Homeಮುಖಪುಟಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

ಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

- Advertisement -
- Advertisement -

ಶುಕ್ರವಾರ ಹೃದಯಘಾತದಿಂದ ನಿಧನರಾದ ಮೇರು ನಟ, ಕನ್ನಡಿಗರ ಕಣ್ಮಣಿ ಪುನೀತ್‌ ರಾಜ್‌ಕುಮಾರ್‌ ಭೂಮಿ ತಾಯಿಯ ಗರ್ಭ ಸೇರಿದರು. ಕನ್ನಡಿಗರ ಹೃದಯವಾಸಿ ಭೂಮಿ ತಾಯಿಯನ್ನು ಅಪ್ಪಿದರು.

ಕಂಠೀರವ ಸ್ಟುಡಿಯೊದಲ್ಲಿ ಅವರ ಅಂತ್ಯಕ್ರಿಯೆ ನೆರವೇರುತ್ತಿದೆ. ಡಾ.ರಾಜ್‌ಕುಮಾರ್‌, ಪಾರ್ವತಮ್ಮ ರಾಜ್‌ಕುಮಾರ್‌ ಅವರ ಸಮಾಧಿ ಕಂಠೀರವ ಸ್ಟುಡಿಯೊದಲ್ಲೇ ಇದ್ದು, ತಂದೆ- ತಾಯಿಯೊಂದಿಗೆ ಪುನೀತ್‌ ರಾಜ್‌ಕುಮಾರ್‌ ಚಿರನಿದ್ರೆಗೆ ಜಾರಿದರು.

PC: Prajavani

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇರಿಸಲಾಗಿತ್ತು. ಪ್ರೀತಿಯ ಅಪ್ಪುವನ್ನು ನೋಡಲು ರಾಜ್ಯ ಹಾಗೂ ದೇಶದ ಮೂಲೆಮೂಲೆಗಳಿಂದ ಜನಸಾಗರವೇ ಹರಿದುಬಂದಿತ್ತು.

ಭಾನುವಾರ ಮುಂಜಾನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಕೈಗೊಳ್ಳಲಾಯಿತು. ಚಿತ್ರರಂಗದ ತಾರೆಯರು ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ದರ್ಶನ ಪಡೆದರು.

ಪುನೀತ್‌ ಅವರ ಇಬ್ಬರು ಪುತ್ರಿಯರು ತಮ್ಮ ತಾಯಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಅವರನ್ನು ಅಪ್ಪಿ ಶೋಕತಪ್ತರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್‌ ಅವರ ಪಾರ್ಥೀವ ಶರೀರಕ್ಕೆ ಮುತ್ತಿಟ್ಟು ಭಾವುಕರಾದರು.

ಪೊಲೀಸ್‌ ಬ್ಯಾಂಡ್‌ ಮೂಲಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಮೂರು ಸುತ್ತು ಗುಂಡು ಸಿಡಿಸಿ ಗೌರವ ಸಲ್ಲಿಸಲಾಯಿತು. ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ಈಡಿಗ ಸಮುದಾಯದ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಕೈಗೊಳ್ಳಲಾಯಿದೆ. ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ವಿನಯ್‌ ಅವರು ವಿಧಿವಿಧಾನವನ್ನು ಪೂರೈಸುತ್ತಿದ್ದಾರೆ.

ಪುನೀತ್‌ ಅವರ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ಅವರ ಪತ್ನಿ ಅಶ್ವಿನಿ, ಪುತ್ರಿ ದೃತಿ, ವಂದಿತಾ ಅವರಿಗೆ ಹಸ್ತಾಂತರಿಸಿದರು.

ಅಡ್ಡಪಲ್ಲಕ್ಕಿಯಲ್ಲಿ ತರಲಾಗಿದ್ದ ಪಾರ್ಥೀವ ಶರೀರವನ್ನು ಪ್ರದಕ್ಷಿಣೆ ಹಾಕಲಾಯಿತು. ಕಂಠೀರವ ಸ್ಟುಡಿಯೊದಲ್ಲಿ ಅತೀವ ದುಃಖ ಮಡುಗಟ್ಟಿತ್ತು. ಡಾ.ರಾಜ್‌ಕುಮಾರ್‌ ಕುಟುಂಬದ ಎಲ್ಲರೂ ಅಂತಿಮ ನಮನ ಸಲ್ಲಿಸಿದರು. ಪ್ರೀತಿಯ ಸಹೋದರನನ್ನು ನೋಡುತ್ತ ಡಾ.ಶಿವರಾಜ್‌ಕುಮಾರ್‌ ಬಿಕ್ಕಿ ಬಿಕ್ಕಿ ಅತ್ತರು.

ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅವರ ಪತ್ನಿ ಮಂಗಳಾ, ಮಗ ಯುವ ರಾಜ್‌ಕುಮಾರ್, ಶ್ರೀಮುರಳಿ, ವಿಜಯ ರಾಘವೇಂದ್ರ ಸೇರಿದಂತೆ ರಾಜ್ ಕುಟುಂಬದ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ನಟರಾದ ಉಪೇಂದ್ರ, ರವಿಚಂದ್ರನ್, ಯಶ್, ಜಗ್ಗೇಶ್, ಡಾಲಿ ಧನಂಜಯ, ದುನಿಯಾ ವಿಜಯ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ, ಆರಗ ಜ್ಞಾನೇಂದ್ರ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.


ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...