Homeಕರ್ನಾಟಕನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

“ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದರು.

“ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ₹2 ಸಾವಿರ ಮೊತ್ತ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ” ಎಂದು ಹೇಳಿದರು.

“ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ ಶೇ. 99 ರಷ್ಟಾಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ” ಎಂದರು.

“ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದರು.

“ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು” ಎಂದರು.

“ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ” ಎಂದು ಹೇಳಿದರು.

ಜನರ ಆಶೀರ್ವಾದ ಇರುವರೆಗೆ ಆಡಳಿತ

“ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ. ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ” ಎಂದು.

“ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ. ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ” ಇದೆ ಎಂದು ಹೇಳಿದರು.

“ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ” ಎಂದರು.

ಇದನ್ನೂ ಓದಿ; ‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...