Homeಮುಖಪುಟಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ-ಜನಸೇನಾ ಪಕ್ಷಗಳ ಮೈತ್ರಿ ಘೋಷಿಸಿದ ಪವನ್ ಕಲ್ಯಾಣ್

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ-ಜನಸೇನಾ ಪಕ್ಷಗಳ ಮೈತ್ರಿ ಘೋಷಿಸಿದ ಪವನ್ ಕಲ್ಯಾಣ್

- Advertisement -
- Advertisement -

ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರು ತಮ್ಮ ಜನಸೇನಾ ಪಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.

371 ಕೋಟಿ ರೂ. ಹಗರಣದ ಆರೋಪದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ ನಂತರ ಅವರನ್ನು ಎರಡು ವಾರಗಳ ಕಾಲ ರಾಜಮಂಡ್ರಿ ಜೈಲಿಗೆ ಕಳುಹಿಸಲಾಗಿದೆ.

ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಟಿಡಿಪಿ ಮುಖ ಸ್ಮಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪವನ್ ಕಲ್ಯಾಣ್, ”ಚುನಾವಣೆಯಲ್ಲಿ ಮೈಎಸ್‌ಆರ್‌ಸಿಪಿ ಎದುರು ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಲಿವ ಎಂದು ಜನಸೇನಾ ಮುಖ್ಯಸ್ಯ ಹಾಗೂ ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

”ವೈಆಸ್‌ಆರ್‌ಸಿಪಿ ದುರಾಡಳಿತವನ್ನು ಸಹಿಸಲು ಸಾಧ್ಯವಿಲ್ಲ, ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲಾಗುವುದು” ಎಂದರು.

ಈ ವೇಳೆ ನಾಯ್ಡು ಅವರ ಪುತ್ರ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಮತ್ತು ಹಿಂದೂಪುರ ಶಾಸಕ ಮತ್ತು ನಾಯ್ಕು ಅವರ ಭಾವ ನಂದಮೂರಿ ಬಾಲಕೃಷ್ಣ ಅವರು ಇದ್ದರು.

”ಮುಂಬರುವ ಚುನಾವಣೆಯಲ್ಲಿ ಜನಸೇನೆ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ನಾನು ಇಂದು ನಿರ್ಧಾರ ತೆಗೆದುಕೊಂಡಿದ್ದೇನೆ. ಇದು ನಮ್ಮ (ಅವರ ಪಕ್ಷದ) ರಾಜಕೀಯ ಭವಿಷ್ಯದ ಬಗ್ಗೆ ಅಲ್ಲ… ಬದಲಿಗೆ ಆಂಧ್ರಪ್ರದೇಶದ ಭವಿಷ್ಯದ ವಿಚಾರವಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ” ಎಂದು ಪವಣ್ ಕಲ್ಯಾಣ್ ಹೇಳಿದರು.

ಭಾನುವಾರ ಚಂದ್ರಬಾಬು ನಾಯ್ಡು ಅವರನ್ನು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮಂಗಳವಾರ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ಭದ್ರತಾ ಕಾಳಜಿಯನ್ನು ಉಲ್ಲೇಖಿಸಿದ ನಂತರ ಅವರ ಪತ್ನಿಯ ಗೃಹ ಬಂಧನದ ಮನವಿಯನ್ನು ತಿರಸ್ಕರಿಸಿತು.

ನಾಯ್ಡು ಈ ಪ್ರಕರಣದಲ್ಲಿ ಪ್ರಾಥಮಿಕ ಆರೋಪಿಯಾಗಿದ್ದಾರೆ.  ಅವರನ್ನು ಆರೋಪಿ ಸಂಖ್ಯೆ 37 ಎಂದು ಅಪರಾಧ ತನಿಖಾ ಇಲಾಖೆಯು ಪಟ್ಟಿ ಮಾಡಿತ್ತು.

ಈ ಪ್ರಕರಣದಲ್ಲಿ ರಾಜ್ಯಕ್ಕೆ ₹ 300 ಕೋಟಿಗೂ ಹೆಚ್ಚು ನಷ್ಟವನ್ನು ಉಂಟುಮಾಡಿದೆ ಎಂದು ಆರೋಪಿಸಲಾಗಿದೆ. ಖಾಸಗಿ ಸಂಸ್ಥೆಗಳಿಂದ ಯಾವುದೇ ಖರ್ಚು ಮಾಡುವ ಮೊದಲು, ಆಗಿನ ಸರ್ಕಾರವು ₹ 371 ಕೋಟಿಗಳನ್ನು ಮುಂಗಡವಾಗಿ ಒದಗಿಸಿದೆ ಎಂದು ಸಿಐಡಿ ಹೇಳಿದೆ.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ವಿರುದ್ಧದ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...