HomeUncategorizedಎಸ್ಸೆಸೆಲ್ಸಿ ಪರೀಕ್ಷೆ ವಿಷಯಕ್ಕೂ ಕೋಮು ಬಣ್ಣ ಬಳಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಠಿಣ ಕ್ರಮ: ಸಚಿವ...

ಎಸ್ಸೆಸೆಲ್ಸಿ ಪರೀಕ್ಷೆ ವಿಷಯಕ್ಕೂ ಕೋಮು ಬಣ್ಣ ಬಳಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

ಶಾಲಾ ಮಕ್ಕಳ ಪರೀಕ್ಷೆ ವಿಷಯಕ್ಕೂ ಕೋಮು ಬಣ್ಣ ಬಳಿದ ಚಕ್ರವರ್ತಿ ಸೂಲಿಬೆಲೆ ವಿರುದ್ದ  ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವನ್ಯಾರೋ ಚಕ್ರವರ್ತಿ ಸೂಲಿಬೆಲೆ ತಲೆ ಹರಟೆ ಮಾಡ್ತಿದ್ದಾನೆ. ಮಕ್ಕಳ ಪರೀಕ್ಷೆಯ ವಿಷಯಕ್ಕೂ ಕೋಮು ಬಣ್ಣ ಬಳಿದಿದ್ದಾನೆ. ಆತನ ವಿರುದ್ದ ತುಂಬಾ ದೂರುಗಳು ಕೇಳಿ ಬರುತ್ತಿವೆ. ಆತನಿಗೆ ಮಾನ ಮರ್ಯಾದೆ ಇಲ್ವಾ? ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಿಡಿಕಾರಿದರು.

ಹಿಂದಿನ ಸರ್ಕಾರ ಸೂಲಿಬೆಲೆಯಂತವನ ಪಾಠವನ್ನು ನಮ್ಮ ಮಕ್ಕಳಿಗೆ ಬೋಧಿಸಲು ಹೊರಟಿತ್ತು. ಅದಕ್ಕೆ ನಮ್ಮ ಸರ್ಕಾರ ಬಂದ ತಕ್ಷಣ ಅದನ್ನು ಕಿತ್ತು ಬಿಸಾಕಿದ್ದೇವೆ. ನಾನು ಅವತ್ತು ಕಿತ್ತು ಬಿಸಾಕಿದ್ದೇವೆ ಎಂದಾಗ ವಿವಾದ ಆಗಿತ್ತು. ಹೊಲಸನ್ನು ಯಾರಾದ್ರೂ ಮನೆಯೊಳಗೆ ಇಟ್ಟುಕೊಳ್ತಾರಾ? ಎಂದು ಪ್ರಶ್ನಿಸಿದರು.

ರಾಜ್ಯದ ಎಸ್ಸೆಸೆಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಬಲ ಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ “ಕರ್ನಾಟಕ ರಾಜ್ಯ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗಿನ ಅವಧಿಯಲ್ಲಿವೆ. ಆದರೆ, ಶುಕ್ರವಾರ ಏಕೆ? ಓಹ್.. ನಮಾಜ್‌ಗೆ ಸಮಯವೇ?” ಎಂದು ಮುಸ್ಲಿಮರ ವಿರುದ್ದ ಕೋಮುದ್ವೇಷ ಹೊರ ಹಾಕಿದ್ದ.

ಬಿಜೆಪಿ ಪಕ್ಷ, ಅದರ ವಕ್ತಾರ ಹರಿಪ್ರಕಾಶ್ ಕೋಣೆಮನೆ ಮತ್ತು ಅವರ ಒಡೆತನದ ಚಾನೆಲ್ ಕೂಡ ಸೂಲಿಬೆಲೆಯಂತೆ ಸುಳ್ಳು ಸುದ್ದಿಯನ್ನು ಹಂಚಿಕೊಂಡು ಕೋಮುದ್ವೇಷ ಕಾರಿದ್ದರು.

ಈ ಕುರಿತು ಸ್ಪಷ್ಟನೆ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾರ್ಚ್​ 1ರಂದು ಬೆಳಗ್ಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಾಗಿದೆ. ಎಸ್ಸೆಸೆಲ್ಸಿ ಪೂರ್ವ ಸಿದ್ದತಾ ಪರೀಕ್ಷೆ ಆಗಿದ್ದರಿಂದ ಮಧ್ಯಾಹ್ನ ಮಾಡ್ತಿದ್ದೇವೆ. ಮಾ.1ರಂದು 3 ಪರೀಕ್ಷೆ ಇರುವುದರಿಂದ ಮುಂದೂಡಿದ್ರೆ ಸಮಸ್ಯೆ ಆಗುತ್ತೆ. ಮಕ್ಕಳಿಗೆ ಅನುಕೂಲವಾಗುವ ರೀತಿ ಆಡಳಿತ ನಡೆಸಲು ನಮಗೆ ಬರುತ್ತದೆ ಎಂದಿದ್ದರು.

ಇದನ್ನೂ ಓದಿ : ಆರ್ಥಿಕ ದೌರ್ಜನ್ಯ ಖಂಡಿಸಿ ‘ಚಲೋ ದಿಲ್ಲಿ’ ಚಳವಳಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...