Homeಮುಖಪುಟ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

“ಉತ್ತರ ಭಾರತದಿಂದ ಬಂದಿರುವ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ‘ನಕಲಿ ಪ್ರಚಾರ’ ಮಾಡುತ್ತಿದ್ದಾರೆ” ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಚೆನ್ನೈ ನಗರ ಪೊಲೀಸ್‌ನ ಕೇಂದ್ರ ಅಪರಾಧ ವಿಭಾಗದಲ್ಲಿ (CCB) ಭಾನುವಾರ  ಪ್ರಕರಣ ದಾಖಲಿಸಲಾಗಿದೆ.

ಈ ವಿಚಾರವನ್ನು ‘ದಿ ಹಿಂದೂ’ ಪತ್ರಿಕೆಗೆ ದೃಢಪಡಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸಿಸಿಬಿಯ ಸೈಬರ್ ಕ್ರೈಂ ವಿಭಾಗವು ಅಣ್ಣಾಮಲೈ ವಿರುದ್ಧ ಭಾರತೀಯ ದಂಡ ಸಂಹಿತೆಯ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. “ರಾಜ್ಯದ ಜನರು ಮತ್ತು ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರ ನಡುವೆ ಗಲಭೆ ಸೃಷ್ಟಿಸಲು ಸರ್ಕಾರ ಯತ್ನಿಸುತ್ತಿರುವುದಾಗಿ ಆರೋಪಿಸಿ ಅಣ್ಣಾಮಲೈ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ”.

ಆಡಳಿತಾರೂಢ ಡಿಎಂಕೆ ಸಂಸದರು ಉತ್ತರ ಭಾರತೀಯರ ಬಗ್ಗೆ ಕೆಟ್ಟ ಟೀಕೆಗಳನ್ನು ಮಾಡಿದ್ದಾರೆ. ಡಿಎಂಕೆ ಸಚಿವರೊಬ್ಬರು ಉತ್ತರ ಭಾರತೀಯರನ್ನು “ಪಾನಿಪುರಿ ವಾಲಾ” ಎಂದು ಕರೆದಿದ್ದಾರೆ ಎಂದು ಅಣ್ಣಾಮಲೈ ತಮ್ಮ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

‘ಸೌಹಾರ್ದತೆ ಕದಡುವುದು; ಧರ್ಮ, ಬಣ್ಣ, ಭಾಷೆಯ ಆಧಾರದಲ್ಲಿ ಎರಡು ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡುವುದು’ ಎಂಬ ಆರೋಪಗಳನ್ನು ಹೊರಿಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153, 153A(1)(a), 505(1)(b) ಮತ್ತು 505(1)(c) ಅಡಿಯಲ್ಲಿ ಎಫ್‌ಐಆರ್‌ ಮಾಡಲಾಗಿದೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಅಣ್ಣಾಮಲೈ, “ಉತ್ತರ ಭಾರತೀಯ ಸಹೋದರರ ವಿರುದ್ಧ 7 ದಶಕಗಳಿಂದ ಮಾಡುತ್ತಿರುವ ಡಿಎಂಕೆಯವರ ಯೋಜಿತ ಪ್ರಚಾರವನ್ನು ಬಹಿರಂಗಪಡಿಸಿದ್ದಕ್ಕಾಗಿ ಡಿಎಂಕೆ ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ” ಎಂದಿದ್ದಾರೆ.

“ನಿನ್ನೆಯ ನನ್ನ ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿರುವ ಹಾಗೂ ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ. ನನ್ನನ್ನು ಬಂಧಿಸುವಂತೆ ನಾನು ಫ್ಯಾಸಿಸ್ಟ್ ಡಿಎಂಕೆಗೆ ಸವಾಲು ಹಾಕುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...