Homeಮುಖಪುಟಅಮೆರಿಕ ಆರೋಪಪಟ್ಟಿ ಅಧ್ಯಯನ ಬಳಿಕ ಅದಾನಿ ಲಂಚ ಪ್ರಕರಣದ ಮೇಲೆ ಕ್ರಮ: ಆಂಧ್ರ ಮುಖ್ಯಮಂತ್ರಿ ನಾಯ್ಡು

ಅಮೆರಿಕ ಆರೋಪಪಟ್ಟಿ ಅಧ್ಯಯನ ಬಳಿಕ ಅದಾನಿ ಲಂಚ ಪ್ರಕರಣದ ಮೇಲೆ ಕ್ರಮ: ಆಂಧ್ರ ಮುಖ್ಯಮಂತ್ರಿ ನಾಯ್ಡು

- Advertisement -
- Advertisement -

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಅದಾನಿ ಗ್ರೂಪ್ ಒಳಗೊಂಡಿರುವ ಆಪಾದಿತ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕಾ ಸಲ್ಲಿಸಿರುವ ಚಾರ್ಜ್‌ಶೀಟ್ ವರದಿಗಳ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಹೇಳಿದ್ದಾರೆ.

ಉದ್ಯಮಿ ಮತ್ತು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರು ಸೌರ ವಿದ್ಯುತ್ ಒಪ್ಪಂದಗಳಿಗೆ ಅನುಕೂಲಕರವಾದ ಷರತ್ತುಗಳಿಗೆ ಬದಲಾಗಿ ಭಾರತೀಯ ಅಧಿಕಾರಿಗಳಿಗೆ $250 ಮಿಲಿಯನ್ ಲಂಚ ನೀಡುವ ವರ್ಷಗಳ ಯೋಜನೆಯಲ್ಲಿ ಅವರ ಪಾತ್ರದ ಬಗ್ಗೆ ಯುಎಸ್‌ ನ್ಯಾಯಾಂಗ ಇಲಾಖೆಯು ಆರೋಪ ಹೊರಿಸಿದೆ.

ಹಿಂದಿನ ವೈಎಸ್‌ಆರ್‌ಸಿಪಿ ಆಡಳಿತವು ಅದಾನಿ ಗ್ರೂಪ್‌ನಿಂದ ಸರ್ಕಾರಿ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂಬ ಆರೋಪದ ಹಗರಣದಲ್ಲಿ ಸಿಲುಕಿಕೊಂಡಿದೆ. ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ತಮ್ಮ ಸರ್ಕಾರವು ಆ ಆರೋಪಗಳನ್ನು ಅಧ್ಯಯನ ಮಾಡಿ ಅವುಗಳ ಮೇಲೆ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

“ಅಲ್ಲಿ (ಯುಎಸ್) ಸಲ್ಲಿಸಲಾದ ಎಲ್ಲ ಆರೋಪಪಟ್ಟಿ ವರದಿಗಳು ನನ್ನ ಬಳಿ ಇವೆ. ಅದು ಸಾರ್ವಜನಿಕ ಡೊಮೇನ್‌ನಲ್ಲಿದೆ. ಅದನ್ನು ಅಧ್ಯಯನ ಮಾಡುತ್ತೇನೆ (ಆರೋಪಗಳು ಮತ್ತು ದೋಷಾರೋಪಣೆ) ಅದರ ಬಗ್ಗೆ ಕ್ರಮವಹಿಸಿ ನಿಮಗೆ ತಿಳಿಸುತ್ತೇನೆ” ಎಂದು ನಾಯ್ಡು ಹೇಳಿದರು.

ವೈಎಸ್‌ಆರ್‌ಸಿಪಿಯು ತನ್ನ ನೇತೃತ್ವದ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ಗುರುವಾರ ತಳ್ಳಿಹಾಕಿದೆ. ಅದಾನಿ ಗುಂಪಿನೊಂದಿಗೆ ಯಾವುದೇ ನೇರ ಒಪ್ಪಂದವಿಲ್ಲ ಎಂದು ಹೇಳಿದೆ.

ವೈಎಸ್‌ಆರ್‌ಸಿಪಿ ಆಡಳಿತ ಮತ್ತು ಅದಾನಿ ಗುಂಪನ್ನು ಒಳಗೊಂಡಿರುವ ಆರೋಪಗಳು ದಕ್ಷಿಣ ರಾಜ್ಯದ ಪ್ರತಿಷ್ಠೆ ಮತ್ತು ಬ್ರಾಂಡ್ ಇಮೇಜ್‌ಗೆ ಧಕ್ಕೆ ತಂದಿವೆ ಎಂದು ಹೇಳಿದ ನಾಯ್ಡು, “ಇದು ಅತ್ಯಂತ ದುಃಖದ ಬೆಳವಣಿಗೆ” ಎಂದು ಬಣ್ಣಿಸಿದರು.

ಇದನ್ನೂ ಓದಿ; ಅದಾನಿಯ ಬಂಧನ ಏಕಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...