Homeಕರ್ನಾಟಕಅಂಬೇಡ್ಕರ್‌ವಾದಿ, ಹೋರಾಟಗಾರ ಮಂಟೇಲಿಂಗಯ್ಯ ನಿಧನ

ಅಂಬೇಡ್ಕರ್‌ವಾದಿ, ಹೋರಾಟಗಾರ ಮಂಟೇಲಿಂಗಯ್ಯ ನಿಧನ

- Advertisement -
- Advertisement -

ಅಂಬೇಡ್ಕರ್‌ವಾದಿ, ಜನಪರ  ಹೋರಾಟಗಾರ ಮಂಟೇಲಿಂಗಯ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಕೆಸರೆಯಲ್ಲಿ ನೆಲೆಸಿದ್ದ  75 ವರ್ಷದ ಮಂಟೇಲಿಂಗಯ್ಯ ಅವರು ಮನೆಯಲ್ಲಿ ಇರುವ ವೇಳೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹಾದೇವಪ್ಪ ಭೇಟಿ ನೀಡಿ ಪಾರ್ಥಿವ ಶರೀರರದ ಅಂತಿಮ ದರ್ಶನ ಪಡೆದಿದ್ದಾರೆ. ಮಂಟೇಲಿಂಗಯ್ಯ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಗಾಂಧಿನಗರದ ರುದ್ರಭೂಮಿಯಲ್ಲಿ ನಡೆಯಲಿದೆ.

ಮಂಟೇಲಿಂಗಯ್ಯ ಅವರು  ಬಡ ಜನರ ಪರ ಕಾಳಜಿ ಹೊಂದಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದರು. ಇವರು ಎಜೆಎಂಎಸ್ ಸಂಘಟನೆ ಹುಟ್ಟು ಹಾಕಿ ಜನಪರ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಮೈಸೂರು ದಸರಾಕ್ಕೆ ಪ್ರತಿಯಾಗಿ ಬಡವರ  ದಸರಾವನ್ನು ಅದ್ಧೂರಿಯಾಗಿ ಆಚರಿಸಿ ರಾಜ್ಯದ ಗಮನ ಸೆಳೆದಿದ್ದರು.

ಇವರು ಡಾ.ಬಿ.ಆರ್.ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದು, ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತಿದ್ದರು. ಬಹುಜನ ಚಳವಳಿಯನ್ನು ಕನ್ನಡ ನಾಡಿಗೆ ಪರಿಚಯಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು.

ಇದನ್ನು ಓದಿ: ಎಸ್ ಸಿ-ಎಸ್ ಟಿ  ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಿಸಲು ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

0
ಕೋವಿಶೀಲ್ಡ್ ಲಸಿಕೆಯ "ಅಡ್ಡಪರಿಣಾಮಗಳ" ವಿವಾದದ ಮಧ್ಯೆ ಲಸಿಕೆ ತಯಾರಕರಿಂದ "ರಾಜಕೀಯ ದೇಣಿಗೆಗಳನ್ನು" ಪಡೆಯಲು 'ಬಿಜೆಪಿ' ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ...