Homeಮುಖಪುಟಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯ: ಶಿವಸೇನೆ ಸಂಸದರಿಂದ ಗೃಹ ಸಚಿವರಿಗೆ ಪತ್ರ

ಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯ: ಶಿವಸೇನೆ ಸಂಸದರಿಂದ ಗೃಹ ಸಚಿವರಿಗೆ ಪತ್ರ

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶಿವಸೇನೆ ಸಂಸದ ಅರವಿಂದ ಸಾವಂತ್ ಮಂಗಳವಾರ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಮಹಾರಾಷ್ಟ್ರ ಕ್ಯಾಬಿನೆಟ್ ಮಂತ್ರಿಯನ್ನು ಹೆಸರಿಸಿ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶಿವಸೇನೆ ಸಂಸದ ಅರವಿಂದ ಸಾವಂತ್ ಮಂಗಳವಾರ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಪತ್ರ ಬರೆದಿದ್ದಾರೆ.

ಗೋಸ್ವಾಮಿ ‘ಕೆಲವು’ ಜನರ ಹಿತದೃಷ್ಟಿಯಿಂದ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ದಕ್ಷಿಣ ಮುಂಬೈ ಸಂಸದರಾದ ಅರವಿಂದ್ ಸಾವಂತ್ ಆರೋಪಿಸಿದರು.

ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಸುದ್ದಿ ವಾಹಿನಿಯು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಮತ್ತು ಸಚಿವ ಆದಿತ್ಯ ಠಾಕ್ರೆ ಅವರನ್ನು ಹೆಸರಿಸಿದೆ.

“ಪತ್ರಿಕೋದ್ಯಮದ ಹೆಸರಿನಲ್ಲಿ ಹಿಂದಿ ಸುದ್ದಿ ಚಾನೆಲ್ ರಿಪಬ್ಲಿಕ್ ಭಾರತ್ ಮತ್ತು ಇಂಗ್ಲಿಷ್ ನ್ಯೂಸ್ ಚಾನೆಲ್ ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು ಬೇಜವಾಬ್ದಾರಿಯಿಂದ ಸುದ್ದಿಗಳನ್ನು ನಿರಂತರವಾಗಿ ಪ್ರಸಾರ ಮಾಡುತ್ತಿದ್ದಾರೆ. ಯಾವುದೇ ಪುರಾವೆಗಳಿಲ್ಲದೆ, ಸುದ್ದಿ ವಾಹಿನಿ ಮತ್ತು ಅದರ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವರ ಮೇಲೆ ಆರೋಪಗಳನ್ನು ಹೊರಿಸುತ್ತಿದ್ದಾರೆ” ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಈ ಹಿಂದೆ ಗೋಸ್ವಾಮಿ ಸುದ್ದಿ ಮಂಡಿಸುವಾಗ ರಾಜಕಾರಣಿಗಳು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದಕ್ಕಾಗಿ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಶಿವಸೇನಾದ ಮತ್ತೊಬ್ಬ ನಾಯಕ ಆರೋಪಿಸಿದ್ದಾರೆ.

ಮಂಗಳವಾರ ಟಿವಿ ಚಾನೆಲ್‌ಗಳೊಂದಿಗೆ ಮಾತನಾಡಿದ ಸಾವಂತ್, ಯಾವುದೇ ಪ್ರಕರಣದ ಬಗ್ಗೆ ವರದಿ ಮಾಡುವಾಗ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ನಿಯಮದ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ ಎಂದು ಹೇಳಿದರು.

“ಇತ್ತೀಚೆಗೆ, ಚಾನೆಲ್‌ಗಳು ಆರೋಪಿ ಯಾರೆಂಬುದನ್ನು ನಿರ್ಧರಿಸುತ್ತವೆ. ಕೆಲವು ಜನರನ್ನು ಹೆಸರಿಸಿ ಹತ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬಂತೆ ಬಿಂಬಿಸುತ್ತದೆ. ಅವರ ದೇಹ ಭಾಷೆ ಮತ್ತು ಇದನ್ನು ಮಂಡಿಸುವ ವಿಧಾನವು ತುಂಬಾ ಅಗೌರವವನ್ನುಂಟುಮಾಡುತ್ತದೆ.

ಇದು ಕೊನೆಗೆ ಮಹಾರಾಷ್ಟ್ರ ಮುಖ್ಯಮಂತ್ರಿಯನ್ನು ಮಾತ್ರ ಹೆಸರಿಸುವ ಹಂತಕ್ಕೆ ಬಂದಿದೆ. ಇದು ಕೇವಲ ವ್ಯಕ್ತಿಯನ್ನು ಅಗೌರವಗೊಳಿಸುವುದಲ್ಲ ಆದರೆ ಇಡೀ ರಾಜ್ಯಕ್ಕೇ ಅವಮಾನ ಮಾಡಿದಂತಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ಕೈಗೊಳ್ಳಿ” ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...