Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ - ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದ್ದು ಅದರಂತೆ ಯಾರು ನಿರ್ಲಕ್ಷ್ಯ ಮಾಡುತ್ತಾರೆ, ಅವರ ವಿರುದ್ಧ ಕಾಯ್ದೆಯನ್ವಯ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ 2023-24ನೇ ಸಾಲಿನ 34,293.69 ಕೋಟಿ ರೂ. ಗಳ ಕ್ರಿಯಾ ಯೋಜನೆ ಅನುಮೋದನೆ ನಂತರ ಅವರು ಮಾತನಾಡಿದರು.

ಪ್ರತಿ ಇಲಾಖೆಯು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗಳ ಅನುಷ್ಠಾನದ ನಂತರ ಪರಿಣಾಮದ ಮೌಲ್ಯಮಾಪನ ವರದಿಯನ್ನೂ ಸಿದ್ಧಪಡಿಸಿ ಫಲಾನುಭವಿಗಳ ಸ್ಥಿತಿಗತಿಯಲ್ಲಿ ಆಗಿರುವ ಬದಲಾವಣೆ ಕುರಿತು ಮಾಹಿತಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

ತಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಧಿನಿಯಮ 2013 ಮತ್ತು ನಿಯಮ 2017 ಅನ್ನು ಜಾರಿಗೆ ತರಲಾಗಿದೆ. ಇದರನ್ವಯ ಅಭಿವೃದ್ಧಿ ಯೋಜನೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ಶೇ. 24.10 ರಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒದಗಿಸಲಾಗುತ್ತಿದೆ. ಈ ಯೋಜನೆಯ ಅನುದಾನ ನೇರವಾಗಿ ಈ ಸಮುದಾಯಗಳಿಗೇ ತಲುಪಬೇಕು ಎಂಬ ಉದ್ದೇಶದಿಂದ ಕಾಯ್ದೆ ರೂಪಿಸಲಾಗಿದೆ. ಆದ್ದರಿಂದ ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ವರ್ಷದ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಒಟ್ಟು 34,221.49 ಕೋಟಿ ರೂ ಮೀಸಲಿಡಲಾಗಿದೆ. ಜೊತೆಗೆ ಹಿಂದಿನ ವರ್ಷ ಬಳಕೆಯಾಗದ ಮೊತ್ತ 72.20 ಕೋಟಿ ರೂ. ಸೇರಿಸಿ, 34,293.69 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಇದರಲ್ಲಿ ಶೇ. 84 ರಾಜಸ್ವ ಹಾಗೂ ಶೇ. 16 ಬಂಡವಾಳ ಮೇಲಣ ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು..

2023-24 ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 5790.67 ಕೋಟಿ ರೂ., ಇಂಧನ ಇಲಾಖೆಗೆ 5400.98 ಕೋಟಿ ರೂ., ಕಂದಾಯ ಇಲಾಖೆಗೆ 4041.78 ಕೋಟಿ ರೂ., ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 3787.29 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 2779.97 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಲಾಖೆಗೆ 2349.85 ಕೋಟಿ ರೂ., ವಸತಿ ಇಲಾಖೆಗೆ 1431.5 ಕೋಟಿ ರೂ., ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ 1387.35 ಕೋಟಿ ರೂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ 1296.96 ಕೋಟಿ ರೂ., ಆರೋಗ್ಯ ಇಲಾಖೆಗೆ 1122.25 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಮುಂದುವರೆದ ಯೋಜನೆಗಳಿಗೆ 1897 ಕೋಟಿ ರೂ. ಈವರೆಗೆ ವೆಚ್ಚ ಮಾಡಲಾಗಿದೆ. ಮುಂದಿನ ಎಂಟು ತಿಂಗಳಲ್ಲಿ ಇಂದು ಅನುಮೋದಿಸಲಾದ ಕ್ರಿಯಾ ಯೋಜನೆಯನ್ವಯ ಯೋಜನೆ ಅನುಷ್ಠಾನ ಮಾಡಿ, 34293.69 ಕೋಟಿ ರೂ. ಅನುದಾನ ಸಂಪೂರ್ಣ ವೆಚ್ಚ ಮಾಡಬೇಕು ಎಂದು ಸೂಚಿಸಲಾಯಿತು.

ಅನುದಾನದ ಸಂಪೂರ್ಣ ಸದ್ಬಳಕೆಗಾಗಿ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ಅನುಷ್ಠಾನಗೊಳಿಸಲಾಗುವುದು. ಸಂಬಂಧಿಸಿದ ಇಲಾಖೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಅನುದಾನ ಉಳಿದರೆ, ಅದರ ಮರು ಹಂಚಿಕೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪರಿಶಿಷ್ಟ ಜಾತಿ, ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ ಸೌಲಭ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೆ ದಲಿತರ ಮಕ್ಕಳು ಶಾಲಾ-ಕಾಲೇಜು ತೊರೆಯಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸದಸ್ಯರಾದ ಸಚಿವರುಗಳಾದ ನಾಗೇಂದ್ರ, ಹೆಚ್‌.ಕೆ. ಪಾಟೀಲ್‌, ಪ್ರಿಯಾಂಕ್‌ ಖರ್ಗೆ, ಎಂ.ಸಿ. ಸುಧಾಕರ್‌, ರಾಜ್ಯ ಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಪ್ರಸಾದ ಅಬ್ಬಯ್ಯ, ಇ. ತುಕಾರಾಂ, ಪ್ರಕಾಶ ರಾಥೋಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7D ರದ್ದು, 4,079 ಕೋಟಿ ರೂ ಹೆಚ್ಚುವರಿ ಅನುದಾನ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...