Homeಮುಖಪುಟನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

- Advertisement -
- Advertisement -

ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಗ್ಯಾಂಗ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಗುತ್ತಿಗೆ ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಆರೋಪಿಗಳು ಪಾಕಿಸ್ತಾನದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳಾದ ಎಕೆ 47, ಎಕೆ 92, ಎಂ 16 ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾದ ಟರ್ಕಿ ನಿರ್ಮಿತ ಜಿಗಾನಾ ಆಯುಧವನ್ನು ಖರೀದಿಸಲು ಸಿದ್ಧತೆ ನಡೆಸಿದ್ದರು ಎಂದು ಅವರು ಹೇಳಿದ್ದಾರೆ.

“ಆರೋಪಿಗಳು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರನ್ನು ನೇಮಿಸಿಕೊಂಡಿದ್ದಾರೆ. ಅವರೆಲ್ಲರೂ ಇದೀಗ ಪುಣೆ, ರಾಯಗಡ, ನವಿ ಮುಂಬೈ, ಥಾಣೆ ಮತ್ತು ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್ ಬಳಿ ಕೊಲ್ಲಲು ಯೋಜಿಸಿದ್ದರು ಎಂದು ನವಿ ಮುಂಬೈ ಪೊಲೀಸರು ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಲ್ಮಾನ್ ಖಾನ್ ಹತ್ಯೆಗಾಗಿ ₹ 25 ಲಕ್ಷದ ಒಪ್ಪಂದ ಮಾಡಲಾಗಿದೆ ಎಂದು ಹೇಳಿರುವ ಪೊಲೀಸರು ಆರೋಪ ಪಟ್ಟಿಯಲ್ಲಿ ಐದು ಜನರನ್ನು ಹೆಸರಿಸಿದೆ. ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಗ್ಯಾಂಗ್ ಗುತ್ತಿಗೆಯನ್ನು ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಬಾಂದ್ರಾ ಮನೆ, ಪನ್ವೆಲ್ ಫಾರ್ಮ್‌ಹೌಸ್ ಮತ್ತು ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಸುಮಾರು 60 ರಿಂದ 70 ಜನರು ಸಲ್ಮಾನ್ ಖಾನ್ ಅವರ ಚಲನವಲನವನ್ನು ಗಮನಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸಲ್ಮಾನ್ ಖಾನ್ ಅವರನ್ನು ಕೊಲ್ಲುವ ಯೋಜನೆಯನ್ನು ಆಗಸ್ಟ್ 2023 ಮತ್ತು ಏಪ್ರಿಲ್ 2024 ರ ನಡುವೆ ರೂಪಿಸಲಾಗಿತ್ತು ಎಂದು ಪೊಲೀಸರು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ. ಗುರುವಾರ ಹರಿಯಾಣದ ಪಾಣಿಪತ್‌ನಿಂದ ಬಂಧಿತನಾಗಿದ್ದ ಸುಖ್ಖಾ, ನಿಯೋಜಿತ ಶೂಟರ್ ಅಜಯ್ ಕಶ್ಯಪ್ ಅಲಿಯಾಸ್ ಎಕೆ ಮತ್ತು ಪಿತೂರಿಯಲ್ಲಿ ಭಾಗಿಯಾಗಿರುವ ಇತರ ನಾಲ್ವರಿಗೆ ಹತ್ಯೆಯನ್ನು ನಿಯೋಜಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಸಲ್ಮಾನ್ ಖಾನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಶೂಟರ್‌ಗಳು ಕನ್ಯಾಕುಮಾರಿಯಿಂದ ದೋಣಿಯಲ್ಲಿ ಶ್ರೀಲಂಕಾಕ್ಕೆ ಪ್ರಯಾಣಿಸಿ ನಂತರ ಭಾರತೀಯ ತನಿಖಾ ಸಂಸ್ಥೆಗಳು ತಲುಪಲು ಸಾಧ್ಯವಾಗದ ದೇಶಕ್ಕೆ ಪರಾರಿಯಾಗಲು ಯೋಜಿಸಿದ್ದರು ಎಂದು ಕೂಡಾ ಆರೋಪಪಟ್ಟಿ ಹೇಳುತ್ತದೆ.

ಬಾಂದ್ರಾದಲ್ಲಿರುವ ಸಲ್ಮಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಘಟನೆಯನ್ನು ಪೊಲೀಸರು ತನಿಖೆ ನಡೆಸಿದಾಗ ಸಲ್ಮಾನ್ ಖಾನ್ ಅವರನ್ನು ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿ ಗುರಿಯಾಗಿಸುವ ಸಂಚು ಬಯಲಾಗಿತ್ತು. ಈ ನಡುವೆ, ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆಯ ನಂತರ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...