Homeಮುಖಪುಟಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್ ಬಂಧನ

ಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್ ಬಂಧನ

- Advertisement -
- Advertisement -

ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ (ಎಲ್‌-ಜಿ) ವಿ.ಕೆ ಸಕ್ಸೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಸಂಬಂಧ ‘ನರ್ಮದಾ ಬಚಾವೋ ಆಂದೋಲನ’ದ ನಾಯಕಿ, ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಪೊಲೀಸರು ಶುಕ್ರವಾರ (ಏ.25) ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿ.ಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಮೇ 24, 2023ರಂದು, ದೆಹಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪಾಟ್ಕರ್ ಅವರ ಹೇಳಿಕೆಗಳನ್ನು ಮಾನನಷ್ಟಕರವೆಂದು ಪರಿಗಣಿಸಿ ಜುಲೈ 1ರಂದು ಅವರಿಗೆ ಐದು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆದಾಗ್ಯೂ, ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಅವರು ಕಳೆದ ವರ್ಷ ಜುಲೈ 29ರಂದು ಶಿಕ್ಷೆಯನ್ನು ಅಮಾನತುಗೊಳಿಸಿ ಮೇಧಾ ಪಾಟ್ಕರ್ ಅವರಿಗೆ ಜಾಮೀನು ನೀಡಿದ್ದರು.

ನಂತರ, 1 ಲಕ್ಷ ರೂ. ದಂಡವನ್ನು ಪಾವತಿಸುವ ಷರತ್ತಿನೊಂದಿಗೆ ಮೇಧಾ ಪಾಟ್ಕರ್ ಉತ್ತಮ ನಡವಳಿಕೆಯ ಪ್ರೊಬೇಷನ್ ಅನ್ನು ಪಡೆದರು. ಸಾಕೇತ್ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಸಿಂಗ್ ಅವರ ನೇತೃತ್ವದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 8, 2025 ರಂದು ಈ ಸಡಿಲಿಕೆಯನ್ನು ನೀಡಿತ್ತು.

ಈ ರಿಯಾಯಿತಿಯ ಹೊರತಾಗಿಯೂ, ಏಪ್ರಿಲ್ 23 ರಂದು ಪ್ರೊಬೇಷನ್ ಬಾಂಡ್‌ಗಳನ್ನು ಔಪಚಾರಿಕವಾಗಿ ಸಲ್ಲಿಸಲು ಮತ್ತು ದಂಡವನ್ನು ಪಾವತಿಸುವ ಸಲುವಾಗಿ ನ್ಯಾಯಾಲಯಕ್ಕೆ ಹಾಜರಾಗಲು ಪಾಟ್ಕರ್ ವಿಫಲರಾಗಿದ್ದರು. ಅವರ ಗೈರುಹಾಜರಿ ಮತ್ತು ನಿಯಮ ಪಾಲಿಸದ ಕಾರಣ ನ್ಯಾಯಾಲಯವು ದೆಹಲಿ ಪೊಲೀಸ್ ಆಯುಕ್ತರ ಮೂಲಕ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಪ್ರೊಬೇಷನ್ ಬಾಂಡ್ ಜಾರಿಗೊಳಿಸುವ ಪ್ರಕ್ರಿಯೆಗೆ ಎರಡು ವಾರಗಳ ತಡೆ ನೀಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತಿರಸ್ಕರಿಸಿತ್ತು.

“ಪ್ರೊಬೇಷನ್ ಬಾಂಡ್ ಜಾರಿ ತಡೆಯುವಂತೆ ಕೋರಿರುವ ಮೇಧಾ ಪಾಟ್ಕರ್ ಅರ್ಜಿಯು ನ್ಯಾಯಾಲಯವನ್ನು ಮೋಸಗೊಳಿಸುವ ಉದ್ದೇಶದಿಂದ ಕೂಡಿದೆ” ಎಂದು ಎಎಸ್‌ಜೆ ವಿಶಾಲ್ ಸಿಂಗ್ ಹೇಳಿದ್ದರು.

“ಮುಂದಿನ ದಿನಾಂಕದಂದು, ಅಪರಾಧಿಯು 08/04/2025ರ ಶಿಕ್ಷೆಯ ಆದೇಶದ ನಿಯಮಗಳನ್ನು ಪಾಲಿಸಲು ವಿಫಲವಾದರೆ, ನ್ಯಾಯಾಲಯವು ದಯಾಪರ ಶಿಕ್ಷೆಯನ್ನು ಮರುಪರಿಶೀಲಿಸಬೇಕಾಗುತ್ತದೆ ಮತ್ತು ಶಿಕ್ಷೆಯ ಮೇಲಿನ ಆದೇಶವನ್ನು ಬದಲಾಯಿಸಬೇಕಾಗುತ್ತದೆ” ಎಂದು ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಏಪ್ರಿಲ್ 23ರ ತಮ್ಮ ಆದೇಶದಲ್ಲಿ ಹೇಳಿದ್ದರು.

“ಬಲವಂತದ ಆದೇಶದ ಮೂಲಕ ಅಪರಾಧಿ ಮೇಧಾ ಪಾಟ್ಕರ್ ಅವರನ್ನು ಹಾಜರುಪಡಿಸುವುದನ್ನು ಜಾರಿಗೊಳಿಸುವುದನ್ನು ಬಿಟ್ಟು ನ್ಯಾಯಾಲಯಕ್ಕೆ ಬೇರೆ ದಾರಿಯಿಲ್ಲ” ಎಂದು ನ್ಯಾಯಾಧೀಶ ಸಿಂಗ್ ಹೇಳಿದ್ದರು. ಮುಂದಿನ ದಿನಾಂಕಕ್ಕೆ ದೆಹಲಿ ಪೊಲೀಸ್ ಆಯುಕ್ತರ ಕಚೇರಿಯ ಮೂಲಕ ಅಪರಾಧಿ ಮೇಧಾ ಪಾಟ್ಕರ್ ವಿರುದ್ಧ ಜಾಮೀನುರಹಿತ ಆದೇಶ ಹೊರಡಿಸಿ” ಎಂದಿದ್ದರು.

ನ್ಯಾಯಾಲಯದ ಆದೇಶದಂತೆ ಮೇಧಾ ಪಾಟ್ಕರ್ ವಿರುದ್ಧ ಪೊಲೀಸರು ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿದ್ದರು. ಇಂದು ಅವರ ಬಂಧನವಾಗಿದೆ.

ಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...