Homeಮುಖಪುಟಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

ಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

- Advertisement -
- Advertisement -

ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರ ಮೇಲೆ ಉತ್ತರ ಪ್ರದೇಶದಲ್ಲಿ FIR ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿದೆ. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

ಟ್ವಿಟರ್‌ನ ವೆಬ್‌ಸೈಟ್‌ನ “ಟ್ವೀಪ್ ಲೈಫ್” ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.

ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ “ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.

ಕಳೆದ ವಾರವೂ FIR

ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.

ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


ಇದನ್ನೂ ಓದಿ; ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...