್ಯಾಚರಣೆ ಮಾಡಿದ್ದೇವೆ. ಮೈಸೂರು ಸ್ಯಾಂಡಲ್ ಸೋಪ್‌ ಫ್ಯಾಕ್ಟರಿ ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸ್ಯಾಂಡಲ್ ಸೋಪ್ ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ ಇದು ಪ್ರಾರಂಭವಾಗಿತ್ತು ಎಂದಿದ್ದಾರೆ.

ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರು ಸ್ಯಾಂಡಲ್ ಸೋಪನ್ನು ಪ್ಯಾರೀಸ್‌ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ? ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಮಾಡಿ ಮಾರಾಟ ಮಾಡುವಲ್ಲಿ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್‌ರಂತವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ. ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಇಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್‌ಐಆರ್ ದಾಖಲಾಗುವಂತೆ ಮಾಡಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್‌ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ದಾವೋಸ್‌ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಎಂದು ಹೇಳಿದರು.

ಇದನ್ನೂ ಓದಿ : ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...