Homeಚಳವಳಿಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಶಾಲೆಗಳಿಗೆ ನುಗ್ಗಿ, ಅಪ್ರಾಪ್ತ ಮಕ್ಕಳ ವಿಡಿಯೋ ಮಾಡಿ, ಪ್ರಶ್ನೆ ಕೇಳಿ, ವಿಡಿಯೋ ಮಾಡಲು ಓಡಿಸಿಕೊಂಡು ಹೋಗುತ್ತಿರುವ ವರದಿಗಾರರು ಮತ್ತು ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಂಧನೂರಿನ ಮಕ್ಕಳ ಹಕ್ಕುಗಳ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ.

ಇಂದು ಸಿಂಧನೂರಿನ ತಹಶೀಲ್ದಾರ್ ಕಚೇರಿ ಎದರು ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ ವ್ಯಕ್ತಿ, ಅಧಿಕಾರಿಗಳು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆ ಆವರಣ ಹಾಗೂ ಕೊಠಡಿಗಳಿಗೆ ಅಕ್ರಮ ಮತ್ತು ದುರುದ್ದೇಶಪೂರ್ವಕವಾಗಿ ನುಗ್ಗಿ ಮಕ್ಕಳಿಂದ ಬಲವಂತವಾಗಿ ಹೇಳಿಕೆಯನ್ನು ವಿಡಿಯೊ ಚಿತ್ರೀಕರಣ ಮಾಡಿದ್ದಲ್ಲದೇ, ಅವರನ್ನು ಬೆನ್ನಟ್ಟಿ ಪೀಡಿಸಿದ ಘಟನೆಗಳು ನಡೆದಿವೆ. ಇದು ಮಕ್ಕಳ ಮನೋವಿಶ್ವಾಸ ಕುಗ್ಗಿಸಿ ಅವರನ್ನು ಶಾಲೆಯಿಂದ ಹೊರಗುಳಿಯುವಂತೆ ಮಾಡುವ ದುರುದ್ದೇಶವಾಗಿದ್ದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು AICCTU ಸಂಚಾಲಕಾದ ನಾಗರಾಜ್ ಪೂಜಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಸಮುದಾಯಕ್ಕೆ ಸೇರಿದ ಮಕ್ಕಳು ಎನ್ನುವ ಕಾರಣಕ್ಕೆ, ಕಳೆದ ಮೂರ‍್ನಾಲ್ಕು ದಿನಗಳಿಂದ ಹಾಡಹಗಲಲ್ಲೇ ಶಾಲೆಗೆ ಬರುವ ಮಕ್ಕಳನ್ನು ಹೆದರಿಸುವ, ಬೆದರಿಸುವ, ಅವರಿಗೆ ಮುಜುಗರ ಉಂಟುಮಾಡುವ, ಮಾನಸಿಕ ಸ್ಥೈರ್ಯ ಕುಗ್ಗಿಸುವ, ಕಿರುಕುಳ ನೀಡುವ, ಶಾಲೆಗೆ ಹೊರಗುಳಿಯುವಂತೆ ಮಾಡುವ ದುರುದ್ದೇಶದ ಘಟನೆಗಳು ನಡೆದಾಗ್ಯೂ ಮಕ್ಕಳ ಹಕ್ಕುಗಳ ಬಗ್ಗೆ ಪುಂಖಾನು ಪುಂಖವಾಗಿ ಮಾತನಾಡಿ, ಜನರ ತೆರಿಗೆ ದುಡ್ಡಿನಲ್ಲಿ ಅಭಿಯಾನ ಮಾಡುವ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗದಿರುವುದು ಸಂವಿಧಾನಬಾಹಿರ ಮತ್ತು ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ವಿವಾದ ಶುರುವಾಗುತ್ತಿದ್ದಂತೆ ಕಳೆದ ಕೆಲವು ದಿನಗಳಿಂದ ಮಕ್ಕಳ ಹಿತಾಸಕ್ತಿಯನ್ನೇ ಮರೆತು, ಮಕ್ಕಳ ಇಚ್ಛೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು, ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಡಲಾಗಿದೆ. ಅಲ್ಲದೇ ಏನೂ ತಿಳಿಯದ ಮುಗ್ದ ಮುಕ್ಕಳನ್ನು ದುರ್ಬಳಕೆ ಮಾಡಿಕೊಂಡು ಪ್ರಚೋದನಕಾರಿಯಾದ ಮಾತುಗಳನ್ನು ಹೇಳಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದ್ದು ಇದು ಆಯಾ ಜಿಲ್ಲಾಡಳಿತಗಳ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ರಾಜ್ಯ ಮಹಿಳಾ ಒಕ್ಕೂಟದ ವಿರುಪಮ್ಮ, ಹೇಳಿದ್ದಾರೆ.

ಈ ಎಲ್ಲಾ ಕೃತ್ಯಗಳು ಬಾಲನ್ಯಾಯ ಕಾಯ್ದೆ 2015ರ ಉಲ್ಲಂಘನೆಯಾಗಿದೆ. ಭಾರತ ಸಂವಿಧಾನ ಮತ್ತು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಬೆಂಬಲ ನೀಡುವುದಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಮಕ್ಕಳು ಅಂದರೆ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲಾಗಿದೆಯೇ ಎಂದು ಖಚಿತಪಡಿಸುವುದು ಆಯೋಗದ ಕರ್ತವ್ಯವಾಗಿದೆ. ಹಾಗಾಗಿ ಮಕ್ಕಳ ಶಿಕ್ಷಣಕ್ಕೆ ಅಡೆ-ತಡೆ ಉಂಟುಮಾಡುತ್ತಿರುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಯೋಗ ಮುಂದಾಗಬೇಕೆಂದು ಆಗ್ರಹಿಸಲಾಯಿತು.

ಕಳೆದ ಕೆಲವು ದಿನಗಳಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗಿವೆ ಎಂಬ ಬಗ್ಗೆ ವರದಿ ತರಿಸಿಕೊಂಡು, ಶಾಲೆಗಳಲ್ಲಿ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೇ ವಿದ್ಯಾರ್ಥಿಗಳ ಘನತೆ ಎತ್ತಿ ಹಿಡಿದು ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದು ಪ್ರತಿಭಟನಾಕರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಈರಮ್ಮ, ರಂಗಮ್ಮ, ಮಾಳಮ್ಮ, ಇಂದ್ರಮ್ಮ, ಅಮರಮ್ಮ, ಗ್ಯಾನಮ್ಮ, ದೇವಮ್ಮ, ಮರಿಯಮ್ಮ, ದಲಿತ ಮುಖಂಡ ಮಹಾದೇವ ಧುಮತಿ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಕ.ಕೊ.ಸೌ.ವೇದಿಕೆಯ ಸಮ್ಮದ್ ಚೌದ್ರಿ, ಬಸವರಾಜ ಬೆಳಗುರ್ಕಿ, ಬಸಯ್ಯ ಬಡಿಗೇರ, ಶ್ರೀನಿವಾಸ ಬುಕ್ಕನಹಟ್ಟಿ, ಮಲ್ಲಿಕಾರ್ಜುನ ಕುರುಗೋಡು, ಆರ್.ಎಚ್.ಕಲಮಂಗಿ ಸೇರಿದಂತೆ ಇನ್ನಿತರರಿದ್ದರು.


ಇದನ್ನೂ ಓದಿ: ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...