Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...