Homeಮುಖಪುಟಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

ಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

- Advertisement -
- Advertisement -

ಚೀನಾ ದೇಶವು ನೆರೆಯ ಭಾರತ ದೇಶದಿಂದ ಎಷ್ಟು ಭೂಮಿ ವಶಪಡಿಸಿಕೊಂಡಿದೆ ಎಂಬುದನ್ನು ಬಹಿರಂಗಪಡಿಸಲು ಲಡಾಕ್‌ನಿಂದ ಸುಮಾರು 10,000 ಜನರು ಈ ತಿಂಗಳು ಚೀನಾದ ಗಡಿ ಉದ್ದಕ್ಕೂ  ಮೆರವಣಿಗೆ ನಡೆಸಲಿದ್ದಾರೆ ಎಂದು ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಹೇಳಿದ್ದಾರೆ.

ವಾಂಗ್ಚುಕ್ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ಆರನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯತ್ವ ಮತ್ತು ಸಾಂವಿಧಾನಿಕ ರಕ್ಷಣೆಗಳ ಬೇಡಿಕೆಯ ಮುಂದಿಟ್ಟು ಕಳೆದ 14 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಾಂಗ್ಚುಕ್ ಉಪ್ಪು ನೀರು ಕುಡಿದು ಲೇಹ್‌ನಲ್ಲಿ ಶೂನ್ಯ ತಾಪಮಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾವು ಯಾವಾಗಲೂ ಹೋಗುತ್ತಿದ್ದ ಸ್ಥಳಗಳಿಗೆ ಹೋಗಲು ಈಗ ನಮಗೆ ಅನುಮತಿಸಲಾಗುತ್ತಿಲ್ಲ. ನಿರ್ದಿಷ್ಟ ಪ್ರದೇಶಗಳಲ್ಲಿ,ನಾವು ಹಿಂದೆ ಹೋಗುತ್ತಿದ್ದ ಸ್ಥಳ ತಲುಪುವ ಕಿಲೋಮೀಟರ್‌ಗಳ ಮೊದಲು ನಮ್ಮನ್ನು ತಡೆಯಲಾಗುತ್ತಿದೆ. ನಾವು ಅಲ್ಲಿಗೆ ಹೋಗಿ ಭೂಮಿ ನಮ್ಮಿಂದ ಕಳೆದುಹೋಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತೋರಿಸುತ್ತೇವೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಇತರ ಪ್ರತಿಭಟನಾಕಾರರೊಂದಿಗೆ ನೆಲದ ವಾಸ್ತವವನ್ನು ಹೊರಗಿನ ಪ್ರಪಂಚಕ್ಕೆ ಎತ್ತಿ ತೋರಿಸಲು ಶೀಘ್ರದಲ್ಲೇ ಗಡಿಗೆ ಮೆರವಣಿಗೆಯನ್ನು ಆಯೋಜಿಸುತ್ತೇವೆ, ನಮ್ಮ ಅಲೆಮಾರಿಗಳು ದಕ್ಷಿಣಕ್ಕೆ ಬೃಹತ್ ಭಾರತೀಯ ಕೈಗಾರಿಕಾ ಸ್ಥಾವರಗಳಿಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಉತ್ತರಕ್ಕೆ ಚೀನಾದ ಅತಿಕ್ರಮಣದಿಂದ ಪ್ರಧಾನ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸ್ಥಾವರಗಳಿಂದ ಅಲೆಮಾರಿಗಳು 1,50,000 ಚದರ ಕಿಲೋಮೀಟರ್ ಅವಿಭಾಜ್ಯ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತೊಂದೆಡೆ ಅವರು ಉತ್ತರದಿಂದ ಚೀನಾ ಅತಿಕ್ರಮಣದಿಂದ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಚೀನೀಯರು ಕಳೆದ ಕೆಲವು ವರ್ಷಗಳಲ್ಲಿ ದೊಡ್ಡ ಪ್ರಮಾಣದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಈ ನೆಲದ ವಾಸ್ತವತೆಯನ್ನು ತೋರಿಸಲು ನಾವು ಶೀಘ್ರದಲ್ಲೇ ರೈತರು ಸೇರಿದಂತೆ 10,000 ಜನರು ಗಡಿಗೆ ಮೆರವಣಿಗೆ ತೆರಳಲಿದ್ದೇವೆ. ಡೆಮ್‌ಚೋಕ್, ಚುಶುಲ್ ಸೇರಿದಂತೆ ಚೀನಾದೊಂದಿಗಿನ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಮೆರವಣಿಗೆಯನ್ನು ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಜೂನ್ 15, 2020ರಂದು ಗಾಲ್ವಾನ್‌ನಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಘಟನೆಯ ನಂತರ ಎರಡು ಸೇನೆಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ ಮತ್ತು ಬಫರ್ ವಲಯಗಳು ಅಥವಾ ನಿಷೇಧಿತ ಪ್ರದೇಶಗಳ ರಚನೆಗೆ ಕಾರಣವಾಗಿವೆ.

ಮಾರ್ಚ್ 4ರಂದು ಲಡಾಖ್ ನಾಗರಿಕ ಸಮಾಜದ ಮುಖಂಡರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಮಾತುಕತೆಯ ವಿಫಲತೆಯ ನಂತರ ಸ್ಥಳೀಯರು ವಾಂಗ್ಚುಕ್ ಅವರ ಪ್ರತಿಭಟನೆಗೆ ಭಾರೀ ಬೆಂಬಲವನ್ನು ಸೂಚಿಸಿದ್ದಾರೆ. ಲಡಾಖ್‌ನಲ್ಲಿ ಬೌದ್ಧ ಬಹುಸಂಖ್ಯಾತ ಮತ್ತು ಶಿಯಾ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳನ್ನು ಪ್ರತಿನಿಧಿಸುವ ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಸದಸ್ಯರು ಜಂಟಿಯಾಗಿ ಲಡಾಖ್‌ಗೆ ರಾಜ್ಯ ಸ್ಥಾನಕ್ಕಾಗಿ ಪ್ರತಿಭಟಿಸುತ್ತಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...