Homeಮುಖಪುಟತೆಲಂಗಾಣ ಸಚಿವೆ ವಿರುದ್ಧ ಮೊಕದ್ದಮೆ ಹೂಡಿದ ನಟ ನಾಗಾರ್ಜುನ!

ತೆಲಂಗಾಣ ಸಚಿವೆ ವಿರುದ್ಧ ಮೊಕದ್ದಮೆ ಹೂಡಿದ ನಟ ನಾಗಾರ್ಜುನ!

- Advertisement -
- Advertisement -

ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಅವರು ತೆಲಂಗಾಣದ ಕಾಂಗ್ರೆಸ್ ಸಚಿವೆ ಕೊಂಡಾ ಸುರೇಖಾ ವಿರುದ್ಧ ನಾಂಪಲ್ಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮತ್ತು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದ ಬಗ್ಗೆ ಸಚಿವೆ ಇತ್ತೀಚಿಗೆ ಗಂಭೀರ ಆರೋಪ ಮಾಡಿದ್ದು. ಮೊಕದ್ದಮೆ ದಾಖಲಿಸಿರುವ ಪ್ರತಿಯನ್ನು ನಾಗಾರ್ಜುನ ಅವರ ಮಗ ಚೈತನ್ಯ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ತೆಲಂಗಾಣ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಕಿನೇನಿ ಕುಟುಂಬದ ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಕೊಂಡಾ ಸುರೇಖಾ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ನಾಗಾರ್ಜುನ ತಮ್ಮ ಕಾನೂನು ದೂರಿನಲ್ಲಿ ಆರೋಪಿಸಿದ್ದಾರೆ. ಮೊಕದ್ದಮೆಯು ಕ್ರಿಮಿನಲ್ ಮಾನನಷ್ಟದ ಆರೋಪಗಳನ್ನು ಒಳಗೊಂಡಿದೆ.

ತೆಲಂಗಾಣದ ಅರಣ್ಯ ಮತ್ತು ಪರಿಸರ ಸಚಿವೆ ಕೊಂಡ ಸುರೇಖಾ ಅವರು ಬಿಆರ್‌ಎಸ್ ನಾಯಕ ಕೆಟಿಆರ್ ಮಾದಕ ವ್ಯಸನಿಯಾಗಿದ್ದು, ನಾಗ ಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ವಿಚ್ಛೇದನಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದರು. ತೆಲಂಗಾಣ ಸಚಿವೆ

ಇದನ್ನೂಓದಿ: Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

“ಮಾದಕ ವ್ಯಸನಿಯಾಗಿರುವ ಕೆಟಿಆರ್‌ ಅವರು ನಾಗಾರ್ಜುನ ಅವರ ಕನ್ವೆನ್ಷನ್ ಸೆಂಟರ್‌ವೊಂದನ್ನು ಕೆಡವದೆ ಇರಲು ಸಮಂತಾ ಅವರನ್ನು ಲೈಂಗಿಕವಾಗಿ ಬಯಸಿದ್ದರು. ಅದಕ್ಕೆ ಒಪ್ಪಿದ್ದ ನಾಗಾರ್ಜುನ ಅವರು ಸಮಂತಾ ಅವರನ್ನು ಕೆಟಿಆರ್ ಬಳಿ ತೆರಳಲು ಕೇಳಿಕೊಂಡಿದ್ದರು. ಆದರೆ ಇದಕ್ಕೆ ಒಪ್ಪದ ಸಮಂತ ಅವರು ವಿಚ್ಛೇದನ ಪಡೆದಿದ್ದರು” ಎಂದು ಸಚಿವೆ ಆರೋಪಿಸಿದ್ದರು. ಸಚಿವರ ಈ ಹೇಳಿಕೆ ತೆಲಂಗಾಣ ರಾಜಕೀಯದಲ್ಲಿ ಭಾರಿ ವಿವಾದ ಉಂಟಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಚಿವರು, ಕೆಟಿಆರ್, ಅಕ್ಕಿನೇನಿ ಕುಟುಂಬ ಮತ್ತು ಸಮಂತಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಕೆಟಿಆರ್ ಅವರ ಒಳಗೊಳ್ಳುವಿಕೆಯಿಂದಾಗಿ ತೆಲುಗು ಚಿತ್ರರಂಗದ ಅನೇಕ ಮಹಿಳಾ ನಟರು ತಮ್ಮ ವೃತ್ತಿಜೀವನವನ್ನು ಮೊಟಕುಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಇದನ್ನೂಓದಿ: ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ಸಚಿವರ ಹೇಳಿಕೆಯನ್ನು ನಾಗಾರ್ಜುನ ಖಂಡಿಸಿದ್ದು, ಅವರ ಹೇಳಿಕೆಗಳು ಸಂಪೂರ್ಣವಾಗಿ “ಅಪ್ರಸ್ತುತ ಮತ್ತು ಸುಳ್ಳು” ಎಂದು ಪ್ರತಿಪಾದಿಸಿದ್ದಾರೆ. ಈ ವೇಳೆ ಅವರು ಜನರ ಖಾಸಗಿತನವನ್ನು ಗೌರವಿಸುವಂತೆ ಸಚಿವರನ್ನು ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಸಚಿವೆ ಶ್ರೀಮತಿ ಕೊಂಡ ಸುರೇಖಾ ಅವರ ಹೇಳಿಕೆಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ. ರಾಜಕೀಯದಿಂದ ದೂರವಿರುವ ಚಲನಚಿತ್ರ ತಾರೆಯರ ಜೀವನವನ್ನು ನಿಮ್ಮ ವಿರೋಧಿಗಳನ್ನು ಟೀಕಿಸಲು ಬಳಸಬೇಡಿ. ದಯವಿಟ್ಟು ಇತರರ ಖಾಸಗಿತನವನ್ನು ಗೌರವಿಸಿ” ಎಂದು ನಟ ತೆಲುಗಿನಲ್ಲಿ ಟ್ವೀಟ್ ಮಾಡಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ 2021 ರಲ್ಲಿ ತಮ್ಮ ವಿಚ್ಛೇದನವನ್ನು ಸಾರ್ವಜನಿಕವಾಗಿ ಘೋಷಿಸಿದ್ದರು, ನಂತರ ಅವರು ವಿಚ್ಛೇದನ ಪಡೆದರು. ಅದರ ನಂತರ ನಾಗ ಚೈತನ್ಯ ಅವರು ಈ ವರ್ಷದ ಆಗಸ್ಟ್‌ನಲ್ಲಿ ನಟಿ ಸೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...