Homeಚಳವಳಿದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್‌ ಕೌರ್‌ಗೆ ಜಾಮೀನು

ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್‌ ಕೌರ್‌ಗೆ ಜಾಮೀನು

ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

- Advertisement -
- Advertisement -

ಜನವರಿ 12 ರಂದು ಸೋನಿಪತ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ, ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್‌ ಕೌರ್‌ಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಕೊಲೆ ಯತ್ನದ ಪ್ರಕರಣದಲ್ಲಿ  ಶುಕ್ರವಾರ (ಫೆ.26) ಜಾಮೀನು ನೀಡಿದೆ. ನೊದೀಪ್ ಕೌರ್‌ ಅವರನ್ನು ಹರಿಯಾಣದ ಕರ್ನಾಲ್ ಜೈಲಿನಲ್ಲಿರಿಸಲಾಗಿದೆ.

ತನ್ನನ್ನು ಬಂಧಿಸಿದ ನಂತರ ಸೋನಿಪತ್ ಪೊಲೀಸ್ ಠಾಣೆಯಲ್ಲಿ ತೀವ್ರವಾಗಿ ಥಳಿಸಿದ್ದಾರೆ ಎಂದು ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್‌ ಕೌರ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯಲ್ಲಿ ಹೇಳಿದ್ದರು.

23 ವರ್ಷದ ಹೋರಾಟಗಾರ್ತಿ ನೊದೀಪ್‌ ಪಂಜಾಬ್‌ನ ಮುಕ್ತಸರ್ ಜಿಲ್ಲೆಯವರಾಗಿದ್ದು, ತನ್ನ ಬಂಧನದಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 54 ಅನ್ನು ಉಲ್ಲಂಘಿಸಲಾಗಿದೆ, ತನ್ನನ್ನು ವೈದ್ಯಕೀಯ ಪರೀಕ್ಷೆ ನಡೆಸಿಲ್ಲ ಎಂದು ಆರೋಪಿಸಿದ್ದರು.

‌ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ತನ್ನ ಕಾನೂನು ಸಲಹೆಗಾರರಾದ ಅರ್ಷ್‌ದೀಪ್ ಸಿಂಗ್ ಚೀಮಾ ಮತ್ತು ಹರಿಂದರ್ ದೀಪ್ ಸಿಂಗ್ ಬೈನ್ಸ್ ಅವರ ಮೂಲಕ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ, ಐಪಿಸಿಯ 307 (ಕೊಲೆ ಯತ್ನ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ನೊದೀಪ್ ತಿಳಿಸಿದ್ದರು.

ಪಂಜಾಬ್‌ ಮೂಲದ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತ ಸಮುದಾಯದ ನೊದೀಪ್ ಕೌರ್ ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಚಳವಳಿಗೆ ಭಾರಿ ಬೆಂಬಲವನ್ನು ನೀಡುವಲ್ಲಿ ಯಶಸ್ವಿಯಾಗಿದ್ದರಿಂದ, ಈ ಪ್ರಕರಣದಲ್ಲಿ ತನ್ನನ್ನು ಗುರಿಯಾಗಿಸಲಾಗಿದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ನೊದೀಪ್ ವಿರುದ್ದ ಗಲಭೆ, ಕಾನೂನುಬಾಹಿರ ಸಭೆ, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸದಂತೆ ತೊಂದರೆ ನೀಡುವುದು, ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಸುಲಿಗೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆ ಹಲವು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.


ಇದನ್ನೂ ಓದಿ: ‘ಪೊಲೀಸ್‌ ಠಾಣೆಯಲ್ಲಿ ತನಗೆ ಥಳಿಸಲಾಗಿದೆ’- ಹೈಕೋರ್ಟ್‌ನಲ್ಲಿ ಹೋರಾಟಗಾರ್ತಿ ನೊದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಸ್ವಾಗತಾರ್ಹ ಬೆಳವಣಿಗೆ. ಜನಪರ ಹೋರಾಟಗಾರರ ವಿರುದ್ದ, ಸುಳ್ಳು ಪ್ರಕರಣಗಳನ್ನು ದಾಕಲಿಸಿ, ಅವರನ್ನು ಜೈಲಿಗಟ್ಟುವ ಪ್ರಯತ್ನಗಳನ್ನು ಪ್ರಬುತ್ವ ಇನ್ನಾದರೂ ಕೈಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...