Homeಕರ್ನಾಟಕಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

- Advertisement -
- Advertisement -

ಟ್ವಿಟರ್‌ನಲ್ಲಿ ತಮ್ಮ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ ಆಧರಿಸಿ, ಬೆಂಗಳೂರು ನ್ಯಾಯಾಲಯವು ಜೂನ್ 24 ರ ಸಚಿವರಿಗೆ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆಯ ದಿನಾಂಕ ಜುಲೈ 14 ಕ್ಕೆ ನಿಗದಿಪಡಿಸಲಾಗಿದೆ. ಮಾನನಷ್ಟ ಮೊಕದ್ದಮೆ 1 ರೂಪಾಯಿ ಹೊರತುಪಡಿಸಿ, ಬೇಷರತ್ತಾದ ಕ್ಷಮೆಯಾಚಿಸಲು ಸಚಿವರಿಗೆ ನಿರ್ದೇಶಿಸಬೇಕು ಎಂದು ಚೇತನ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ್ಯ ಮತ್ತು ಜಾತಿವಾದದ ವಿರುದ್ಧ ಪೋಸ್ಟ್‌ಗಳನ್ನು ಹಾಕಿದ್ದಕ್ಕಾಗಿ ನಟ ಚೇತನ್ ಕುಮಾರ್ ಅವರನ್ನು ಸಚಿವ ಶಿವರಾಮ್ ಹೆಬ್ಬಾರ್ ಟೀಕಿಸಿದ್ದರು. ಅಂಬೇಡ್ಕರ್‌ ಮತ್ತು ಪೆರಿಯಾರ್‍ ಹೇಳಿಕೆಗಳನ್ನು ಉಲ್ಲೇಖಿಸಿ ಪೋಸ್ಟ್ ಶೇರ್‌ ಮಾಡಿದ್ದರು.

ಇದನ್ನೂ ಓದಿ: ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

ಜೂನ್ 11 ರಂದು ಸರಣಿ ಟ್ವೀಟ್ ಮಾಡಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌, ’ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದಿದ್ದರು.

 

’ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

’ಶಿವರಾಮ್ ಹೆಬ್ಬಾರ್ ಕಾಮೆಂಟ್‌ಗಳು ನಿಜವಲ್ಲ ಮತ್ತು‘ ನ್ಯಾಯಯುತ ಪ್ರತಿಕ್ರಿಯೆಗಳು ’ವ್ಯಾಪ್ತಿಗೆ ಬರುವುದಿಲ್ಲ. ಸಮಾಜದಲ್ಲಿ  ಅರ್ಜಿದಾರರ ಪ್ರತಿಷ್ಠೆ, ವೈಯಕ್ತಿಕ ಮತ್ತು ವೃತ್ತಿಪರ ಖ್ಯಾತಿಯನ್ನು ಹಾಳು ಮಾಡುವ ಉದ್ದೇಶ ಹೊಂದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನು ತಮ್ಮ ವಿಡಿಯೋ ಮತ್ತು ಬರಹಗಳಲ್ಲಿ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ  ಚೇತನ್ ಬಸವನಗುಡಿ ಪೊಲೀಸ್‌ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಎರಡು ಬಾರಿಯೂ ಸತತ ನಾಲ್ಕು ಗಂಟೆಗಳ ವಿಚಾರಣೆ ಎದುರಿಸಿದಾರೆ.

’ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ನಾನು ಮಾಡುತ್ತಿರುವ ಕೆಲಸದ ಬಗ್ಗೆ ಹೆಮ್ಮೆ ಇದ್ದು ಹೋರಾಟ ಮುಂದುವರೆಯುತ್ತದೆ ಎಂದು ನಟ ಚೇತನ್ ವಿಚಾರಣೆ ನಂತರ ಹೇಳಿಕೆ ನೀಡಿದ್ದರು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...