Homeಕರ್ನಾಟಕ’ಲವ್ ಮಾಕ್‌ಟೈಲ್’ ಜೋಡಿ ಕೃಷ್ಣ-ಮಿಲನಾ ಮದುವೆ ಫಿಕ್ಸ್

’ಲವ್ ಮಾಕ್‌ಟೈಲ್’ ಜೋಡಿ ಕೃಷ್ಣ-ಮಿಲನಾ ಮದುವೆ ಫಿಕ್ಸ್

ನಿರ್ಮಾಪಕಿಯಾಗಿಯೂ ಬಡ್ತಿ ಪಡೆದಿರುವ ಮಿಲನಾ ನಾಗರಾಜ್‌, 'ಲವ್‌ ಮಾಕ್‌ಟೈಲ್-‌ 2' ಸಿನಿಮಾ ನಿರ್ಮಾಣದ ಜತೆ ನಟನೆಯಲ್ಲೂ ಬ್ಯುಸಿ ಆಗಿದ್ದಾರೆ. ಇಬ್ಬರ ನಟನೆಯ ಈ ಸಿನಿಮಾವೂ ಮುಂದಿನ ವರ್ಷ ತೆರೆ ಕಾಣಲಿದೆ.

- Advertisement -
- Advertisement -

ಕೊರೊನಾ, ಲಾಕ್‌ಡೌನ್‌ಗಳ ನಡುವೆಯೇ ಕನ್ನಡ ಚಿತ್ರರಂಗ, ಕಿರುತೆರೆಗಳಲ್ಲಿ ಮದುವೆ ಸಂಭ್ರಮಗಳು ನಡೆಯುತ್ತಲೇ ಇವೆ. ಇವುಗಳ ಸಾಲಿಗೆ ಮತ್ತೊಂದು ತಾರಾ ಜೋಡಿ ಸೇರ್ಪಡೆಯಾಗಲಿದ್ದಾರೆ. ’ಲವ್ ಮಾಕ್‌ಟೈಲ್’ ಜೋಡಿ ಹಸೆಮಣೆ ಏರಲು ರೆಡಿಯಾಗಿದ್ದಾರೆ.

ಹೌದು, ಕೆಲವು ವರ್ಷಗಳಿಂದ ಲವ್ ಬರ್ಡ್ಸ್‌ ಆಗಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ತಾರಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ. ಲವ್‌ ಮಾಕ್‌ಟೈಲ್ ಚಿತ್ರದಿಂದ ಖ್ಯಾತಿ ಪಡೆದ ಈ ಜೋಡಿ ತಾವು ಹೊಸಬಾಳಿಗೆ ಕಾಲಿಡಲು ಆರಿಸಿಕೊಂಡಿರುವ ದಿನ ಕೂಡ ವಿಶೇಷವಾಗಿದೆ.

2021 ರ ಪ್ರೇಮಿಗಳ ದಿನದಂದೇ ಕೃಷ್ಣ-ಮಿಲನಾ ಮದುವೆಯಾಗಲಿದ್ದಾರೆ. ತಮ್ಮ ಮದುವೆಗೆ ಫೆಬ್ರವರಿ 14ನೇ ಆಯ್ಕೆ ಮಾಡಿಕೊಂಡು ನಮ್ಮನ್ನು ಆಶೀರ್ವದಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ ಈ ಲವ್ ಮಾಕ್‌ಟೈಲ್‌ನ‌ ಲವ್ ಬರ್ಡ್ಸ್.

ಇದನ್ನೂ ಓದಿ: Serious Men’ Review: `ಸೀರಿಯಸ್ ಮೆನ್’ನ ಘನ ಜಾತೀಯತೆ!

ಚಾರ್ಲಿ ಕೃಷ್ಣ ಮತ್ತು ಮಿಲನಾ ನಾಗರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮದುವೆ ವಿಷಯವನ್ನು ಶೇರ್‌ ಮಾಡಿಕೊಂಡಿದ್ದಾರೆ. ಸುಂದರ ಚಿತ್ರದೊಂದಿಗೆ ನಮ್ಮ ಮದುವೆ ಎಂದು ಬರೆದಿರುವ ಬೋರ್ಡ್, ಕೇಕ್, ಫೆಬ್ರವರಿ 14 ಅಂತ ಬರೆದಿರುವ ಹಾರ್ಟ್​ ಶೇಪ್ಡ್​ ಟೆಂಪ್ಲೇಟ್ಸ್​​ ಜೊತೆ ಫೋಟೋ ಪೋಸ್ಟ್​ ಮಾಡಿದ್ದಾರೆ.

ನಟಿ ಜೊತೆಗೆ ನಿರ್ಮಾಪಕಿಯಾಗಿಯೂ ಬಡ್ತಿ ಪಡೆದಿರುವ ಮಿಲನಾ ನಾಗರಾಜ್‌, ‘ಲವ್‌ ಮಾಕ್‌ಟೈಲ್-‌ 2’ ಸಿನಿಮಾ ನಿರ್ಮಾಣದ ಜತೆ ನಟನೆಯಲ್ಲೂ ಬ್ಯುಸಿ ಆಗಿದ್ದಾರೆ. ಇಬ್ಬರ ನಟನೆಯ ಈ ಸಿನಿಮಾವೂ ಮುಂದಿನ ವರ್ಷ ತೆರೆ ಕಾಣಲಿದೆ. ಸದ್ಯ ಮಿಲನಾ ‘ಫಾರ್‌ ರಿಜಿಸ್ಪ್ರೇಷನ್’, ‘ಚತುಷ್ಪಥ’ ಇನ್ನೂ ಹೆಸರಿಡದ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...