Homeಮುಖಪುಟಹೋರಾಟಗಾರ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು!

ಹೋರಾಟಗಾರ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು!

- Advertisement -
- Advertisement -

ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ಕರ್ಕರ್ಡೂಮಾ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್‌ಪೈ ಅವರು ಬುಧವಾರ ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಏಳು ದಿನಗಳ ಮಧ್ಯಂತರ ಜಾಮೀನಿಗೆ ಅನುಮತಿ ನೀಡಿದ್ದಾರೆ. 2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ಪಿತೂರಿಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಅವರು ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿ ಇದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪಿತೂರಿ, ಗಲಭೆ ಮತ್ತು ಇತರ ಅಪರಾಧಗಳ ಆರೋಪ ಹೊರಿಸಲಾದ ಖಾಲಿದ್ ಸೆಪ್ಟೆಂಬರ್ 2020 ರಿಂದ ಬಂಧನದಲ್ಲಿದ್ದಾರೆ. ಅವರ ಹಿಂದಿನ ಜಾಮೀನು ಅರ್ಜಿಗಳನ್ನು ಮಾರ್ಚ್ 2022 ರಲ್ಲಿ ವಿಚಾರಣಾ ನ್ಯಾಯಾಲಯ ಮತ್ತು ಅಕ್ಟೋಬರ್ 2022 ರಲ್ಲಿ ಹೈಕೋರ್ಟ್ ತಿರಸ್ಕರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ, ಉಮರ್ ಖಾಲಿದ್ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಸುಪ್ರಿಂಕೋರ್ಟ್‌ ಮೇ 2023 ರಲ್ಲಿ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರಿಗೆ ನಿರ್ದೇಶಿಸಿತು. ಆದಾಗ್ಯೂ, ಹಲವು ಮುಂದೂಡಿಕೆಗಳ ನಂತರ, ಬದಲಾದ ಸಂದರ್ಭಗಳನ್ನು ಉಲ್ಲೇಖಿಸಿ ಉಮರ್ ಖಾಲಿದ್ ತನ್ನ ಅರ್ಜಿಗಳನ್ನು ಹಿಂತೆಗೆದುಕೊಂಡರು ಮತ್ತು ಹೊಸ ಮೇಲ್ಮನವಿಯನ್ನು ಸಲ್ಲಿಸಿದ್ದರು. ಹೋರಾಟಗಾರ ಉಮರ್

ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಎಫ್‌ಐಆರ್ 59/2020 ನಂತೆ ದಾಖಲಿಸಲಾದ ಪ್ರಕರಣವು ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ಆರೋಪಗಳನ್ನು ಉಮರ್ ಖಾಲಿದ್ ವಿರುದ್ಧ ಹೊರಿಸಲಾಗಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿ ಎಎಪಿ ನಾಯಕ ತಾಹಿರ್ ಹುಸೇನ್, ಖಾಲಿದ್ ಸೈಫಿ, ಇಶ್ರತ್ ಜಹಾನ್, ಮೀರನ್ ಹೈದರ್ ಮತ್ತು ಇತರರು ಇದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...