Homeಮುಖಪುಟನಟ ಅಲ್ಲು ಅರ್ಜುನ್ ಬಂಧನ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಆರ್‌ಎಸ್‌ ನಾಯಕ ಕೆಟಿಆರ್‌

ನಟ ಅಲ್ಲು ಅರ್ಜುನ್ ಬಂಧನ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಆರ್‌ಎಸ್‌ ನಾಯಕ ಕೆಟಿಆರ್‌

- Advertisement -
- Advertisement -

ಸಿನಿಮಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಬಂಧನದ ಕುರಿತು ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಅನ್ನು ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಟೀಕಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೆಟಿಆರ್‌, “ಇದು ಆಡಳಿತಗಾರರ ಅಭದ್ರತೆಯ ಪರಾಕಾಷ್ಠೆ, ಅಲ್ಲು ಅರ್ಜುನ್ ಅವರನ್ನು ಸಾಮಾನ್ಯ ಕ್ರಿಮಿನಲ್ ಎಂದು ಪರಿಗಣಿಸುವುದು; ವಿಶೇಷವಾಗಿ, ಅವರು ನೇರವಾಗಿ ಜವಾಬ್ದಾರರಲ್ಲದ ಕಾರಣಕ್ಕಾಗಿ ಆರೋಪಿ ಎಂದು ಕರೆಯಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ,, ನಟನ ಬಂಧನದಲ್ಲಿ ತಮ್ಮ ಅಥವಾ ತಮ್ಮ ಸರ್ಕಾರದ ಯಾವುದೇ ಪಾತ್ರವಿಲ್ಲ. ಯಾವುದೇ ರಾಜಕೀಯ ಕಾರಣವನ್ನು ಹುಡುಕಬೇಕಾಗಿಲ್ಲ.. ಕಾನೂನಿನ ಮುಂದೆ ಎಲ್ಲರೂ ಸಮಾನರು” ಎಂದು ಅವರು ಹೇಳಿದರು.

ಗಂಟೆಗಳ ಹಿಂದೆ ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಥಿಯೇಟರ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ಅಲ್ಲಿ ಅವರ ‘ಪುಷ್ಪಾ 2: ದಿ ರೂಲ್’ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತಿತ್ತು. ಘಟನೆಯಲ್ಲಿ ಕಳೆದ ವಾರ ಒಬ್ಬ ಮಹಿಳೆ ಸಾವನ್ನಪ್ಪಿ, ಆಕೆಯ ಪುತ್ರನಿಗೆ ಗಂಭೀರವಾಗಿ ಗಾಯಗಳಾಗಿವೆ. ಹೆಚ್ಚಿನ ವಿಚಾರಣೆಗಾಗಿ ಅಲ್ಲು ಅರ್ಜುನ್ ಅವರನ್ನು ಜುಬಿಲಿ ಹಿಲ್ಸ್‌ನಲ್ಲಿರುವ ಅವರ ಮನೆಯಿಂದ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

“ಸರ್ಕಾರದ ವರ್ತನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ರಾಷ್ಟ್ರಪ್ರಶಸ್ತಿ ವಿಜೇತ ತಾರೆಯ ಬಂಧನ ಆಡಳಿತಗಾರರ ಅಭದ್ರತೆಯ ಪರಮಾವಧಿ!” ಎಂದು ಕೆಟಿಆರ್ ಟೀಕಿಸಿದ್ದಾರೆ.

ನನ್ನ ಬೆಡ್‌ರೂಮಿಗೆ ಪೊಲೀಸರು ನುಗ್ಗಿದರು: ಅಲ್ಲು ಅರ್ಜುನ್ 

ಕಳೆದ ವಾರ ಮಹಿಳೆಯೊಬ್ಬರು ಸಾವನ್ನಪ್ಪಿದ ಕಾಲ್ತುಳಿತ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಪೊಲೀಸರು ತಮ್ಮ ಬೆಡ್‌ರೂಂಗೆ ನುಗ್ಗಿದರು ಎಂದು ಅಲ್ಲು ಅರ್ಜುನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತನ್ನ ಬಂಧನವನ್ನು ಸೋಮವಾರದವರೆಗೆ ಮುಂದೂಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಜುನ್ ಈ ಹೇಳಿಕೆ ನೀಡಿದ್ದಾರೆ. ಅವರು ತಮ್ಮ ಖಾಸಗಿ ಜಾಗವನ್ನು ಪ್ರವೇಶಿಸಿದ್ದು ತಪ್ಪು ಎಂದು ಪೊಲೀಸರಿಗೆ ತಿಳಿಸಿದ್ದರು ಎಂದು ವರದಿಯಾಗಿದೆ.

ಅವರ ಎಲ್ಲ ವಿನಂತಿಗಳನ್ನು ನಾವು ಗೌರವಿಸುತ್ತಿದ್ದೇವೆ ಎಂದು ಪೊಲೀಸರು ನಟನಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ನಟನ ಹೇಳಿಕೆ ಭಿನ್ನವಾಗಿದೆ. “ಸರ್, ನೀವು ಏನನ್ನೂ ಗೌರವಿಸಿಲ್ಲ, ನಾನು ನನ್ನ ಬಟ್ಟೆಗಳನ್ನು ಬದಲಾಯಿಸಲು ಮತ್ತು ನನ್ನೊಂದಿಗೆ ಒಬ್ಬ ವ್ಯಕ್ತಿಯನ್ನು ಕಳುಹಿಸಲು ಬಯಸುತ್ತೇನೆ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನನ್ನು ಕರೆದೊಯ್ಯುವುದು ತಪ್ಪಲ್ಲ. ಆದರೆ, ನನ್ನ ಮಲಗುವ ಕೋಣೆ ಒಳಗೆ ಬರದಿದ್ದರೆ ಒಳ್ಳೆಯದು” ಎಂದು ಹೇಳಿದ್ದಾರೆ.

ನಟನ ಬಂಧನದ ನಂತರ ವೀಡಿಯೊಗಳು ವೈರಲ್ ಆಗಿದ್ದು, ಪೊಲೀಸರೊಂದಿಗೆ ಮಾತನಾಡುತ್ತಿರುವ ನಟ ಕಾಫಿ ಮಗ್ ಹಿಡಿದು ಮಾತನಾಡುತ್ತಿರುವುದು ಕಾಣಬಹುದು. ನಂತರ, ಪೊಲೀಸರು ಬೆಂಗಾವಲು ವಾಹನಗೊಂದೊಗೆ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಅವರ ಪತ್ನಿ ಅಲ್ಲು ಸ್ನೇಹಾ ರೆಡ್ಡಿ, ಸಹೋದರ ಅಲ್ಲು ಸಿರೀಶ್ ಮತ್ತು ತಂದೆ ಅಲ್ಲು ಅರವಿಂದ್ ಸಹ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ; ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...