Homeಕರ್ನಾಟಕಒಳಮೀಸಲಾತಿ ಕುರಿತು ಸದನದಲ್ಲಿ ಚರ್ಚಿಸುವಂತೆ ಒತ್ತಾಯ; ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾದ ಹೋರಾಟಗಾರರು

ಒಳಮೀಸಲಾತಿ ಕುರಿತು ಸದನದಲ್ಲಿ ಚರ್ಚಿಸುವಂತೆ ಒತ್ತಾಯ; ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾದ ಹೋರಾಟಗಾರರು

- Advertisement -
- Advertisement -

ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಎಚ್.ಸಿ. ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು.

ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.

ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು ರಚಿಸಿ 3 ತಿಂಗಳ ಕಾಲಾವಕಾಶ ನೀಡಿತ್ತು.

ಇದೀಗ, ಆಯೋಗದ ಅವಧಿ ಮುಗಿಯುತ್ತಿರುವ‌ ಹಿನ್ನೆಲೆಯಲ್ಲಿ ಆಯೋಗದಿಂದ ಮಧ್ಯಂತರ ವರದಿಯನ್ನು ಸರ್ಕಾರ ಪಡೆದುಕೊಳ್ಳಬೇಕು, ಪ್ರಸ್ತುತ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲ ಒಳಮೀಸಲಾತಿ ವರ್ಗೀಕರಣವನ್ನು ಮಾಡಿ, ಶಾಶ್ವತ ಜಾರಿಗಾಗಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಬೇಕೆಂದು ಸಚಿವರನ್ನು ಒತ್ತಾಯಿಸಿದರು.

ಬ್ಯಾಕ್ ಲಾಗ್ ಹುದ್ದೆಗಳನ್ನು ಒಳಮೀಸಲಾತಿ ಜಾರಿಯಾಗುವವರೆಗೂ ಯಾವ ಕಾರಣಕ್ಕೂ ಭರ್ತಿ‌ಮಾಡಲು ಮುಂದಾಗಬಾರದು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಇದಕ್ಕೆ ಸ್ಫಂದಿಸಿದ ಸಚಿವರು, ಒಳಮೀಸಲಾತಿ ಜಾರಿಯಾಗುವವರೆಗೂ ಬ್ಯಾಕ್ ಹುದ್ದೆಗಳು ಸೇರಿದಂತೆ, ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಅಲ್ಲದೆ, ಒಳಮೀಸಲಾತಿ‌ ಕುರಿತಂತೆ ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಬಸವರಾಜ್ ಕೌತಾಳ್, ಚಂದ್ರು ತರಹುಣಿಸೆ, ರಘು ಕಾಮಾಕ್ಷಿಪಾಳ್ಯ, ಮಂಜುನಾಥ್ ಮತ್ತಿತರರು ಹಾಜರಿದ್ದರು.

ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...