Homeಮುಖಪುಟಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ; ಪ್ರಾಂಶುಪಾಲರ ಬಂಧನ

ಮಧ್ಯಪ್ರದೇಶದಲ್ಲಿ ಈ ಘಟನೆಯಾಗಿದ್ದು, ‘ಶಾಲೆಯಲ್ಲಿ ಧಾರ್ಮಿಕ ಮತಾಂತರ ನಡೆಯುತ್ತಿದೆ’ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು

- Advertisement -
- Advertisement -

ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪ ಬಂದಿದ್ದು, ವಿವಾದದ ಕೇಂದ್ರಬಿಂದುವಾಗಿರುವ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಬೋರ್ಡ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯ 18 ವಿದ್ಯಾರ್ಥಿಗಳನ್ನು ಅಭಿನಂದಿಸುವ ಪೋಸ್ಟರ್ ವೈರಲ್ ಆದ ನಂತರ ವಿವಾದ ಭುಗಿಲೆದ್ದಿತು. ಆ ಚಿತ್ರದಲ್ಲಿನ ಹೆಣ್ಣು ಮಕ್ಕಳು ಧರ್ಮಾತೀತವಾಗಿ ತಲೆಯ ಮೇಲೆ ದುಪ್ಪಟ್ಟವನ್ನು ಧರಿಸಿದ್ದರು. ಮೇ ತಿಂಗಳ ಅಂತ್ಯದಲ್ಲಿ ಈ ವಿವಾದ ಶುರುವಾಯಿತು.

ಇದು ಮತಾಂತರದ ಪ್ರಕ್ರಿಯೆಯಾಗಿದೆ ಎಂದು ಹಿಂದುತ್ವ ಗುಂಪುಗಳು ಆರೋಪಿಸಿದ್ದವು. ಶಾಲೆಯ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದ್ದವು. ಸ್ಪಷ್ಟನೆ ನೀಡಿದ್ದ ಶಾಲಾ ಆಡಳಿತ ಮಂಡಲಿ, “ತಲೆಯ ಮೇಲಿನ ದುಪ್ಪಟ್ಟವು ಸಮವಸ್ತ್ರದ ಭಾಗವಾಗಿದೆ. ವಿದ್ಯಾರ್ಥಿಗಳು ಅದನ್ನು ಧರಿಸಲೇಬೇಕೆಂದು ಒತ್ತಾಯಿಸಲಿಲ್ಲ” ಎಂದು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರಾದ ಅಫ್ಶಾ ಶೇಖ್ ಅವರಲ್ಲದೆ, ಗಣಿತ ಶಿಕ್ಷಕ ಅನಾಸ್ ಅತಾಹರ್ ಮತ್ತು ಭದ್ರತಾ ಸಿಬ್ಬಂದಿ ರುಸ್ತಮ್ ಅಲಿ ಅವರನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

“ಮುಖ್ಯವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡ ಆರು-ಏಳು ಮಂದಿ ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಮೂವರನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿರಿ: ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಜೂನ್ 7 ರಂದು ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಯಾವುದೇ ವರ್ಗದ ವ್ಯಕ್ತಿಗಳು ಪವಿತ್ರವೆಂದು ಪರಿಗಣಿಸುವ ಯಾವುದೇ ವಸ್ತುವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು), 506 (ಅಪರಾಧ ಬೆದರಿಕೆ), ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ 2021ರ ನಿಬಂಧನೆಗಳ ಅಡಿಯಲ್ಲಿ ಶಾಲಾ ಆಡಳಿತ ಸಮಿತಿಯ 11 ಸದಸ್ಯರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ.

ಜೂನ್ 2 ರಂದು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿತು, ವಿದ್ಯಾರ್ಥಿಗಳಿಗೆ ಮೀಸಲಾದ ಹಲವಾರು ಸೌಲಭ್ಯಗಳು ಅಸಮರ್ಪಕವಾಗಿವೆ ಅಥವಾ ಲಭ್ಯವಿಲ್ಲ ಎಂದು ಆರೋಪಿಸಲಾಯಿತು. ಸ್ಥಳೀಯ ಪುರಸಭೆಯ ಪ್ರಾಧಿಕಾರವು ಪ್ರತಿಕ್ರಿಯಿಸಿ, “ಶಾಲೆಯಲ್ಲಿನ ಅನಧಿಕೃತ ಎಂದು ಪರಿಗಣಿಸುವ ಭಾಗಗಳನ್ನು ಉರುಳಿಸಲಾಗುವುದು” ಎಂದು ಬೆದರಿಕೆ ಹಾಕಿದೆ.

ರಾಜ್ಯ ರಾಜಧಾನಿ ಭೋಪಾಲ್‌ನಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಈ ಶಾಲೆಯನ್ನು 2010 ರಲ್ಲಿ ಗಂಗಾ ಜಮುನಾ ವೆಲ್ಫೇರ್ ಸೊಸೈಟಿ ಸ್ಥಾಪಿಸಿದೆ. ಸುಮಾರು 1,200 ವಿದ್ಯಾರ್ಥಿಗಳು ಓದುತ್ತಾರೆ. ಇವರಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದ ಕುಟುಂಬಗಳಿಂದ ಬಂದವರಾಗಿದ್ದಾರೆ. ಇಲ್ಲಿನ ಮಕ್ಕಳ ಪೋಷಕರು ಕಾರ್ಮಿಕರಾಗಿ, ರೈತರಾಗಿ ಮತ್ತು ಬೀಡಿ ತಯಾರಕರಾಗಿ ಕೆಲಸ ಮಾಡುತ್ತಾರೆ ಎಂದು ‘ಇಂಡಿಯನ್ ಎಕ್ಸ್ ಪ್ರೆಸ್ ವರದಿ’ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...