ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಂಹಿಸಾ ಇತ್ತೀಚೆಗೆ ಅವರು ಹಿಂದೂತ್ವದ ಸುಳ್ಳುಗಳ ಬಗ್ಗೆ ಟ್ವೀಟ್ ಮಾಡಿದ್ದರು. ಇದೇ ಕಾರಣಕ್ಕೆ ಅವರನ್ನು ಜೈಲಿಗೂ ಕಳುಹಿಸಲಾಗಿತ್ತು. ಅದರ ಬೆನ್ನಲ್ಲೇ ಇದೀಗ ಅವರ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ. ಇದು ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಖ್ಯಾತ ನಟ ಕಿಶೋರ್ ಸಹ ಪರೋಕ್ಷವಾಗಿ, ಚೇತನ್ ಹೆಸರನ್ನು ಉಲ್ಲೇಖಿಸದೇ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ನಟ ಕಿಶೋರ್ ಪೋಸ್ಟ್:
ನಟ ಕಿಶೋರ್ ತಮ್ಮ ಇನ್ ಸ್ಟಾಗ್ರಾಮ್‌ನಲ್ಲಿ ಧೀರ್ಘ ಬಹರದ ಪೋಸ್ಟ್ ಹಂಚಿಕೊಂಡಿದ್ದಾರೆ. ”ಹಿಂದುತ್ವ ಎನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನಸ್ಥಿತಿ ಇರುವಂತಹದ್ದು. ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೇ ಎನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?. ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?. ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?” ಎಂದು ತಿಳಿಸಿದ್ದಾರೆ.
View this post on Instagram
ಚೇತನ್ ಟ್ವಿಟ್:
”ಗೃಹ ಸಚಿವಾಲಯವು ನಿರ್ದಿಷ್ಟ ಸಮುದಾಯದ ವಿರುದ್ಧ ದುರಾಗ್ರಹ, ದ್ವೇಷ ಮತ್ತು ದುಷ್ಟತನವನ್ನು ಪ್ರಚಾರ ಮಾಡುತ್ತಿದೆ ಎಂದು ನನ್ನ ಮೇಲೆ ಆರೋಪಿಸಿದೆ. ಇದು ನಿಜವಲ್ಲ. ಅನ್ಯಾಯದ ವ್ಯವಸ್ಥೆಯ ವಿರುದ್ಧ ನಮ್ಮ ಹೋರಾಟ, ಎಂದರೆ ಜನ್ಮಸಿದ್ಧ ಹಕ್ಕು – ಆಧಾರಿತ ಶ್ರೇಣಿಕೃತ ಅಸಮಾನತೆಯನ್ನು ಅಂದರೆ ಬ್ರಾಹ್ಮಣ್ಯವನ್ನು ಕಿತ್ತು ಹಾಕುವುದು – ನಾವು ಯಾವುದೇ ಜಾತಿ ಅಥವಾ ಸಮುದಾಯದ ವಿರುದ್ಧ ಅಲ್ಲ. ಇದನ್ನು ಸಮಾನತೆಯ ಐಕಾನ್‌ಗಳು ನಮಗೆ ಕಲಿಸುತ್ತಿರುವುದು. ಆದರೆ, ಆಡಳಿತದ ಶಕ್ತಿ ರಚನೆಯು ಯಾವಾಗಲೂ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತದೆ” ಎಂದು ಚೇತನ್ ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ನಟ ಚೇತನ್ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ
HM accuses me of ‘promoting ill will, hatred, & disharmony against particular community’
Not true
Our fight against system means dismantling birthright-based hierarchy, Brahminism—not agnst any caste/community
Our equalitarian icons taught us; power structure always retaliates pic.twitter.com/uKiU8cNNfo
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) April 18, 2023


