Homeಮುಖಪುಟತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

- Advertisement -
- Advertisement -

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಜಾತಿ ಮತ್ತು ಸಮುದಾಯ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ತಪ್ಪಿಸಲು ಮಾರ್ಗಸೂಚಿಗಳನ್ನು ರೂಪಿಸುವ ಸಲುವಾಗಿ ರಚಿಸಿದ್ದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿ ತನ್ನ ವರದಿಯನ್ನು ಮಂಗಳವಾರ (ಜೂನ್ 18) ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ.

ವರದಿಯಲ್ಲಿ ಸಮಿತಿಯು ಸರ್ಕಾರಕ್ಕೆ ಅನೇಕ ಶಿಫಾರಸ್ಸುಗಳನ್ನು ಮಾಡಿದ್ದು, ವಿದ್ಯಾರ್ಥಿಗಳು ಬಳಸುವ ಬಣ್ಣದ ರಿಸ್ಟ್‌ಬ್ಯಾಂಡ್‌ಗಳು ಸೇರಿದಂತೆ ಇತರ ಜಾತಿ ಗುರುತುಗಳನ್ನು ನಿಷೇಧಿಸುವುದು ಮತ್ತು ಸಾಮಾಜಿಕ ನ್ಯಾಯ ವಿದ್ಯಾರ್ಥಿಗಳ ಪಡೆ (ಎಸ್‌ಜೆಎಸ್‌ಎಫ್‌) ರಚಿಸುವುದು ಅವುಗಳಲ್ಲಿ ಸೇರಿವೆ.

ಸಮಿತಿಯು ಮಾಡಿದ ಪ್ರಮುಖ ಶಿಫಾರಸುಗಳಲ್ಲಿ ಒಂದೆಂದರೆ, ಶಾಲೆಗಳ ಹೆಸರಿನಿಂದ ಜಾತಿ ಸೂಚಕಗಳನ್ನು ತೆಗೆದು ಹಾಕುವುದು ಮತ್ತು ಶಾಲೆಗಳನ್ನು ಅವುಗಳ ಸ್ಥಳದೊಂದಿಗೆ ‘ಸರ್ಕಾರಿ ಶಾಲೆಗಳು’ ಎಂದು ಮಾತ್ರ ಕರೆಯುವುದಾಗಿದೆ.

ಸರ್ಕಾರಿ ಶಾಲೆಗಳ ಹೆಸರಿನೊಂದಿಗೆ ದಾನಿಗಳು ಅಥವಾ ಕುಟುಂಬಗಳ ಹೆಸರಿದ್ದರೆ, ಅವುಗಳಲ್ಲಿನ ಜಾತಿ ಸೂಚಕಗಳನ್ನು ತೆಗದು ಹಾಕುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹೈಯರ್ ಸೆಕೆಂಡರಿ ತರಗತಿಗಳ ವಿಜ್ಞಾನ ಕೋರ್ಸ್‌ಗಳಲ್ಲಿ ಮೀಸಲಾತಿ ನೀಡುವುದು ಇನ್ನೊಂದು ಮುಖ್ಯ ಶಿಫಾರಸು ಆಗಿದೆ. ಇದಲ್ಲದೆ, ಸಾಮಾಜಿಕ ಅನಿಷ್ಟಗಳನ್ನು ಎದುರಿಸಲು ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳೊಂದಿಗೆ ಸಾಮಾಜಿಕ ನ್ಯಾಯ ವಿದ್ಯಾರ್ಥಿ ಪಡೆ (ಎಸ್‌ಜೆಎಸ್‌ಎಫ್‌) ರಚನೆಗೆ ಸಮಿತಿಯು ಶಿಫಾರಸು ಮಾಡಿದೆ. ಶಿಕ್ಷಣದ ಕೇಸರಿಕರಣ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ನುಸುಳುವ, ಜಾತಿ ಮತ್ತು ಕೋಮು ಸೌಹಾರ್ದತೆಗೆ ಅಡ್ಡಿಪಡಿಸುವ ಚಟುವಟಿಕೆಗಳ ಆರೋಪಗಳ ಬಗ್ಗೆ ತನಿಖೆ ನಡೆಸಲು ಪರಿಣಿತ ಸಂಸ್ಥೆ ಅಥವಾ ಏಜೆನ್ಸಿಯನ್ನು ರಚಿಸುವಂತೆಯೂ ಸೂಚಿಸಲಾಗಿದೆ.

ಇದಲ್ಲದೆ, ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳ ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಸಾಮಾನ್ಯ ನೀತಿ ಸಂಹಿತೆ ಜಾರಿಗೊಳಿಸಬೇಕು. ನೇಮಕಾತಿಗೂ ಮುನ್ನ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗೆಗಿನ ಅವರ ಮನೋಭಾವವನ್ನು ಶಿಕ್ಷಕರ ನೇಮಕಾತಿ ಮಂಡಳಿ (ಟಿಆರ್‌ಬಿ) ಖಚಿತಪಡಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಸಾಮಾಜಿಕ ಸಮಸ್ಯೆಗಳು, ಜಾತಿ ತಾರತಮ್ಯ, ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ದ್ರವ್ಯಗಳು, ರ‍್ಯಾಗಿಂಗ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳು ಮತ್ತು ಅವುಗಳ ಉಲ್ಲಂಘಣೆಯ ಪರಿಣಾಮಗಳ ಬಗ್ಗೆ ತಿಳಿಸಬೇಕು ಎಂದು ಹೇಳಿವೆ.

ಪ್ರತಿ ವಿಭಾಗಕ್ಕೆ ಒಬ್ಬ ಸಮಾಲೋಚಕರನ್ನು ನೇಮಿಸಬೇಕು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಪ್ರತಿ ಪ್ರೌಢ ಶಾಲೆಗೆ ಶಾಲಾ ಕಲ್ಯಾಣಾಧಿಕಾರಿ (ಎಸ್‌ಡಬ್ಲ್ಯುಒ) ಹುದ್ದೆಯನ್ನು ರಚಿಸಬೇಕು. ಕಲ್ಯಾಣಾಧಿಕಾರಿ ರ‍್ಯಾಗಿಂಗ್, ಡ್ರಗ್ಸ್ ಬೆದರಿಕೆ, ಲೈಂಗಿಕ ದೌರ್ಜನ್ಯ ಮತ್ತು ಜಾತಿ ತಾರತಮ್ಯಕ್ಕೆ ಸಂಬಂಧಿಸಿದ ಅಪರಾಧಗಳ ವಿಷಯಗಳ ಬಗ್ಗೆ ಶಾಲೆಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಬೇಕು. ಕಾನೂನು ಪ್ರಕಾರ ಈ ಸಮಸ್ಯೆಗಳನ್ನು ಪರಿಹರಿಸಬೇಕು. ಶಾಲಾ ಆಡಳಿತದ ವಿರುದ್ಧ ದೂರುಗಳಿದ್ದಲ್ಲಿ ಕಲ್ಯಾಣಾಧಿಕಾರಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಎಸ್‌ಸಿಪಿಸಿಆರ್‌) ದೂರು ಸಲ್ಲಿಸಬೇಕು. ಜಾತಿ ತಾರತಮ್ಯ ಮತ್ತು ಇತರ ಅನ್ಯಾಯದ ಆಚರಣೆಗಳ ಬಗ್ಗೆ ಶಿಕ್ಷಕರು ಮತ್ತು ಇತರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

2023ರ ಆಗಸ್ಟ್‌ನಲ್ಲಿ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಈ ಹಿಂದೆ, ತಮಿಳುನಾಡಿನ ಜೆಜೆ ಕಾಯಿದೆಯಡಿಯ ಕೇಂದ್ರಗಳ ಕಾರ್ಯಗಳನ್ನು ಪರಿಶೀಲಿಸಲು ಮತ್ತು ಅವುಗಳ ದಕ್ಷತೆಯನ್ನು ಸುಧಾರಿಸುವ ಮಾರ್ಗಗಳನ್ನು ಸೂಚಿಸಲು ಸರ್ಕಾರವು ನಿವೃತ್ತ ನ್ಯಾಯಮೂರ್ತಿಗೆ ಜವಬ್ದಾರಿ ನೀಡಿತ್ತು. ಅದರ ವರದಿಯನ್ನು ನವೆಂಬರ್ 15, 2023 ರಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಇದನ್ನೂ ಓದಿ : ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...