Homeಮುಖಪುಟಅವಹೇಳನಕಾರಿ ಹೇಳಿಕೆ: ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲೀ ಖಾನ್

ಅವಹೇಳನಕಾರಿ ಹೇಳಿಕೆ: ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲೀ ಖಾನ್

- Advertisement -
- Advertisement -

ನಟಿ ತ್ರಿಷಾ ಕೃಷ್ಣನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದ ತಮಿಳಿನ ಖಳ ನಟ ಮನ್ಸೂರ್ ಅಲೀ ಖಾನ್ ಕೊನೆಗೂ ಕ್ಷಮೆ ಕೇಳಿದ್ದಾರೆ.

ನನ್ನ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ವಾಪಸ್‌ ಪಡೆಯಲ್ಲ, ಕ್ಷಮೆಯೂ ಕೇಳಲ್ಲ ಎಂದು ಮನ್ಸೂರ್ ಅಲೀ ಖಾನ್ ಹೇಳಿದ್ದರು. ಚೆನ್ನೈ ಪೊಲೀಸರು ಅವರ ವಿರುದ್ದ ಪ್ರಕರಣ ದಾಖಲಿಸಿ ವಶಕ್ಕೆ ಪಡೆದ ಬೆನ್ನಲ್ಲೇ ವರಸೆ ಬದಲಾಯಿಸಿದ್ದಾರೆ.

ನಟ ವಿಜಯ್​ ಮುಖ್ಯ ಪಾತ್ರದಲ್ಲಿ ಕಾಣಸಿಕೊಂಡಿರುವ ‘ಲಿಯೋ’ ಸಿನಿಮಾ ಇತ್ತೀಚೆಗೆ ಬಿಡುಗೆ ಆಗಿದೆ. ಈ ಸಿನಿಮಾದಲ್ಲಿ ವಿಜಯ್‌ ಪತ್ನಿಯಾಗಿ ತ್ರಿಷಾ ನಟಿಸಿದ್ದಾರೆ. ಸಿನಿಮಾದಲ್ಲಿ ಮನ್ಸೂರ್ ಅಲೀ ಖಾನ್‌ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮನ್ಸೂರ್, ನನಗೆ ತ್ರಿಷಾ ಅವರ ಜೊತೆ ಬೆಡ್‌ ರೂಂ ದೃಶ್ಯ ಸಿಗುತ್ತದೆ ಎಂದು ಭಾವಿಸಿದ್ದೆ. ಆದರೆ, ಈ ಸಿನಿಮಾದಲ್ಲಿ ಅದು ಇರಲಿಲ್ಲ. ನಾನು ಹಲವಾರು ಸಿನಿಮಾಗಳಲ್ಲಿ ಅತ್ಯಾಚಾರ ಪಾತ್ರಗಳನ್ನು ಮಾಡಿದ್ದೇನೆ. ಆ ರೀತಿಯ ಪಾತ್ರಗಳು ನನಗೇನು ಹೊಸತಲ್ಲ ಎಂದಿದ್ದರು. ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಸಿನಿಮಾ ರಂಗ ಸೇರಿದಂತೆ ಹಲವೆಡೆಯಿಂದ ಮನ್ಸೂರ್ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಚೆನ್ನೈ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನ್ಸೂರ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ ತ್ರಿಷಾ ಇನ್ಯಾವತ್ತೂ ಅವರ ಜೊತೆ ನಟಿಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ: 300 ರೂ.ಗಾಗಿ ಅಪ್ರಾಪ್ತ ಬಾಲಕನ ವಿವಸ್ತ್ರಗೊಳಿಸಿ ಥಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...