Homeಮುಖಪುಟ17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

- Advertisement -
- Advertisement -

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿ ನಡೆಯಿತು.

ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ
ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ ಎಂದು ತಿಳಿಸಿದರು.

ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೋಲಿಸ್‌ನ 11 ಸ್ಕ್ರೀನ್‌ಗಳಲ್ಲಿ ಚಿತ್ರೋತ್ಸವದ ಚಿತ್ರಗಳ ಪ್ರದರ್ಶನ ನಡೆಯಲಿದೆ. ಈಗಾಗಲೇ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ ಎಂದು ಹೇಳಿದರು.

ಲುಲು ಮಾಲ್ ಜೊತೆಗೆ, ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ ಎಂದು ಸಿಎಂ ಮಾಹಿತಿ ನೀಡಿದರು.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ದೇಶಗಳ 200ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನ

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶಗಳ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ) ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್) ಲೊಕಾರ್ನೂ (ಸ್ವಿಟ್ಜರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ ಎಂದು ಸಿಎಂ ವಿವರಿಸಿದರು.

ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳೂ ಕೂಡ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಪೋಲಿಷ್ ಕಲ್ಚರಲ್ ಸೆಂಟರ್ ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಹಾಗೆಯೇ ಪೋಲಿಷ್ ಕಲ್ಚರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective) ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ. ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ. ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ ಎಂದು ಸಿಎಂ ತಿಳಿಸಿದರು.

2025-26ನೇರ ಸಾಲಿನ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸಲು 7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ,
ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....