Homeಮುಖಪುಟಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

- Advertisement -
- Advertisement -

ರಾಹುಲ್ ಗಾಂಧಿ ಅವರು ತಮ್ಮ ಮೇಲಿನ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆ ನೀಡಬೇಕೆಂಬ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ದಿನವೇ, ಪ್ರತ್ಯೇಕ ಪ್ರಕರಣದಲ್ಲಿ, 2002ರ ಗುಜರಾತ್ ದಂಗೆಯ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಎರಡು ವಿದೇಶಿ ಪತ್ರಿಕೆಗಳಲ್ಲಿ ಸಂಪಾದಕೀಯಗಳು -(ಫೈನಾನ್ಶಿಯಲ್ ಟೈಮ್ಸ್ ಮತ್ತು ವಾಷಿಂಗ್ಟನ್ ಟೈಮ್ಸ್ ) ಇದು ಭಾರತದಲ್ಲಿ ”ಪ್ರಜಾಪ್ರಭುತ್ವದ ಹಿನ್ನಡೆ” ಎಂದು ಕಳವಳ ವ್ಯಕ್ತಪಡಿಸಿವೆ.

ಚೀನಾವನ್ನು ವಿರೋಧಿಸುವ ಬರದಲ್ಲಿ ಮೋದಿ ಸರ್ಕಾರದ ಇಂತಹ ಕ್ರಮಗಳ ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರಗಳು ಕುರುಡಾಗಿವೆ ಎಂದು ಸಂಪಾದಕೀಯಗಳು ಟೀಕಿಸಿವೆ.

ಮಾರ್ಚ್‌ನಲ್ಲಿ ಅಮೆರಿಕಾ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರು ಭಾರತಕ್ಕೆ ಭೇಟಿ ನೀಡಿದಾಗ,  ಮೋದಿಯನ್ನು ”ಅದ್ಬುತವಾದ ದೂರದೃಷ್ಟಿ”ಯುಳ್ಳ ಮತ್ತು ”ಅತ್ಯಂತ ಜನಪ್ರಿಯ ವಿಶ್ವ ನಾಯಕ” ಎಂದು ಬಣ್ಣಿಸಿದ್ದಾರೆ ಎಂಬುವುದನ್ನು ಪತ್ರಿಕೆಗಳು ಗಮನಸೆಳೆದಿವೆ.

”ವ್ಯಾಪಾರಿಗಳು ಮತ್ತು ಹೂಡಿಕೆದಾರರು ಚೀನಾದಿಂದ ದೂರವಿದ್ದು, ವೈವಿಧ್ಯತೆ ಇರುವ ಭಾರತದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಆದರೆ ಭಾರತದಲ್ಲಿ ಈಗ ಕಾನೂನಿನ ನಿಯಮಗಳನ್ನು ದುರ್ಬಲಗೊಳ್ಳುತ್ತಿರುವುದರಿಂದ ಹೂಡಿಕಾದರರು ಎರಡು ಬಾರಿ ಯೋಚಿಸುವಂತೆ ಮಾಡುತ್ತದೆ” ಎಂದು ಫೈನಾನ್ಶಿಯಲ್ ಟೈಮ್ಸ್ ಬರೆದಿದೆ.

ಇದನ್ನೂ ಓದಿ: ಮೋದಿ ಜಂಗಲ್ ಸಫಾರಿ ಅಣಕಿಸುವ ವಿಡಿಯೋ ಮಾಡಿದ ಹಾಸ್ಯನಟನಿಗೆ ನೋಟಿಸ್; 11 ಸಾವಿರ ದಂಡ

ಭಾರತದಲ್ಲಿ ಪ್ರಜಾಪ್ರಭುತ್ವದ ಅವನತಿ-

”ಪತ್ರಿಕಾ ಸ್ವಾತಂತ್ರ್ಯ ಹರಣ, ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಪಠ್ಯಕ್ರಮದಲ್ಲಿ ಬದಲಾವಣೆ,
ಗಾಂಧಿಯವರ ಶಿಕ್ಷೆಯನ್ನು ತಡೆಯಲು ಸೂರತ್ ನ್ಯಾಯಾಲಯದ ನಿರಾಕರಣೆ ಜೊತೆಗೆ, ಮೋದಿ ಸರ್ಕಾರವು ವಿರೋಧ ಪಕ್ಷದವರನ್ನು ಮತ್ತು ವಿಮರ್ಶಕರನ್ನು ಗುರಿಯಾಗಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇದು ಪ್ರಜಾಪ್ರಭುತ್ವ ಅವನತಿಗೆ ಕಾರಣವಾಗುತ್ತದೆ” ಎಂದು ಫೈನಾನ್ಷಿಯಲ್ ಟೈಮ್ಸ್ ಸಂಪಾದಕೀಯವು ಹೇಳಿದೆ.

”ಮೋದಿ ಬೆಂಬಲಿಗರು ದೇಶದಲ್ಲಿನ ಬಹುತೇಕ ಮಾಧ್ಯಮ, ನಾಗರಿಕ ಸಮಾಜ ಮತ್ತು ರಾಜಕೀಯ ನಾಯಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಗ್ರಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಮುಸ್ಲಿಂ ಅಲ್ಪಸಂಖ್ಯಾತರೊಂದಿಗೆ ಅಂತರ್-ಧರ್ಮೀಯ ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆ” ಎಂದು ಸಂಪಾದಕೀಯದಲ್ಲಿ ಸೇರಿಸಿದ್ದಾರೆ.

”ಭಾರತವು “ಸರ್ವಾಧಿಕಾರ” ಆಡಳಿತವನ್ನು ಹೊಂದುತ್ತಿದೆ” ಎಂದು ವೆರೈಟೀಸ್ ಆಫ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್, ಸ್ವೀಡಿಷ್ ಥಿಂಕ್ ಟ್ಯಾಂಕ್‌ ಬಣ್ಣಿಸಿರುವ ಬಗ್ಗೆ ಬ್ರಿಟಿಷ್ ದಿನಪತ್ರಿಕೆ ಗಮನಿಸಿದೆ.

”2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಕುರಿತಾದ ಸಾಕ್ಷ್ಯಚಿತ್ರವನ್ನು ಬ್ರಿಟಿಷ್ ಬ್ರಾಡ್‌ಕಾಸ್ಟರ್ (ಬಿಬಿಸಿ) ಬಿಡುಗಡೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಕೆಲವೇ ವಾರಗಳ ನಂತರ, ಫೆಬ್ರವರಿಯಲ್ಲಿ BBCಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ (ಐಟಿ) ದಾಳಿ ನಡೆಸಿದ ಬಗ್ಗೆ ಉಲ್ಲೇಖಿಸಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸಂಪಾದಕೀಯದಲ್ಲಿ ಪತ್ರಿಕೆ ಬರೆದಿದೆ.

”ಮೋದಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮಾಲೀಕರೊಂದಿಗೆ ಸಂಬಂಧ ಹೊಂದಿದೆ. ಆ ಮೂಲಕ ಸರ್ಕಾರವು ಮಾಧ್ಯಮದ ಮೇಲೆ ಅಗಾಧವಾದ ಪ್ರಭಾವವನ್ನು ಬೀರುತ್ತದೆ ಮತ್ತು ಮಾಧ್ಯಮಗಳ ಸಂಪಾದಕರು ಸರ್ಕಾರದ ರೇಖೆಯನ್ನು ಅನುಸರಿಸಲು ಪತ್ರಕರ್ತರಿಗೆ ಒತ್ತಡ ಹೇರುತ್ತಾರೆ” ಎಂದು ಫೈನಾನ್ಶಿಯಲ್ ಟೈಮ್ಸ್ ಆರೋಪ ಮಾಡಿದೆ.

ಇತ್ತಿಚೆಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಯಿತು ಅದು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಿರುತ್ಸಾಹಗೊಳಿಸುವ ಬೆಳವಣಿಗೆಯಾಗಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಬರೆದಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಲಾದ ಹಲವಾರು ಬದಲಾವಣೆಗಳಲ್ಲಿ, 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ, ಮೋಹನ್‌ದಾಸ್ ಕರಮಚಂದ್ ಗಾಂಧಿಯನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳ ಪ್ರಯತ್ನಗಳು ಮತ್ತು ನಂತರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲಿನ ನಿಷೇಧದ ಪ್ಯಾರಾಗಳನ್ನು ಕೈಬಿಡಲಾಗಿದೆ. ಈಗ ಯಾವುದೇ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

”ಆರೋಗ್ಯಕರ ಪ್ರಜಾಪ್ರಭುತ್ವವು ಅಹಿತಕರ ಘಟನೆಗಳನ್ನು ಮರುಪರಿಶೀಲಣೆ ಮಾಡದೆಯೇ ಗಾಳಿಗೆ ತೂರಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಸಂಪಾದಕೀಯ ಹೇಳಿದೆ.

ಅಮೆರಿಕ ಮೂಲದ ದಿನಪತ್ರಿಕೆಯ ಸಂಪಾದಕೀಯವು ಬಿಬಿಸಿ ಕಚೇರಿ ಮೇಲಿನ ದಾಳಿಯನ್ನು ಟೀಕಿಸಿದ್ದು, ”ಚೀನಾ, ರಷ್ಯಾ ಮತ್ತು ಇತರ ಸರ್ವಾಧಿಕಾರಗಳು ಸುದ್ದಿ ಮಾಧ್ಯಮವನ್ನು ಮೌನಗೊಳಿಸಲು ಸಾಮಾನ್ಯವಾಗಿ ಬಳಸುವ ಬೆದರಿಕೆ ತಂತ್ರವನ್ನು ಭಾರತ ಸರ್ಕಾರ ಅನುಸರಿಸುತ್ತಿದೆ” ಎಂದು ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...