Homeಮುಖಪುಟಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

ಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಂಜಿತ್ ಮತ್ತು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ತಮ್ಮ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ, ಕೇರಳ ವಿಧಾನಸಭೆಗೆ ಎರಡು ಬಾರಿ ಆಯ್ಕೆಯಾಗಿರುವ ಸಿಪಿ (ಎಂ) ಶಾಸಕ ಸೇರಿದಂತೆ ಹಲವು ನಟರಿಂದ ಲೈಂಗಿಕ ದೌರ್ಜನ್ಯ ಎದುರಿಸಿದ್ದಾಗಿ ನಟಿ ಮಿನು ಮುನೀರ್ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಿನು ಮುನೀರ್, ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಖೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ಅವರನ್ನು ಹೆಸರಿಸಿದ್ದಾರೆ. ಮಿನು ಮುನೀರ್ ಅವರ ಆರೋಪಗಳಿಗೆ ಮುಖೇಶ್, ಜಯಸೂರ್ಯ ಮತ್ತು ಬಾಬು ಪ್ರತಿಕ್ರಿಯಿಸಿಲ್ಲ. ರಾಜು ಮಾತ್ರ ತನಿಖೆಗೆ ಸ್ವಾಗತ ಎಂದಿದ್ದಾರೆ.

“ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ತನಿಖೆಗೆ ನಿಯೋಜಿಸಲಾದ ರಾಜ್ಯ ಪೊಲೀಸ್ ತಂಡಕ್ಕೆ ನಾನು ದೂರು ನೀಡುತ್ತೇನೆ” ಎಂದು ಮಿನು ಮುನೀರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಕ್ಯಾಲೆಂಡರ್’ ಮತ್ತು 2011ರಲ್ಲಿ ತೆರೆಕಂಡ ‘ನಾಡಗಮೆ ಉಲಗಂ’ ಚಿತ್ರಗಳ ಚಿತ್ರೀಕರಣದ ಸಮಯದಲ್ಲಿ ಹೋಟೆಲ್‌ನಲ್ಲಿ ನಟರೊಬ್ಬರು ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಮಿನು ದೂರಿದ್ದಾರೆ.

“ಆತ (ನಟ) ನನ್ನ ಕೊಠಡಿಗೆ ಬಂದು ನನ್ನನ್ನು ಎಳೆದು ಬೆಡ್ ಮೇಲೆ ಹಾಕಿದರು. ಬಳಿಕ ಉತ್ತಮ ಅವಕಾಶಕ್ಕಾಗಿ ನಾನು ಪರಿಗಣಿಸಬೇಕಾದವರನ್ನು ಪರಿಗಣಿಸಬೇಕು ಎಂದು ಹೇಳಿದರು. ಬಳಿಕ ನಾನು ಅಲ್ಲಿಂದ ಹೊರಟೆ..ಅದಕ್ಕೂ ಮುನ್ನ ಕಾರಿನಲ್ಲಿ ಹೋಗುತ್ತಿದ್ದಾಗ ಮತ್ತೊಬ್ಬ ನಟ ರಾತ್ರಿ ನನ್ನ ಕೋಣೆಗೆ ಬರುವುದಾಗಿ ಹೇಳಿದ್ದರು. ಮರುದಿನ ರಾತ್ರಿ ಅವರು ಬಂದು ನನ್ನ ಕೋಣೆಯ ಬಾಗಿಲು ತಟ್ಟಿದ್ದರು” ಮಿನು ಹೇಳಿದ್ದಾರೆ.

2008ರಲ್ಲಿ ಇನ್ನೋರ್ವ ನಟ ದುರ್ವರ್ತನೆ ತೋರಿರುವುದಾಗಿ ಮಿನು ವಿವರಿಸಿದ್ದಾರೆ.

“ರಾಜ್ಯ ರಾಜಧಾನಿಯಲ್ಲಿ ಚಿತ್ರೀಕರಣದ ಸಮಯದಲ್ಲಿ, ನಾನು ವಿಶ್ರಾಂತಿ ಕೊಠಡಿಯಿಂದ ಹಿಂತಿರುಗುತ್ತಿದ್ದಾಗ, ನಟರೊಬ್ಬರು ನನ್ನನ್ನು ಹಿಂದಿನಿಂದ ತಬ್ಬಿ ಹಿಡಿದು ಮುತ್ತಿಕ್ಕಿದರು. ನಾನು ಅವರನ್ನು ತಳ್ಳಿ ಓಡಿಹೋದೆ. ನನ್ನನ್ನು ಅವರ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಆ ಆಹ್ವಾನವನ್ನು ತಿರಸ್ಕರಿಸಿದ ನಂತರ, ಅವರ ಕಡೆಯಿಂದ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮಿನು ಹೇಳಿಕೊಂಡಿದ್ದಾರೆ.

“2013ರಲ್ಲಿ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ನಾನು ಮುಂದಾಗಿದ್ದೆ. ಆಗ ಅರ್ಜಿ ನಮೂನೆ ಭರ್ತಿ ಮಾಡುವ ಬಗ್ಗೆ ತಿಳಿಯಲು ನಾನು ನಟರೊಬ್ಬರಿಗೆ ಫೋನ್‌ ಕರೆ ಮಾಡಿದಾಗ, ಅವರು ನನ್ನನ್ನು ತಮ್ಮ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಅವರ ಫ್ಲಾಟ್‌ನಲ್ಲಿ ಅರ್ಜಿ ನಮೂನೆ ತುಂಬುತ್ತಿದ್ದಾಗ ಅವರು ಹಿಂದಿನಿಂದ ನನ್ನ ಕತ್ತಿಗೆ ಮುತ್ತಿಟ್ಟರು. ನಾನು ಫ್ಲಾಟ್‌ನಿಂದ ಹೊರಗೆ ಓಡಿದೆ. ನನಗೆ ಇದುವರೆಗೆ ಸದಸ್ಯತ್ವ ಸಿಕ್ಕಿಲ್ಲ” ವಿವರಿಸಿದ್ದಾರೆ.

“ಈ ರೀತಿಯ ‘ಅನುಭವಗಳಿಂದ’ ನಾನು ಮಲಯಾಳಂ ಚಲನಚಿತ್ರೋದ್ಯಮ ತೊರೆದು ಚೆನ್ನೈಗೆ ಸ್ಥಳಾಂತರಗೊಳ್ಳುವಂತೆ ಆಯಿತು” ಎಂದು ಮಿನು ಮುನೀರ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ತನಿಖೆಗೆ ಪೊಲೀಸ್ ತಂಡ ರಚಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...