Homeಕರ್ನಾಟಕಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್‌ಗಳಾಗಿ ಸ್ಮಶಾನ ಕಾರ್ಮಿಕರು ಸಹ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಕ್ಷಣದ ಅಗತ್ಯತೆಗಳು ಮತ್ತು ದೀರ್ಘಕಾಲಿಕ ಸಮಸ್ಯೆಗಳನ್ನು ಬಗೆ ಹರಿಸಿ ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸಾವುಗಳು ಹೆಚ್ಚಾಗಿರುವ ಈ ಸಂದರ್ಭದಲ್ಲಿ ಹಗಲು- ರಾತ್ರಿ ಚಿತಾಗಾರಗಳು ಮತ್ತು ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾದಿಂದ ಮೃತರಾದವರನ್ನು ಕುಟುಂಬ ಸದಸ್ಯರೇ ದೂರವಿಡುತ್ತಿರುವ ಈ ಸಮಯದಲ್ಲಿ ಚಿತಾಗಾರ ಹಾಗೂ ಸ್ಮಶಾನಗಳಲ್ಲಿ ಕೆಲಸ ಮಾಡುವ ಮೂಲಕ ಈ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಕ್ಕೆ ಜೊತೆಯಾಗಿದ್ದಾರೆ.

ಸಂಕಷ್ಟದಲ್ಲಿ ಸರ್ಕಾರಕ್ಕೆ ನೆರವಾಗಿರುವ ಇಂತಹ ಸ್ಮಶಾನ ಕಾರ್ಮಿಕರ ತಕ್ಷಣದ ಮತ್ತು ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಟ ಚೇತನ್ ಬರೆದಿರುವ ಪತ್ರದ ವಿವರ ಇಲ್ಲಿದೆ.

ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರಿಗೆ ಮುಂಚೂಣಿಯ ಕೋವಿಡ್ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಮಶಾನ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕವಾಗಿ ಅಳಿವಿನಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಅಸಾಧಾರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುರಾದೃಷ್ಟವಶಾತ್, ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷ್ಯಿಸಿದೆ. ನಮ್ಮ ಕಾರ್ಮಿಕರಿಗೆ ಹೆಚ್ಚು ಅಗತ್ಯವಿರುವ ಈ ಬೇಡಿಕೆಗಳನ್ನು ನೀವು ವಾಸ್ತವಿಕಗೊಳಿಸಬೇಕೆಂದು ನಾವು ಕೇಳುತ್ತೇವೆ…

ಎಲ್ಲಾ ಸ್ಮಶಾನ/ಶವಗಾರ ಕಾರ್ಮಿಕರಿಗೆ ತಕ್ಷಣದ ಅಗತ್ಯೆಗಳು

– ವೈದ್ಯಕೀಯ ವಿಮೆ

– ಕೋವಿಡ್ ಸಂತ್ರಸ್ಥರಿಗೆ ಆದ್ಯತೆಯ ಆಸ್ಪತ್ರೆಯ ಹಾಸಿಗೆ ಹಂಚಿಕೆ

– ಆದ್ಯತೆಯ ವ್ಯಾಕ್ಸಿನೇಷನ್

– ಈಗಾಗಲೇ ಒದಗಿಸಿರುವ ಪಿಪಿಇ ಕಿಟ್‌ಗಳ ಜೊತೆಗೆ ಕೈಗವಸುಗಳು ಮತ್ತು ಮಾಸ್ಕ್‌ಗಳು

– ತಮ್ಮ ಕೆಲಸದ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿದರೆ ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು

– ಕೆಲಸದ ಹೊರೆ ಹೆಚ್ಚಿಗೆಯಾದ ಕಾರಣ ಅವರನ್ನು ಸಹಾಯ ಮಾಡಲು ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ಎಲ್ಲಾ ಸ್ಮಶಾನ ಕಾರ್ಮಿಕರಿಗೆ ಶಾಶ್ವತ ಪರಿಹಾರಗಳು

– 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು.

– ಇಎಸ್‌ಐ ಮತ್ತು ಪಿಎಸ್‌ಗೆ ಅವಕಾಶ ಕಲ್ಪಿಸಿಕೊಡಬೇಕು.

– ಸ್ಮಶಾನ/ಶವಾಗರದ ಆವರಣದ ಹೊರಗೆ ವಸತಿ ಕಲ್ಪಿಸಬೇಕು.

– ಕೆಲಸದ ಸಮಯವನ್ನು 8 ಗಂಟೆಗಳ ಶಿಫ್ಟ್‌ಗಳಿಗೆ ಸೀಮಿತಗೊಳಿಸಬೇಕು.

– ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು.

– ಎಲ್ಲಾ ಧಾರ್ಮಿಕ ಸಮುದಾಯಗಳ (ಹಿಂದೂ, ಮುಸ್ಲಿಂ ಕ್ರಿಶ್ಚಿಯನ್, ಇತರೆ) ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು.

– ಸ್ಮಶಾನ ಕಾರ್ಮಿಕರಿಗೆ ನಿರ್ದಿಷ್ಟವಾದ ಸಾಮಾಜಿಕ ಮತ್ತು ಶೈಕ್ಷಣಿಕೆ ಉನ್ನತಿಗಾಗಿ ಹೊಸ ನೀತಿಗಳನ್ನು ಅನುಷ್ಠಾನಗೊಳಿಸಬೇಕು.

ನಮ್ಮ ಸ್ಮಶಾನ ಕಾರ್ಮಿಕರ ಮತ್ತು ಸಾರ್ವಿಜನಿಕರ ಹಿತದೃಷ್ಟಿಯಿಂದ ನಮ್ಮ ಕರ್ನಾಟಕ ಸರ್ಕಾರ ಈ ನೀತಿಗಳನ್ನು ತಕ್ಷಣವೇ ಜಾರಿಗೆ ತರುತ್ತದೆ ಎಂದು ನಾವು ಭಾವಿಸುತ್ತೇವೆ.

ಎಂದು ನಟ ಚೇತನ್ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...