Homeಮುಖಪುಟಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿ ಪಕ್ಷಕ್ಕೆ ರಾಜೀನಾಮೆ ನೀಡಿದ ನಟಿ ಗೌತಮಿ

ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿ ಪಕ್ಷಕ್ಕೆ ರಾಜೀನಾಮೆ ನೀಡಿದ ನಟಿ ಗೌತಮಿ

- Advertisement -
- Advertisement -

ತಮಿಳುನಾಡು ಬಿಜೆಪಿಯ ಹಿರಿಯ ನಾಯಕಿ ಮತ್ತು ಖ್ಯಾತ ನಟಿ ಗೌತಮಿ ತಾಡಿಮಲ್ಲ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ ನಟಿ ಗೌತಮಿ ತಾಡಿಮಲ್ಲ, 2021ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದ ಪಕ್ಷವು ಕೊನೆಯ ಕ್ಷಣದಲ್ಲಿ ಕೈಬಿಟ್ಟಿತ್ತು. ಆದರೂ ಬಿಜೆಪಿಗೆ ಬದ್ಧವಾಗಿದ್ದೆ ಎಂದು ಹೇಳಿದ್ದಾರೆ.

ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಸೇರಿದಂತೆ  ಹಲವರಿಗೆ ತನ್ನ ರಾಜೀನಾಮೆ ಪತ್ರವನ್ನು ಅವರು ಟ್ಯಾಗ್ ಮಾಡಿದ್ದಾರೆ.

ವ್ಯಕ್ತಿಯೊಬ್ಬರು ನನಗೆ ವಂಚಿಸಿದ್ದಾರೆ. ಈ ವೇಳೆ ನನಗೆ ಪಕ್ಷ ಮತ್ತು ನಾಯಕರಿಂದ ಯಾವುದೇ ಬೆಂಬಲವಿಲ್ಲ ಸಿಕ್ಕಿಲ್ಲ. ಬದಲಾಗಿ ನನ್ನ ನಂಬಿಕೆಗೆ ದ್ರೋಹ ಬಗೆದ ಮತ್ತು ನನಗೆ ಮೋಸ ಮಾಡಿದ ವ್ಯಕ್ತಿಗೆ ಅವರು ಸಹಾಯ ಮಾಡಿದ್ದಾರೆ ಮತ್ತು ಬೆಂಬಲಿಸುತ್ತಿದ್ದಾರೆ ಎಂದು ನನಗೆ ತಿಳಿದಿದೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ವಂಚನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಿರುವುದಾಗಿ ಹೇಳಿದ ನಟಿ, ಸಿಎಂ ಎಂಕೆ ಸ್ಟ್ಯಾಲಿನ್‌ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವುದಾಗಿ ಹೇಳಿದ್ದಾರೆ.

2021ರ ಚುನಾವಣೆಗೆ ರಾಜಪಾಳ್ಯಂ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಾ ಸಿದ್ಧತೆ ಮಾಡುವಂತೆ ನನಗೆ ಸೂಚಿಸಲಾಗಿತ್ತು. ನಾನು ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ್ದೇನೆ. ಆದರೆ ಕೊನೆಯ ವೇಳೆ ನನಗೆ ಟಿಕೆಟ್‌ ಕೊಟ್ಟಿಲ್ಲ. ಆದರೂ ಪಕ್ಷದ ಜೊತೆ ಬದ್ಧತೆ ಉಳಿಸಿಕೊಂಡಿದ್ದೆ. 25 ವರ್ಷಗಳಿಂದ ಬಿಜೆಪಿ ಜೊತೆಗೆ ಇದ್ದರೂ ಯಾವುದೇ ಬೆಂಬಲ ನೀಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...