Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...