Homeಕರ್ನಾಟಕಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ನಿಧನ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾಗಿದ್ದಾರೆ.

81 ವರ್ಷ ಪ್ರಾಯದ ದ್ವಾರಕೀಶ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಇಂದು ನಿಧರಾಗಿದ್ದಾರೆ.

ಹುಣಸೂರಿನಲ್ಲಿ ಆಗಸ್ಟ್ 19,1942ರಂದು ದ್ವಾರಕೀಶ್ ಜನಿಸಿದ್ದಾರೆ. ದ್ವಾರಕೀಶ್‌ ಅವರ ತಂದೆ ಶಮಾರಾವ್ ಮತ್ತು ತಾಯಿ ಜಯಮ್ಮ ಅವರಾಗಿದ್ದಾರೆ. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದ ದ್ವಾರಕೀಶ್ ಅವರು, ಸಿಪಿಸಿ ಪಾಲಿಟೆಕ್ನಿಕ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಪದವಿ ಪಡೆದಿದ್ದರು. ಅದಾದ ಬಳಿಕ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು.

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನಟಿಸಿದ್ದಾರೆ. ಅವರು ಕನ್ನಡದ ಕುಳ್ಳ ಎಂದೇ ಖ್ಯಾತರಾಗಿದ್ದಾರೆ. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು. ದ್ವಾರಕೀಶ್ ಅವರು 1966ರಲ್ಲಿ ತುಂಗಾ ಬ್ಯಾನರ್ಸ್‌ನಡಿ ಮಮತೆಯ ಬಂಧನ ಎಂಬ ಸಿನಿಮಾದ ಸಹ ನಿರ್ಮಾಪಕರಾದರು. 1969ರಲ್ಲಿ ಡಾ. ರಾಜ್‌ಕುಮಾರ್‌ ಮತ್ತು ಭಾರತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ ಸೂಪರ್‌ಹಿಟ್‌ ಸಿನಿಮಾ ಮೇಯರ್‌ ಮುತ್ತಣ್ಣ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ಮಾಪಕರಾದರು.

ದ್ವಾರಕೀಶ್‌ ಅವರು ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಈ ಸಿನಿಮಾ ಬಹುದೊಡ್ಡ ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ್, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಕನ್ನಡ ಚಿತ್ರರಂಗದ ಮಹಾಸಾಹಸಿ ನಿರ್ಮಾಪಕರಲ್ಲಿ ಒಬ್ಬರಾದ ದ್ವಾರಕೀಶ್‌ ತಮ್ಮ ʻದ್ವಾರಕೀಶ್‌ ಚಿತ್ರʼ ಬ್ಯಾನರ್‌ ಅಡಿಯಲ್ಲಿ ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌ನಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ್ದಲ್ಲದೆ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...