Homeಮುಖಪುಟನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಾರು ಅಪಘಾತದಲ್ಲಿ ನಾನು ಸುರಕ್ಷಿತವಾಗಿದ್ದೇನೆ, ನನ್ನ ಪತಿ ನಂಬಿರುವ ಮುರುಗನ್ ದೇವರು ನಮ್ಮನ್ನು ಉಳಿಸಿದ್ದಾರೆ ಎಂದು ನಟಿ ಖುಷ್ಬೂ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇತ್ತಿಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ತಮಿಳುನಾಡು ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬಿಜೆಪಿಯ ವೆಟ್ರಿವೆಲ್ ಯಾತ್ರೆಯಲ್ಲಿ ಭಾಗವಹಿಸಲು ನಟಿ ಕಡಲೂರಿನ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬುಧವಾರ ಬೆಳಿಗ್ಗೆ ಮೇಲ್‌ಮರವತ್ತೂರ್ ಸಮೀಪ ಅಪಘಾತ ಸಂಭವಿಸಿದೆ.

ಟ್ಯಾಂಕರ್‌ ಒಂದು ತಾನು ಪ್ರಯಾಣಿಸುತ್ತಿದ್ದ ಕಾರಿಗೆ ಗುದ್ದಿದೆ ಎಂದು ಹಾನಿಗೊಳಗಾದ ತನ್ನ ಕಾರಿನ ಚಿತ್ರಗಳನ್ನು ಖುಷ್ಬೂ ಟ್ವೀಟ್ ಮಾಡಿದ್ದು, ತಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಖುಷ್ಬೂ ಕಡಲೂರು ಕಡೆಗೆ ಪ್ರಯಾಣ ಮುಂದುವರಿಸಿದ್ದಾರೆ.

 

ಖುಷ್ಬೂ ತನ್ನ ಟ್ವಿಟ್ಟರ್ ಖಾತೆಯಲ್ಲಿ ಭಾರಿ ಹಾನಿಗೊಳಗಾದ ತಮ್ಮ ಕಾರಿನ ಚಿತ್ರಗಳನ್ನು ಹಂಚಿಕೊಂಡು,  “ಮೇಲ್‌ಮರವತ್ತೂರ್ ಬಳಿ ಕಾರು ಅಪಘಾತ ಸಂಭವಿಸಿದೆ..ಒಂದು ಟ್ಯಾಂಕರ್ ಒಂದು ನಮ್ಮ ಕಾರಿಗೆ ಗುದ್ದಿದೆ. ನಿಮ್ಮ ಆಶೀರ್ವಾದ ಮತ್ತು ದೇವರ ಅನುಗ್ರಹದಿಂದ ನಾನು ಸುರಕ್ಷಿತ. ವೆಟ್ರಿವೇಲ್ ಯಾತ್ರೆಯಲ್ಲಿ ಭಾಗವಹಿಸಲು ಕಡಲೂರಿನ ಕಡೆಗೆ ನನ್ನ ಪ್ರಯಾಣವನ್ನು ಮುಂದುವರಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಸೇರಿಸಿದ ಖುಷ್ಬೂ ಅವರು ದೇವರ ಮೇಲಿನ ನಂಬಿಕೆಯ ಬಗ್ಗೆಯೂ ಬರೆದಿದ್ದಾರೆ. “ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನನ್ನ ಪತಿ ನಂಬಿರುವ ಮುರುಗನ್ ದೇವರು ನಮ್ಮನ್ನು ಉಳಿಸಿದ್ದಾರೆ” ಎಂದು ಹೇಳಿದ್ದಾರೆ.

Image
PC: Twitter@KhushbuSundar

ಬಿಜೆಪಿಯ ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಕೂಡ “ಅಪಘಾತ ನಡೆದ ಬಗ್ಗೆ ನನಗೆ ಆಘಾತವಾಗಿದೆ. ಮುರುಗನ್ ದೇವರ ಕೃಪೆಯಿಂದ ನೀವು ಸುರಕ್ಷಿತರಾಗಿದ್ದೀರಿ ಎಂದು ನನಗೆ ಸಮಾಧಾನವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ಮೆರವಣಿಗೆಯಾಗಿದ್ದು, ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಿರುತ್ತಣಿ ದೇವಸ್ಥಾನದಿಂದ ತಮಿಳುನಾಡಿನ ತಿರುಚೆಂದೂರು ದೇವಸ್ಥಾನದವರೆಗೆ ನಡೆಯಲಿದೆ. ಸುಬ್ರಹ್ಮಣ್ಯ ಸ್ವಾಮಿಯ (ಮುರುಗ) ಒಟ್ಟು ಆರು ದೇವಸ್ಥಾನಗಳಿಗೆ ಭಕ್ತರು ಭೇಟಿ ನೀಡುತ್ತಾರೆ.

2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ. ಈ ಮೆರವಣಿಗೆಯಲ್ಲಿ ಪಕ್ಷದ ಸದಸ್ಯರು ರಾಜ್ಯಾದ್ಯಂತ ಮುರುಗನ್ ದೇವಾಲಯಗಳಿಗೆ ಭೇಟಿ ನೀಡಲು ಯೋಜಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಯಾತ್ರೆಗೆ ಅನುಮತಿ ನೀಡಿಲ್ಲ.


ಇದನ್ನೂ ಓದಿ: ರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...