Homeಮುಖಪುಟಬಂಗಾಳಿಗಳಿಗೆ ಮೀನು ಬೇಯುಸುತ್ತೀರಾ ಹೇಳಿಕೆಗೆ ಕ್ಷಮೆಯಾಚಿಸಿದ ನಟ, ಬಿಜೆಪಿ ಮುಖಂಡ ಪರೇಶ್ ರಾವಲ್

ಬಂಗಾಳಿಗಳಿಗೆ ಮೀನು ಬೇಯುಸುತ್ತೀರಾ ಹೇಳಿಕೆಗೆ ಕ್ಷಮೆಯಾಚಿಸಿದ ನಟ, ಬಿಜೆಪಿ ಮುಖಂಡ ಪರೇಶ್ ರಾವಲ್

- Advertisement -
- Advertisement -

ಗುಜರಾತ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ‘ನಿಮ್ಮ ಅಕ್ಕಪಕ್ಕದಲ್ಲಿ ಬಾಂಗ್ಲಾದೇಶಿಯವರು ಮತ್ತು ರೋಹಿಂಗ್ಯಗಳು ವಾಸಿಸಿದರೆ ಏನು ಮಾಡುತ್ತೀರಿ? ಕಡಿಮೆ ಬೆಲೆಯ ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಬಂಗಾಳಿಗಳಿಗೆ ಮೀನು ಬೇಯಿಸಿಕೊಡುತ್ತೀರಾ’ ಎಂಬ ಕೋಮು ಪ್ರಚೋದಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ನಟ ಹಾಗೂ ಬಿಜೆಪಿ ಸಂಸದ ಪರೇಶ್ ರಾವಲ್ ಕ್ಷಮೆಯಾಚಿಸಿದ್ದಾರೆ.

ಗುಜರಾತಿನ ವಲ್ಸಾಡ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಸಭೆಯಲ್ಲಿ ಮಾತನಾಡಿದ ಅವರು, “ಗ್ಯಾಸ್ ಸಿಲಿಂಡರ್ ದುಬಾರಿಯಾಗಿದ್ದರೆ ಮತ್ತು ಅದರ ಬೆಲೆ ಇಳಿಯುತ್ತದೆ. ಜನರಿಗೆ ಉದ್ಯೋಗವೂ ದೊರೆಯಲಿದೆ. ಆದರೆ ರೋಹಿಂಗ್ಯ ವಲಸಿಗರು ಮತ್ತು ಬಾಂಗ್ಲಾದೇಶಿಗರು ದೆಹಲಿಯಂತೆ ನಿಮ್ಮ ಸುತ್ತಲು ವಾಸಿಸಲು ಪ್ರಾರಂಭಿಸಿದರೆ ಏನಾಗುತ್ತದೆ? ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ನೀವು ಏನು ಮಾಡುತ್ತೀರಿ? ಮೊದಲು ಬಂಗಾಳಿಗಳಿಗೆ ಮೀನು ಬೇಯುಸುತ್ತೀರಾ?” ಎಂದು ಹೇಳಿದ್ದರು.

ಮುಂದುವರೆದು ಗುಜರಾತಿನ ಜನರು ಹಣದುಬ್ಬರವನ್ನು ಸಹಿಸಿಕೊಳ್ಳುತ್ತಾರೆ. ಆದರೆ ಇಂತಹುಗಳನ್ನು ಸಹಿಸುವುದಿಲ್ಲ. ಆ ವ್ಯಕ್ತಿ ತಮ್ಮ ಬಾಯಿಗೆ ಡೈಪರ್ ಹಾಕಿಕೊಂಡು ಸುಮ್ಮನಿರಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಗುರಿಯಾಗಿಸಿ ಟೀಕಿಸಿದ್ದರು.

ಇದರಿಂದ ಸಿಟ್ಟಿಗೆದ್ದ ಬಂಗಾಳಿಗರು ಪರೇಶ್ ವಿರುದ್ಧ ಕಿಡಿಕಾರಿದ್ದರು. ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಪ್ರತಿಕ್ರಿಯೆ ನೀಡಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದರು.

“ಪರೇಶ್ ರಾವಲ್ ಸರ್, ಬಂಗಾಳಿಗಳು ಅವರಿಗೆ ಮೀನು ಬೇಯಿಸಲು ನಿಮ್ಮ ಅಗತ್ಯವಿಲ್ಲ. ನೀವು ಸಹ ಮಹಾರಾಷ್ಟ್ರದಲ್ಲಿ ನಿಮ್ಮ ವೃತ್ತಿಜೀವನವನ್ನು ಆರಂಭಿಸಿದ್ದೀರಿ ಎಂಬುದನ್ನು ನೆನಪಿಡಿ, ಅಲ್ಲಿ ನಾವು ನಿಮಗೆ ಪ್ರೀತಿಯಿಂದ ಧೋಕ್ಲಾ ಮತ್ತು ಫಾಫ್ಡಾವನ್ನು ನೀಡಿದ್ದೇವೆ. ಗುಜರಾತ್‌ನಲ್ಲಿ ಬಿಜೆಪಿಯ ಆದೇಶದ ಮೇರೆಗೆ ನೀವು ಬಂಗಾಳದ ವಿರುದ್ಧ ಮಾಡಿದ ಈ ಹೇಯ ಟೀಕೆಗಳನ್ನು ಹಿಂತೆಗೆದುಕೊಳ್ಳಿ ಮತ್ತು ಕ್ಷಮೆಯಾಚಿಸಿ” ಎಂದು ಒತ್ತಾಯಿಸಿದ್ದರು.

ಟೀಕೆಗಳು ವ್ಯಕ್ತವಾದ ನಂತರ ಪರೇಶ್ ರಾವಲ್ ಕ್ಷಮೆಯಾಚಿಸಿದ್ದಾರೆ. ಇದು ಮೀನಿನ ವಿಷಯವಲ್ಲ. ಅವರು ಸ್ಪಷ್ಟೀಕರಣ ನೀಡಬೇಕೆಂಬ ಟ್ವಿಟರ್ ಬಳಕೆದಾರರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾವಲ್, “ಖಂಡಿತವಾಗಿ ಮೀನಿನ ವಿಚಾರ ಒಂದು ಸಮಸ್ಯೆಯಲ್ಲ. ಗುಜರಾತಿಗಳು ಕೂಡ ಮೀನನ್ನು ಬೇಯಿಸುತ್ತಾರೆ ಮತ್ತು ಸೇವಿಸುತ್ತಾರೆ. ಬಂಗಾಳಿ ಹೇಳಿಕೆಯ ವಿಚಾರದಲ್ಲಿ ನಾನು ಉಲ್ಲೇಖಿಸಿದ್ದು ಅಕ್ರಮ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯರನ್ನು. ಅದರೂ ನಿಮ್ಮ ಭಾವನೆಗಳಿಗೆ ನೋವುಂಟಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...