ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ‘ದಾರಿತಪ್ಪಿದ ಮಗ’ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಮಂಡ್ಯದ ರೈತ ಸಭಾಗಂಣದಲ್ಲಿ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ ಆಯೋಜಿಸಿದ್ದ ‘ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶ’ ದಲ್ಲಿ ಮಾತನಾಡಿದ ಅವರು, “ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳ ಮಟ್ಟಕ್ಕೆ ಇಳಿದು ಮಾತನಾಡಲು ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ”? ಎಂದು ಪ್ರಶ್ನಿಸಿದರು.
ಒಂದೆಡೆ..
ಗ್ಯಾರಂಟಿಗಳಿಂದಾಗಿ
ಸ್ವಲ್ಪವಾದರೂ
ದಾರಿಗೆ ಬಂದ
ಬಡ ಕುಟುಂಬಗಳು…ಮತ್ತೊಂದೆಡೆ…
ಪೂರ್ತಿಯಾಗಿ
ದಿಕ್ಕೆಟ್ಟ,
ದಾರಿಗೆಟ್ಟ
ಕುಮಾರಸ್ವಾಮಿಗಳು..-ಶಿವಸುಂದರ್
ಹೇಳಿ,
“ದಾರಿ ತಪ್ಪಿದ ಮಗ” ಯಾರು ?? #justasking pic.twitter.com/jGctH4wd8y— Prakash Raj (@prakashraaj) April 14, 2024
“ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದರು. ಆ ಕಾರಣಕ್ಕೆ, ಮಂಡ್ಯದ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ‘ಸರಿಯಾದ ಮಗ ಯಾರು, ಕಳ್ಳನನ್ನ ಮಗ ಯಾರು’ ಎಂಬುವುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು” ಎಂದು ಕರೆ ನೀಡಿದರು.
“ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ಧಾರೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ? ಬರಗಾಲದಲ್ಲಿ ಯಾಕೆ ಬರಲಿಲ್ಲ? ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು.
ಒಮ್ಮೆ ಯೋಚಿಸಿ 🙏🏿🙏🏿🙏🏿 #justasking pic.twitter.com/Zx7VK06nD2
— Prakash Raj (@prakashraaj) April 14, 2024
“ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ, ಏಪ್ರಿಲ್ ಬಂದರೂ ಬರ ಪರಿಹಾರ ನೀಡಿಲ್ಲ. ಪರಿಹಾರ ಬಿಡುಗಡೆಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರಕ್ಕೆ ನೋಟಿಸ್ ನೀಡಲು ಮುಂದಾದಾಗ, ನೋಟಿಸ್ ಕೊಡ್ಬೇಡಿ ಮಾನ ಮರ್ಯಾದೆ ಹೋಗುತ್ತೆ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ನಾಟಕ ಯಾಕೆ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.
ಪ್ರಗತಿಪರ ಚಿಂತಕ ಡಾ.ವಾಸು ಹಾಗೂ ಭೂಮಿ ಮತ್ತು ವಸತಿ ಹಕ್ಕುಗಳ ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ವಿಚಾರ ಮಂಡನೆ ಮಾಡಿದರು. ಸಿರಿಮನೆ ನಾಗರಾಜು, ಪ್ರಗತಿಪರ ವಕೀಲ ಬಿ.ಟಿ.ವಿಶ್ವನಾಥ್ ಅಧ್ಯಕತೆ ವಹಿಸಿದ್ದರು. ಕರ್ನಾಟಕ ಜನಶಕ್ತಿ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಕೃಷ್ಣ ಪ್ರಕಾಶ್, ಸಿಐಟಿಯು ಮುಖಂಡರಾದ ಸಿ.ಕುಮಾರಿ, ಪತ್ರಕರ್ತ ಎನ್.ನಾಗೇಶ್, ರೈತಸಂಘದ ಲತಾ ಶಂಕರ್, ಕರ್ನಾಟಕ ಜನಶಕ್ತಿಯ ಸಿದ್ದರಾಜು, ಪೂರ್ಣಿಮಾ, ಜಗದೀಶ್ ನಗರಕರೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಭದ್ರಾ ಮೇಲ್ದಂಡೆ ಯೋಜನೆಯ ₹5,300 ಕೋಟಿ ಎಲ್ಲಿ? ಪ್ರಧಾನಿ ಮೋದಿಗೆ ಸಚಿವ ಕೃಷ್ಣ ಬೈರೇಗೌಡ ಪ್ರಶ್ನೆ


