Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...